Homeಮುಖಪುಟ"ಗೋ ಬ್ಯಾಕ್‌ ಮೋದಿ" ಭಾರೀ ಪ್ರತಿಭಟನೆಗಳ ನಡುವೆ ಕೋಲ್ಕತ್ತಾಗೆ ಪಿಎಂ ಮೋದಿ ಆಗಮನ..

“ಗೋ ಬ್ಯಾಕ್‌ ಮೋದಿ” ಭಾರೀ ಪ್ರತಿಭಟನೆಗಳ ನಡುವೆ ಕೋಲ್ಕತ್ತಾಗೆ ಪಿಎಂ ಮೋದಿ ಆಗಮನ..

- Advertisement -
- Advertisement -

ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಪೌರತ್ವ ಕಾಯ್ದೆಯ ವಿರುದ್ಧದ ತೀವ್ರ ಪ್ರತಿಭಟನೆಗಳ ನಡುವೆ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಧ್ಯಾಹ್ನ ಕೋಲ್ಕತ್ತಾಗೆ ಆಗಮಿಸಿದ್ದಾರೆ.

ಪ್ರಧಾನ ಮಂತ್ರಿಯ ಆಗಮನದ ಕೆಲವೇ ಗಂಟೆಗಳ ಮೊದಲು ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿದ್ದವು. ಅದರಲ್ಲೂ ವಿಶೇಷವಾಗಿ ಅವರ ಬೆಂಗಾವಲು ಹೋಗುವ ಮಾರ್ಗದಲ್ಲಿ ಗೋ ಬ್ಯಾಕ್‌ ಮೋದಿ ಘೋಷಣೆಗಳು ಸಿಡಿದೆದ್ದಿದ್ದವು.

ಯುವಜನರು, ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಘೋಷಣೆಗಳನ್ನು ಕೂಗಿದರು. “ಮೋದಿ ಹಿಂತಿರುಗಿ” ಎಂದು ಹೇಳುವ ಬ್ಯಾನರ್‌ಗಳ ಜೊತೆಗೆ ಕಪ್ಪು ಧ್ವಜಗಳು ಎಲ್ಲೆಡೆ ಗೋಚರಿಸುತ್ತಿದ್ದವು.

ಮಧ್ಯಾಹ್ನ 3ರ ಹೊತ್ತಿಗೆ ಎಡಪಂಥೀಯ ವಿದ್ಯಾರ್ಥಿ ಸಂಘಗಳ ಸದಸ್ಯರು ಕೋಲ್ಕತಾ ವಿಮಾನ ನಿಲ್ದಾಣದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಹೋರಾಟ ಆರಂಭಿಸಿದ್ದಾರೆ.

ಶುಕ್ರವಾರ ಸಂಜೆಯಿಂದಲೇ ರಾಜ್ ಭವನದ ಹತ್ತಿರದಲ್ಲಿ ತೃಣಮೂಲ ಛಾತ್ರ ಪರಿಷತ್ತಿನ ವತಿಯಿಂದ ನಡೆಯುತ್ತಿರುವ ಧರಣಿ ಪ್ರದರ್ಶನದಲ್ಲಿ ಮಮತಾ ಬ್ಯಾನರ್ಜಿ ಹಾಜರಾಗಿ ಬೆಂಬಲ ಸೂಚಿಸಿದ್ದಾರೆ.

ಇಂದು ಮಧ್ಯಾಹ್ನ ಕೋಲ್ಕತ್ತಾಗೆ ಮೋದಿ ಬಂದಿಳಿದಾಗ ರಾಜ್ಯಪಾಲ ಜಗದೀಪ್ ಧಂಕರ್, ಮೇಯರ್ ಫಿರ್ಹಾದ್ ಹಕೀಮ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರು ಸ್ವಾಗತ ಕೋರಿದ್ದಾರೆ.

ಮೊದಲೇ ಯೋಜಿಸಿದಂತೆ ರಾಜಭವನಲ್ಲಿ ಮೋದಿ ಇಂದು ರಾತ್ರಿ ಉಳಿಯದೇ ಬೇಲೂರು ಮಠದಲ್ಲಿ ರಾತ್ರಿ ಕಳೆಯಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ. ಹೌರಾ ಜಿಲ್ಲೆಯ ಮಠದ ಸನ್ಯಾಸಿಗಳು ಮೋದಿಯವರ ವಾಸ್ತವ್ಯಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆಂದು ಹೇಳಿದ್ದಾರೆ.

ಹೊಸ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಕೋಲ್ಕತ್ತಾದ ಎರಡು ಅಧಿಕೃತ ಕಾರ್ಯಕ್ರಮಗಳಿಗೆ ಹಾಜರಾಗಿ ರಾಜಭವನಕ್ಕೆ ಹಿಂದಿರುಗಲಿದ್ದಾರೆ. ಅಲ್ಲಿ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ನಾಯಕರನ್ನು ಭೇಟಿ ಮಾಡುತ್ತಾರೆ ಮತ್ತು ಮಮತಾ ಬ್ಯಾನರ್ಜಿ ಅವರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮೋದಿಯವರು ರಾತ್ರಿ ಕಳೆಯಲು ಬೇಲೂರು ಮಠಕ್ಕೆ ಹೋಗುತ್ತಾರೆ.

ಹೂಗ್ಲಿ ನದಿಯ ಮಿಲೇನಿಯಮ್ ಪಾರ್ಕ್‌ನಲ್ಲಿ ಅಥವಾ ರಾಜಭವನದಲ್ಲಿ ಮಮತಾ ಬ್ಯಾನರ್ಜಿ ಮೋದಿಯವರನ್ನು ಭೇಟಿಯಾಗಬಹುದು ಎಂದು ಟಿಎಂಸಿ ಮುಖಂಡರು ಹೇಳಿದ್ದಾರೆ, ಅಲ್ಲಿ ಪ್ರಧಾನಿ ಬೆಳಕು ಮತ್ತು ಧ್ವನಿ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ .

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...