Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...