Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಪೂಜೆಯ ಹಕ್ಕಿಗಾಗಿ ಸಲ್ಲಿಸಿದ್ದ ‘ಅರ್ಜಿ ವಿಚಾರಣೆ’ಗೆ ಅಂಗೀಕರಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿ ಪ್ರಕರಣ: ಪೂಜೆಯ ಹಕ್ಕಿಗಾಗಿ ಸಲ್ಲಿಸಿದ್ದ ‘ಅರ್ಜಿ ವಿಚಾರಣೆ’ಗೆ ಅಂಗೀಕರಿಸಿದ ನ್ಯಾಯಾಲಯ

- Advertisement -
- Advertisement -

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂ ದೇವತೆಗಳನ್ನು ಪೂಜಿಸಲು ಅನುಮತಿ ಕೋರಿ ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಹೇಳಿದ್ದು, ಮಹಿಳೆಯರ ಅರ್ಜಿಯನ್ನು ಪ್ರಶ್ನಿಸಿ ಅಂಜುಮಾನ್ ಸಮಿತಿಯ ಮನವಿಯನ್ನು ತಿರಸ್ಕರಿಸಿದೆ.

ಜ್ಞಾನವಾಪಿ ಮಸೀದಿ ವಿವಾದ ಪ್ರಕರಣದ ತೀರ್ಪು ನೀಡಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರ ಏಕ ಪೀಠವು ಈ ಪ್ರಕರಣವನ್ನು ನಿರ್ವಹಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮಹಿಳೆಯರು ಜ್ಞಾನವಾಪಿ ಮಸೀದಿಯಲ್ಲಿ ವರ್ಷಪೂರ್ತಿ ಪ್ರವೇಶ ಮತ್ತು  ಪ್ರಾರ್ಥನೆ ಮಾಡಲು ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್‌‌ 22ರಂದು ಮಹಿಳೆಯರ ಅರ್ಜಿ ವಿಚಾರಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೀರ್ಪಿನ ಮೊದಲು, ಯಾವುದೇ ರೀತಿಯ ಹಿಂಸಾತ್ಮಕ ಪರಿಸ್ಥಿತಿಯನ್ನು ತಪ್ಪಿಸಲು ಮತ್ತು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಾರಣಾಸಿಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಮಸೀದಿಯ ಆಸ್ತಿಯು ವಕ್ಫ್ ಬೋರ್ಡ್‌ಗೆ ಸೇರಿದ್ದು, ಪ್ರಕರಣವನ್ನು ಆಲಿಸಬಾರದು ಎಂದು ಮಸೀದಿ ಸಮಿತಿಯು ವಾದಿಸಿತ್ತು. ಮಸೀದಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಆಲಿಸುವ ಹಕ್ಕು ವಕ್ಫ್ ಮಂಡಳಿಗೆ ಮಾತ್ರ ಇದೆ ಎಂದು ಮಸೀದಿ ಸಮಿತಿ ಹೇಳಿತ್ತು.

ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವ ಒಂದು ತಿಂಗಳ ಮೊದಲು, ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂ ದೇವತೆಗಳ ವಿಗ್ರಹಗಳಿವೆ ಎಂದು ಪ್ರತಿಪಾದಿಸುವ ಹಿಂದೂ ಮಹಿಳೆಯರ ಅರ್ಜಿಯ ಆಧಾರದ ಮೇಲೆ ವಾರಣಾಸಿ ಸಿವಿಲ್ ನ್ಯಾಯಾಲಯವು ಜ್ಞಾನವಾಪಿ ಮಸೀದಿಯ ಚಿತ್ರೀಕರಣಕ್ಕೆ ಆದೇಶಿಸಿತ್ತು.

ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಪ್ರಕರಣವನ್ನು ವಿಚಾರಣೆ ನಡೆಯುತ್ತಿದ್ದ ಕೆಳ ನ್ಯಾಯಾಲಯದಿಂದ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ವರ್ಗಾಯಿಸಿತು.

“ವಿಷಯದ ಸಂಕೀರ್ಣತೆ ಮತ್ತು ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ವಾರಣಾಸಿಯ ಸಿವಿಲ್ ನ್ಯಾಯಾಧೀಶರ ಮುಂದೆ ಸಿವಿಲ್ ಮೊಕದ್ದಮೆಯನ್ನು ಯುಪಿ ನ್ಯಾಯಾಂಗ ಸೇವೆಯ ಹಿರಿಯ ಮತ್ತು ಅನುಭವಿ ನ್ಯಾಯಾಂಗ ಅಧಿಕಾರಿಯ ಮುಂದೆ ವಿಚಾರಣೆ ನಡೆಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

ಮುಸ್ಲಿಮರು ಪ್ರಾರ್ಥನೆಯ ಮೊದಲು ‘ವುಜೂ’ (ಅಂಗಾಗ ಶುದ್ಧೀಕರಣ) ಆಚರಣೆಗಳಿಗೆ ಬಳಸಲಾಗುವ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ‘ಶಿವಲಿಂಗ’ ಕಂಡುಬಂದಿದೆ ಎಂದು ಬಿಜೆಪಿ ಬೆಂಬಲಿತ ಸಂಘಟನೆಗಳು ಮತ್ತು ಮಾಧ್ಯಮಗಳು ಅಪಪ್ರಚಾರ ಮಾಡಿವೆ. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಕೊಳಕ್ಕೆ ಸೀಲ್‌ ಹಾಕುವಂತೆ ಆದೇಶಿಸಿದ್ದರು.

ಶತಮಾನಗಳಷ್ಟು ಹಳೆಯದಾದ ಮಸೀದಿಯೊಳಗಿನ ಈ ಚಿತ್ರೀಕರಣವನ್ನು ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. 1947 ಆಗಸ್ಟ್ 15ರಿಂದ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ಥಾನಮಾನವನ್ನು ಕಾಯ್ದುಕೊಳ್ಳುವ 1991 ರ ಪೂಜಾ ಸ್ಥಳಗಳ ಕಾಯಿದೆಗೆ ವಿರುದ್ಧವಾಗಿ ಚಿತ್ರೀಕರಣ ನಡೆಯುತ್ತಿದೆ ಎಂದು ಅರ್ಜಿದಾರರು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...