Homeಕರ್ನಾಟಕಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆಯೇ ದಕ್ಷಿಣ ಕನ್ನಡದ ಮಳಲಿ ಮಸೀದಿ ಸಮೀಕ್ಷೆ ನಡೆಸುವಂತೆ ಕೋರಿ ಹಿಂದೂ ದಾವೆದಾರರು ಹೂಡಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳೂರು ನ್ಯಾಯಾಲಯ ಫೆಬ್ರವರಿ 17ಕ್ಕೆ ಮುಂದೂಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಮಸೀದಿ ವಕ್ಫ್‌ ಆಸ್ತಿ ಎಂಬುದಕ್ಕೆ ಸಂಬಂಧಿಸಿದ ದಾವೆ ಕರ್ನಾಟಕ ಹೈಕೋರ್ಟ್‌ನಲ್ಲಿದ್ದು, ಈ ಕುರಿತು ಯಾವುದೇ ಆದೇಶವನ್ನು ಹೈಕೋರ್ಟ್‌ ನೀಡಿಲ್ಲ. ಹೀಗಾಗಿ ಆದೇಶ ದೊರೆತ ನಂತರವಷ್ಟೇ ಮಸೀದಿಯ ಸಮೀಕ್ಷೆ ಕುರಿತಂತೆ ವಾದ ಮಂಡಿಸಲು ಸಾಧ್ಯ ಎಂದು ಮಳಲಿಪೇಟೆ ಜುಮ್ಮಾ ಮಸೀದಿಯನ್ನು ಪ್ರತಿನಿಧಿಸುತ್ತಿರುವ ವಕೀಲ ಎಂ ಪಿ ಶೆಣೈ ಅವರು ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶೆ ನಿಖಿತಾ ಅಕ್ಕಿ ಅವರು ಪ್ರಕರಣವನ್ನು ಮುಂದೂಡಿದ್ದಾರೆ ಎಂದು ವರದಿ ತಿಳಿಸಿದೆ.

ಹಿಂದೂ ಪಕ್ಷಕಾರರ ಪರ ವಾದ ಮಂಡಿಸಿದ ವಕೀಲ ಚಿದಾನಂದ ಎಂ ಕೆದಿಲಾಯ ಅವರು ಮಸೀದಿ ಸಮೀಕ್ಷೆ ನಡೆಸುವ ಸಂಬಂಧ ನ್ಯಾಯಾಲಯ ಅಡ್ವೊಕೇಟ್‌ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಕೋರಿದ್ದಾರೆ. ಅಲ್ಲದೆ ಮಸೀದಿ ಇರುವ ಸ್ಥಳದ ಉತ್ಖನನ ಕಾರ್ಯ ನಡೆಯಬೇಕು. ಕೇವಲ ಮೌಖಿಕ ವಾದ ಸಾಲದು. ವರದಿ ದೊರೆತರಷ್ಟೇ ಮಸೀದಿ ಇರುವ ಸ್ಥಳದಲ್ಲಿ ಹಿಂದೂ ದೈವಗಳ ಕುರುಹುಗಳಿವೆಯೇ ಎಂದು ನ್ಯಾಯಾಲಯಕ್ಕೆ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ.

ಜ್ಞಾನವಾಪಿಯಂತೆ ಮಳಲಿಪೇಟೆ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಡ್ವೋಕೇಟ್ ಕಮಿಷನರ್‌ ನೇಮಕ ಮಾಡುವಂತೆ ಹಿಂದೂಗಳ ಪರವಾಗಿ ಧನಂಜಯ್‌ ಹಾಗೂ ಇನ್ನಿತರರು ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ :

ಮಳಲಿ ಮಸೀದಿಯ ಹಳೆಯ ಕಟ್ಟಡ ಕೆಡವಿ ಹೊಸದಾಗಿ ನಿರ್ಮಿಸಲು 2022ರಲ್ಲಿ ಮಸೀದಿ ಸಮಿತಿ ಮುಂದಾಗಿತ್ತು. ದ್ರಾವಿಡ ಶೈಲಿಯ ಹಳೆಯ ಕಡ್ಡದ ಸುತ್ತಲು ಕೆಡವಿ ಮಧ್ಯದ ಭಾಗ ಹಾಗೆಯೇ ಬಿಟ್ಟಿತ್ತು. ಮಸೀದಿಯ ಮೇಲ್ಚಾವಣಿ ದೇಗುಲ ಶೈಲಿಯಲ್ಲಿರುವುದನ್ನು ಕಂಡ ಹಿಂದುತ್ವ ಸಂಘಟನೆ ಮುಖಂಡರು ಮಸೀದಿಯ ಒಳಗೆ ಶಿವನ ಸನ್ನಿಧಾನ ಇರುವುದರಿಂದ ದುರಸ್ತಿ ಕಾಮಗಾರಿ ಸ್ಥಗಿತಗೊಳಿಸಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಆದರೆ, ಮಳಲಿ ಮಸೀದಿ ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯಾಗಿದೆ ಎಂದು ಮಸೀದಿ ಸಮಿತಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ವಾದ ಆಲಿಸಿದ್ದ ಹೈಕೋರ್ಟ್‌, ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ. 31ರಂದು ಸೂಚಿಸಿತ್ತು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...