Homeಕರ್ನಾಟಕಬೆಂಗಳೂರು ಉತ್ತರದಲ್ಲೂ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಅಭಿಯಾನ

ಬೆಂಗಳೂರು ಉತ್ತರದಲ್ಲೂ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಅಭಿಯಾನ

- Advertisement -
- Advertisement -

ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದಕ್ಕೆ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿನ್ನೆ (ಮಾ.13) ಸಂಜೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸುತ್ತಿದ್ದಂತೆ ‘ಗೋ ಬ್ಯಾಕ್ ಶೋಭಕ್ಕಾ’ ಎಂಬ ಭಿತ್ತಿ ಪತ್ರಗಳನ್ನು ಹಿಡಿದು ಬೀದಿಗಳಿದ ಬಿಜೆಪಿ ಕಾರ್ಯಕರ್ತರು ಯಾವುದೇ ಕಾರಣಕ್ಕೂ ನಮ್ಮ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗಿ ಬರೋದು ಬೇಡ ಎಂದಿದ್ದಾರೆ.

ಸ್ಥಳೀಯ ಒಕ್ಕಲಿಗರ ನಾಯಕರಲ್ಲಿ ಯಾರಿಗಾದರು ಟಿಕೆಟ್ ಕೊಡಿ. ಇಲ್ಲಾ ಹಾಲಿ ಸಂಸದ ಸದಾನಂದಗೌಡ ಅವರನ್ನೇ ಮತ್ತೊಮ್ಮೆ ಕಣಕ್ಕಿಳಿಸಿ. ಆದರೆ, ದಯವಿಟ್ಟು ಶೋಭಾ ಕರಂದ್ಲಾಜೆ ಮಾತ್ರ ಬೇಡ ಎಂದು ಹೇಳಿದ್ದಾರೆ.

ಶೋಭಾ ಅವರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೇ ಜನರು ಗೋ ಬ್ಯಾಕ್ ಎಂದಿದ್ದಾರೆ. ಅವರು ಅಭಿವೃದ್ದಿ ಮಾಡಿಲ್ಲ ಎಂಬ ಆರೋಪವನ್ನು ಅಲ್ಲಿನ ಕಾರ್ಯಕರ್ತರು ಮಾಡಿದ್ದಾರೆ. ಅಂತವರನ್ನು ಇಲ್ಲಿಗೆ ಕರೆದುಕೊಂಡು ಬಂದರೆ ನಮ್ಮ ಕ್ಷೇತ್ರದ ಪರಿಸ್ಥಿತಿ ಏನು ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ತಕ್ಕ ಉತ್ತರ ಕೊಡ್ತಾರೆ : ಶೋಭಾ ಕರಂದ್ಲಾಜೆ

ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ನೆಲಮಂಗಲದಲ್ಲಿ ಯಾರೋ 10-13 ಜನರು ಗೋ ಬ್ಯಾಕ್ ಎಂದಿದ್ದಾರೆ. ಅವರಿಗೂ ಬೆಂಗಳೂರು ಉತ್ತರ ಕ್ಷೇತ್ರಕ್ಕೂ ಸಂಬಂಧವಿಲ್ಲ. ಇದನ್ನೆಲ್ಲ ಯಾರು ಮಾಡಿಸುತ್ತಿದ್ದಾರೆ ಎಂದು ನನಗೆ ಗೊತ್ತಿದೆ. ಇವರಿಗೆಲ್ಲ ನಮ್ಮ ಪಕ್ಷದ ಹೈಕಮಾಂಡ್ ನಾಯಕರು ತಕ್ಕ ಪಾಠ ಕಳಿಸುತ್ತಾರೆ ಎಂದಿದ್ದಾರೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಸಚಿವೆಯೂ ಆಗಿರುವ ಶೋಭಾ ಕರಂದ್ಲಾಜೆ ಅವರು ಆ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಿಲ್ಲ ಎಂದು ಆರೋಪಿಸಿದ್ದ ಬಿಜೆಪಿ ಕಾರ್ಯಕರ್ತರು, ಇತ್ತೀಚೆಗೆ ಗೋಬ್ಯಾಕ್ ಅಭಿಯಾನ, ಪತ್ರ ಚಳವಳಿ ನಡೆಸಿದ್ದರು.

ಶೋಭಾ ಕ್ಷೇತ್ರ ಬದಲಾವಣೆ :

ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಶೋಭಾ ಅವರ ಕ್ಷೇತ್ರ ಬದಲಿಸಿದ ಬಿಜೆಪಿ ಹೈಕಮಾಂಡ್ ಬೆಂಗಳೂರು ಉತ್ತರದ ಟಿಕೆಟ್ ನೀಡಿದೆ. ಈ ಕ್ಷೇತ್ರದ ಹಾಲಿ ಸಂಸದ ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದೆ. ಶೋಭಾ ಅವರ ಬದಲಿಗೆ ಉಡುಪಿ-ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿ : ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ದ ವಾಗ್ದಾಳಿ: ಬಂಡಾಯದ ಸುಳಿವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...