Homeಮುಖಪುಟಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

ಗಾಝಾ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಹಿಂದಿರುಗಿಸಿದ ಸಂದೀಪ್ ಪಾಂಡೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಅಮೆರಿಕದ ಬೆಂಬಲವನ್ನು ವಿರೋಧಿಸಿ ಅಮೆರಿಕದ ಜೊತೆ ಸಂಯೋಜಿತವಾಗಿರುವ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ ಅವರು ಘೋಷಿಸಿದ್ದು, ಅಮೆರಿಕ ವಿರುದ್ದ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

ಸಂದೀಪ್ ಪಾಂಡೆ ಅವರು ನಿನ್ನೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದು, ಇದರ ಜೊತೆಗೆ  ಅಮೆರಿಕದಲ್ಲಿ ಪಡೆದ ಇತರ ಪ್ರಶಸ್ತಿ ಮತ್ತು ಪದವಿಗಳನ್ನು ಹಿಂದಿರುಗಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ 2 ಎಂಎಸ್ಸಿ ಪದವಿಗಳನ್ನು, ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂದೀಪ್‌ ಪಾಂಡೆ, ಇರಾಕ್‌ ಮೇಲಿನ ದಾಳಿಯ ವಿರುದ್ಧ ಮನಿಲಾದಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಹೊರಗೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸುವ ನನ್ನ ನಿರ್ಧಾರದಿಂದಾಗಿ ನಾನು 2002ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಸ್ವೀಕರಿಸಿದಾಗ ವಿವಾದ ಸೃಷ್ಟಿಯಾಯ್ತು. ಮ್ಯಾಗ್ಸೆಸೆ ಫೌಂಡೇಶನ್‌ನ ಅಂದಿನ ಅಧ್ಯಕ್ಷರು ಪ್ರತಿಷ್ಠಾನದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂಬ ನೆಪದಲ್ಲಿ ನನ್ನನ್ನು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಪ್ರಯತ್ನಿಸಿದ್ದರು. 1999ರಲ್ಲಿ ಪೋಕರನ್‌ನಿಂದ ಸಾರನಾಥದವರೆಗೆ ಜಾಗತಿಕ ಪರಮಾಣು ನಿಶ್ಯಸ್ತ್ರೀಕರಣಕ್ಕಾಗಿ ಭಾರತದಲ್ಲಿ ನಡೆದ ಶಾಂತಿ ಮೆರವಣಿಗೆಯಲ್ಲಿ ನಾನು ಭಾಗವಹಿಸಿದ್ದನ್ನು ಪ್ರಶಸ್ತಿ ನೀಡುವ ವೇಳೆ ಉಲ್ಲೇಖಿಸಲಾಗಿದೆ ಮತ್ತು ಆದ್ದರಿಂದ ನನ್ನ ಯುದ್ಧ ವಿರೋಧಿ ನಿಲುವು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

ಮನಿಲಾದ ವಿಶ್ವವಿದ್ಯಾನಿಲಯದಲ್ಲಿ ನಡೆದ ಶಾಂತಿ ಸಮ್ಮೇಳನದಲ್ಲಿ ಆ.31 ರಂದು ಮ್ಯಾಗ್ಸೆಸೆ ಪ್ರಶಸ್ತಿಗಳನ್ನು ಹಸ್ತಾಂತರಿಸುವ ದಿನದಂದು ನಾನು ಯುಎಸ್ ರಾಯಭಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೆ ಮತ್ತು ಸಮ್ಮೇಳನಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಸೆ.1ರಂದು ನಡೆದ ಪ್ರತಿಭಟನೆಯ ನಂತರ ಮನಿಲಾದ ಪತ್ರಿಕೆಯೊಂದು ಸಂಪಾದಕೀಯದಲ್ಲಿ ನಾನು ತತ್ವಬದ್ಧ ವ್ಯಕ್ತಿಯೆಂದು ಅವರು ನಂಬಬೇಕೆಂದು ನಾನು ಬಯಸಿದರೆ, ಭಾರತಕ್ಕೆ ಹಿಂದಿರುಗುವ ಮೊದಲು ನಾನು ಪ್ರಶಸ್ತಿಯನ್ನು ಯುಎಸ್ ರಾಯಭಾರ ಕಚೇರಿಗೆ ಹಿಂದಿರುಗಿಸಬೇಕೆಂದು ಸವಾಲು ಹಾಕಿದ್ದರು ಎಂದ ಹೇಳಿದ್ದಾರೆ.

ನಾನು ಮ್ಯಾಗ್ಸೆಸೆ ಫೌಂಡೇಶನ್‌ನ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ, ನಾನು ಈ ಪ್ರಶಸ್ತಿಗೆ ಮಾಜಿ ಜನಪ್ರಿಯ ಫಿಲ್ಪೈನ್ಸ್ ಅಧ್ಯಕ್ಷರ ಹೆಸರಿರುವುದರಿಂದ ಮತ್ತು ನನ್ನ ಆದರ್ಶ ಎಂದು ನಾನು ಪರಿಗಣಿಸಿದ ಜಯಪ್ರಕಾಶ್ ನಾರಾಯಣ್, ವಿನೋಬಾ ಭಾವೆ ಮತ್ತು ಬಾಬಾ ಆಮ್ಟೆ ಅವರಂತಹ ವ್ಯಕ್ತಿಗಳಿಗೆ ನನ್ನ ದೇಶದಲ್ಲಿ ನೀಡಿರುವುದರಿಂದ ಈಗ ಇಟ್ಟುಕೊಳ್ಳುತ್ತಿದ್ದೇನೆ. ಮ್ಯಾಗ್ಸೆಸೆ ಫೌಂಡೇಶನ್ ತಮ್ಮ ಪ್ರತಿಷ್ಠೆಗೆ ನಾನು ಹೆಚ್ಚು ಹಾನಿ ಮಾಡುತ್ತಿದ್ದೇನೆ ಎಂದು ಎಂದಾದರೂ ಭಾವಿಸಿದರೆ ಈ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಸಂತೋಷಪಡುತ್ತೇನೆ ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ. ಅದೇನೇ ಇದ್ದರೂ  ಈಗ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಂದೀಪ್‌ ಪಾಂಡೆ ಹೇಳಿದ್ದಾರೆ.

ಮ್ಯಾಗ್ಸೆಸೆ ಪ್ರಶಸ್ತಿಯು ಪ್ರಾಥಮಿಕವಾಗಿ ರಾಕ್‌ಫೆಲ್ಲರ್ ಫೌಂಡೇಶನ್‌ ಮತ್ತು  ಫೋರ್ಡ್ ಫೌಂಡೇಶನ್‌ನಿಂದ ಧನಸಹಾಯ ಪಡೆದಿದೆ. ಎರಡೂ ಅಮೇರಿಕನ್ ಫೌಂಡೇಶನ್‌ಗಳು. ಪ್ಯಾಲೆಸ್ತೀನಿಯನ್‌ ನಾಗರಿಕರ ವಿರುದ್ಧ ಹತ್ಯಾಕಾಂಡವನ್ನು ಅಮೆರಿಕ ಬೆಂಬಲಿಸುವುದನ್ನು ಮುಂದುವರಿಸಿದೆ. 24,500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವುದನ್ನು ಅಮೆರಿಕ ಮುಂದುವರಿಸಿದೆ. ಇಂತಹ ಸಂದರ್ಭದಲ್ಲಿ  ಪ್ರಶಸ್ತಿಯನ್ನು ಉಳಿಸಿಕೊಳ್ಳುವುದು ನನಗೆ ಅಸಹನೀಯವಾಗಿದೆ. ಆದ್ದರಿಂದ, ನಾನು ಅಂತಿಮವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಲು ನಿರ್ಧರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರಶಸ್ತಿಯೊಂದಿಗೆ ಫಿಲಿಪೈನ್ಸ್ ಮಾಜಿ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರ ಹೆಸರಿರುವುದರಿಂದ ಫಿಲಿಪೈನ್ಸ್ ಜನರಿಗೆ ನೋವಾಗಿದ್ದರೆ ನಾನು ಅವರಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ಈ ಪ್ರಶಸ್ತಿಯೊಂದಿಗೆ ಅಮೆರಿಕದ  ಸಂಪರ್ಕ ಇರುವ ಕಾರಣ ನನ್ನ ಪ್ರತಿಭಟನೆಯ ಭಾಗವಾಗಿ ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಇದರ ಜೊತೆಗೆ ನಾನು ಅಮೆರಿಕದ ಅಪ್‌ಸ್ಟೇಟ್ ನ್ಯೂಯಾರ್ಕ್‌ನಲ್ಲಿರುವ ಸಿರಾಕ್ಯೂಸ್ ವಿಶ್ವವಿದ್ಯಾನಿಲಯಕ್ಕೆ ಮ್ಯಾನುಫ್ಯಾಕ್ಚರಿಂಗ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಪಡೆದ ಎರಡು ಎಂಎಸ್ಸಿ ಪದವಿಗಳನ್ನು,  ಬರ್ಕ್ಲಿಯಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪಡೆದ ಪಿಹೆಚ್‌ಡಿ ಪದವಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.

ಇದನ್ನು ಓದಿ: ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...