Homeಮುಖಪುಟಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ - ತೀವ್ರ...

ಮನೆಗೋಗಿ ಅಡುಗೆ ಮಾಡು: ಸುಪ್ರಿಯಾ ಸುಳೆ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ – ತೀವ್ರ ಟೀಕೆ

- Advertisement -
- Advertisement -

ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಿರುದ್ದ, ‘ರಾಜಕೀಯ ಅರ್ಥವಾಗದಿದ್ದರೆ, ಮನೆಗೋಗಿ ಅಡುಗೆ ಮಾಡು’ ಎಂಬ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ್ ವಿರುದ್ಧ ಭಾರೀ ಟೀಕೆ ಕೇಳಿಬಂದಿದೆ.

“ನೀವೇಕೆ ರಾಜಕೀಯದಲ್ಲಿದ್ದೀರಿ? ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕೆ ಹೋಗಿ, ಆದರೆ ನಮಗೆ ಒಬಿಸಿ ಕೋಟಾ ಕೊಡಿಸಿ. ಲೋಕಸಭಾ ಸದಸ್ಯರಾಗಿದ್ದರೂ ಒಬ್ಬ ಸಿಎಂ ಅಪಾಯಿಂಟ್ಮೆಂಟ್ ಪಡೆಯುವುದು ಹೇಗೆಂದು ನಿಮಗೆ ತಿಳಿದಿಲ್ಲ” ಎಂದು ಬಿಜೆಪಿ ಅಧ್ಯಕ್ಷ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ಮೊದಲು ಸುಪ್ರಿಯಾ ಸುಳೆರವರು, “ಬಿಜೆಪಿ ಆಡಳಿತದ ಮಧ್ಯಪ್ರದೇಶ ಸರ್ಕಾರವು ಸ್ಥಳೀಯ ಚುನಾವಣೆಯಲ್ಲಿ ಒಬಿಸಿ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅನುಮತಿ ಪಡೆದುಕೊಂಡಿದ್ದು ಹೇಗೆ? ಈ ಕುರಿತು ನವದೆಹಲಿಯಲ್ಲಿ ಮಧ್ಯಪ್ರದೇಶದ ಸಿಎಂರವರನ್ನು ಸಂಪರ್ಕಿಸಿದೆವು, ಆದರೆ ಅವರು ಸಿಗಲಿಲ್ಲ” ಎಂದು ಪಕ್ಷದ ಸಭೆಯಲ್ಲಿ ಮಾತನಾಡಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದರು ಮತ್ತು ಕೆಲವರನ್ನು ಭೇಟಿಯಾದರು. ಅದಾದ ಎರಡೇ ದಿನದಲ್ಲಿ ಅವರು ಸ್ಥಳೀಯ ಚುನಾವಣೆಗೆ ಒಬಿಸಿ ಮೀಸಲಾತಿ ಪಡೆದುಕೊಂಡರು. ಇದು ಹೇಗೆಂದು ನನಗೆ ತಿಳಿಯಲಿಲ್ಲ ಎಂದು ಸುಪ್ರಿಯಾ ಸುಳೆ ಹೇಳಿದ್ದರು.

ಸುಪ್ರಿಯಾ ಸುಳೆ ವಿರುದ್ಧ ಅವಹೇಳನಕಾರಿ, ಮಹಿಳಾ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಮುಖ್ಯಸ್ಥನ ವಿರುದ್ಧ ಎನ್‌ಸಿಪಿ ಮುಗಿಬಿದ್ದಿದೆ. ಮೊದಲು ನೀವು ಚಪಾಟಿ ಲಟ್ಟಿಸುವುದನ್ನು ಕಲಿಯಿರಿ ಮತ್ತು ನಿಮ್ಮ ಪತ್ನಿಗೆ ಅಡುಗೆ ಮಾಡಲು ಸಹಾಯ ಮಾಡಿ ಎಂದು ತಿರುಗೇಟು ನೀಡಿದೆ.

“ಅವರು ಹಾಗೆ ಮಾತನಾಡಬಾರದಿತ್ತು. ನನ್ನ ಸಹೋದರಿಯ ವಿರುದ್ಧ ಆ ರೀತಿ ಕೆಟ್ಟದಾಗಿ ಮಾತನಾಡುವ ಹಕ್ಕು ಅವರಿಗಿಲ್ಲ” ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

ಬಿಜೆಪಿಯು ಸ್ತ್ರೀದ್ವೇಷಿ ಪಕ್ಷ ಎಂದು ಸುಪ್ರಿಯಾ ಸುಳೆ ಪತಿ ಸದಾನಂದ್ ಸುಳೆ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಗೃಹಿಣಿ, ತಾಯಿ ಮತ್ತು ಯಶಸ್ವಿ ರಾಜಕಾರಣಿಯಾಗಿರುವ, ಭಾರತದ ಇತರ ಅನೇಕ ಕಠಿಣ ಪರಿಶ್ರಮಿ ಮತ್ತು ಪ್ರತಿಭಾವಂತ ಮಹಿಳೆಯರಲ್ಲಿ ಒಬ್ಬರಾಗಿರುವ ನನ್ನ ಹೆಂಡತಿಯ ಬಗ್ಗೆ ನನಗೆ ಹೆಮ್ಮೆ ಇದೆ… ಆದರೆ ಬಿಜೆಪಿಯು ಸ್ತ್ರೀದ್ವೇಷಿ ಪಕ್ಷವಾಗಿದ್ದು, ಯಾವಾಗಲೂ ಮಹಿಳೆಯನ್ನು ಹೀಯಾಳಿಸುತ್ತದೆ. ಇದು ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶ್ರದ್ಧಾಂಜಲಿ; ದೊರೆಸ್ವಾಮಿ ಎಂಬ ಅತಿ ಸಾಮಾನ್ಯ ಮಹಾನ್ ವ್ಯಕ್ತಿ

ಭಾರತದಲ್ಲಿ ಸರಿ ಸುಮಾರು 50% ನಷ್ಟು ಮಹಿಳೆಯರಿದ್ದಾರೆ. ಅವರು ಎಲ್ಲಾ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಸಂಸಾರದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅದರೆ ಮೇಲಿನ ಬಿಜೆಪಿ ಮುಖಂಡನ ಹೇಳಿಕೆ ಮಹಿಳೆಯರನ್ನು ಸಾಮರ್ಥ್ಯವಿಲ್ಲದವರು ಎಂಬ ಪುರಷಾಧಿಪತ್ಯದ ಮನಸ್ಥಿತಿಯಿಂದ ಕೂಡಿದೆ ಎಂಬ ಟೀಕೆಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...