ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ “ಲೋಕಸಭೆ ಚುನಾವಣೆಯ ಫಲಿತಾಂಶದ ನಂತರ ವಿತ್ತ ಸಚಿವರು ಕಾಂಗ್ರೆಸ್‌ನ 2024ರ ಪ್ರಣಾಳಿಕೆ ಓದಿರುವುದು ನನಗೆ ಖುಷಿ ತಂದಿದೆ” ಎಂದಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಚಿದಂಬರಂ ” ಕಾಂಗ್ರೆಸ್ ಪ್ರಣಾಳಿಕೆಯ ಪುಟ 30ರಲ್ಲಿ ವಿವರಿಸಿರುವ ಉದ್ಯೋಗಕ್ಕೆ ಉತ್ತೇಜನ ನೀಡುವ ವಿಚಾರವನ್ನು ಬಜೆಟ್‌ನಲ್ಲಿ ಅಳವಡಿಸಿಕೊಂಡಿದ್ದಾರೆ. ಇದು ನನಗೆ ಖುಷಿ ಕೊಟ್ಟಿದೆ. ಇದರ ಜೊತೆಗೆ ಕಾಂಗ್ರೆಸ್ ಪ್ರಣಾಳಿಕೆಯ ಪುಟ 11ರಲ್ಲಿ ಉಲ್ಲೇಖಿಸಿರುವ ಅಪ್ರೆಂಟಿಸ್‌ಗೆ ಭತ್ಯೆಯೊಂದಿಗೆ ಅಪ್ರೆಂಟಿಸ್‌ಶಿಪ್ ಯೋಜನೆಯನ್ನು ಪರಿಚಯಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಇತರ ಕೆಲವು ಅಂಶಗಳನ್ನೂ ಸಚಿವರು ಬಜೆಟ್‌ನಲ್ಲಿ ನಕಲು ಮಾಡಿದ್ದಾರೆ. ಉಳಿದ ಅಂಶಗಳನ್ನು ನಾನು ಶೀಘ್ರದಲ್ಲೇ ಪಟ್ಟಿ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.
I am glad to know that the Hon'ble FM has read the Congress Manifesto LS 2024 after the election results
I am happy she has virtually adopted the Employment-linked incentive (ELI) outlined on page 30 of the Congress Manifesto
I am also happy that she has introduced the…
— P. Chidambaram (@PChidambaram_IN) July 23, 2024
ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿರುವ ಸರ್ಕಾರದ ಮೂರನೇ ಹಾಗೂ ಹಣಕಾಸು ಸಚಿವೆಯಾಗಿ 7ನೇ ಬಜೆಟ್ ಅನ್ನು ಇಂದು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.
ಇದನ್ನೂ ಓದಿ : ಇಡಿ-ಸಿಬಿಐ ಕಿರುಕುಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ


