Homeಮುಖಪುಟಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಧೈರ್ಯವಿದ್ದರೆ CAA, NRC ಜಾರಿಗೊಳಿಸಿ: ಅಮಿತ್ ಶಾಗೆ ಪ್ರಶಾಂತ್‌ ಕಿಶೋರ್‌ ಸವಾಲು

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, "ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದರು

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ಧೈರ್ಯವಿದ್ದರೆ “ಕಾರ್ಯಗತಗೊಳಿಸಲು ಪ್ರಯತ್ನಿಸಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಗೃಹ ಸಚಿವ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ.

“ನಾಗರಿಕರ ಭಿನ್ನಾಭಿಪ್ರಾಯವನ್ನು ಹೊಸಕಿಹಾಕುವುದು ಯಾವುದೇ ಸರ್ಕಾರದ ಬಲದ ಸಂಕೇತವಲ್ಲ. ಅಮಿತ್‌ ಶಾರವರೆ ನೀವು #CAA_NRC ವಿರುದ್ಧ ಹೋರಾಟವನ್ನು ನಿರ್ಲಕ್ಷಿಸುವುದಾದರೆ, ನೀವೇ ಘೋಷಿಸಿದ ಕ್ರೊನಾಲಜಿ ಪ್ರಕಾರ CAA & NRC ಅನುಷ್ಠಾನಗೊಳಿಸಲು ಏಕೆ ಮುಂದಾಗುತ್ತಿಲ್ಲ? ಎಂದು ಪ್ರಶಾಂತ್‌ ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ಲಕ್ನೋದಲ್ಲಿ ನಡೆದ ರ್‍ಯಾಲಿಯಲ್ಲಿ ಅಮಿತ್‌ ಶಾರವರು, “ನೀವು ಎಷ್ಟು ಬೇಕಾದರೂ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ಸಿಎಎ ಹಿಂತೆಗೆದುಕೊಳ್ಳಲಾಗುವುದಿಲ್ಲ ಎಂದು ಪುನರುಚ್ಚರಿಸಿದ ನಂತರ ರಾಜಕೀಯ ಚುತುರ ಪ್ರಶಾಂತ್‌ ಕಿಶೋರ್‌ ಸವಾಲು ಹಾಕಿದ್ದಾರೆ.

“ನಾವು ಪ್ರತಿಭಟನೆಗಳಿಗೆ ಹೆದರುವುದಿಲ್ಲ. ವಾಸ್ತವವಾಗಿ ನಾವು ಜನಿಸಿದ್ದು ಪ್ರತಿಭಟನೆಗಳ ಮಧ್ಯೆಯೇ, ಅಲ್ಲಿಯೇ ಬೆಳೆದಿದ್ದೇನೆ. ನಾವು ಪ್ರತಿಪಕ್ಷದಲ್ಲೂ ಇದೇ ಮಾತನ್ನು ಹೇಳಿದ್ದೆವು ಮತ್ತು ಅಧಿಕಾರದಲ್ಲಿದ್ದಾಗ ನಾವು ಈಗ ಅದೇ ಮಾತನ್ನು ಹೇಳುತ್ತಿದ್ದೇವೆ” ಎಂದ ಅವರು ಈ ಕುರಿತು ಯಾರಾದರೂ ಬಹಿರಂಗ ಚರ್ಚೆಗೆ ಬರಬಹುದು ಎಂದು ಕರೆ ನೀಡಿದ್ದರು.

ಪ್ರಶಾಂತ್‌ ಕಿಶೋರ್ ಆರಂಭದಿಂದಲೂ ಸಿಎಎ, ಎನ್‌ಆರ್‌ಸಿ ವಿರುದ್ಧ ದನಿಯೆತ್ತಿದ್ದರು. ಅಲ್ಲದೇ ತಮ್ಮ ಜೆಡಿಯು ಪಕ್ಷವೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸುವಂತೆ ಒತ್ತಡ ತಂದಿದ್ದರು. ತಮ್ಮ ಪಕ್ಷದೊಳಗೆ ತಿದ್ದುಪಡಿ ಮಾಡಿದ ಪೌರತ್ವ ಕಾನೂನು ಮತ್ತು ಎನ್‌ಆರ್‌ಸಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೊನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಸಿಎಎ ಎನ್‌ಆರ್‌ಸಿ ವಿರುದ್ಧ ನಿಲುವು ತೆಗೆದುಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Mr. Prashant Kishore, so called intelligent strategist, try to support the government for all the constructive work/approach. Try to come out of the illusion that you are the only intelligent in the world. Be informed that you are going to meet your ‘WATERLOO’.

  2. ಸಿಎಎ, ಎನ್.ಆರ್.ಸಿ. ಎಲ್ಲೆಡೆಯೂ ವಿರೋಧ ಹೆಚ್ಚುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...