Homeಮುಖಪುಟದೇಶದಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ: ಮೋದಿಗೆ ಖೇರಾ...

ದೇಶದಲ್ಲಿ ಏನಾಗುತ್ತಿದೆ ಎಂದು ತಿಳಿಯಲು ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ: ಮೋದಿಗೆ ಖೇರಾ ಸಲಹೆ

- Advertisement -
- Advertisement -

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಸೋಮವಾರ ದೇಶಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಮೋದಿಯವರ ‘ದೇಶ್ ಮೇ ಕ್ಯಾ ಚಲ್ ರಹಾ ಹೈ’ ಪ್ರಶ್ನೆ ಮಾಡಿದ್ದರು. ಮೋದಿ ಅವರ ಈ ಪ್ರಶ್ನೆಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಉತ್ತರಿಸುವ ವೀಡಿಯೊವನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ. ”ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ” ಎಂದು ಪವನ್ ಖೇರಾ ವಿಡಿಯೋದಲ್ಲಿ ಹೇಳಿದ್ದಾರೆ.

”ಮಣಿಪುರ ಹೊತ್ತಿ ಉರಿಯುತ್ತಿದೆ. ಬಾಲಸೋರ್ ಟ್ರೈನ್ ಅಪಘಾತದ ಹೊಣೆಯನ್ನು ಮುಸ್ಲಿಂ ಸಮುದಾಯದ ಮೇಲೆ ಹೊರಿಸಲು ನಿಮ್ಮ ಐಟಿ ಸೆಲ್ ಪ್ರಯತ್ನಿಸುತ್ತಿದೆ… ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರು ನಿಮಗೆ ಪ್ರಶ್ನೆ ಕೇಳಿದ ನಂತರ ಅವರನ್ನು ಟ್ರೋಲ್ ಮಾಡಿದವರನ್ನು ಶ್ವೇತಭವನ ಖಂಡಿಸಿದೆ” ಎಂದು ಪವನ್ ಖೇರಾ ಹೇಳಿದ್ದಾರೆ.

ಸೋಮವಾರ, ಪ್ರಧಾನಿ ಮೋದಿ ತಮ್ಮ ಆರು ದಿನಗಳ ಯುಎಸ್ ಮತ್ತು ಈಜಿಪ್ಟ್ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮತ್ತು ಇತರ ಬಿಜೆಪಿ ನಾಯಕರು ಬರಮಾಡಿಕೊಂಡರು. ಈ ವೇಳೆ ಭಾರತದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಮೋದಿ ನಡ್ಡಾ ಅವರನ್ನು ವಿಚಾರಿಸಿದರು ಎಂದು ವರದಿಯಾಗಿದೆ.

ಮೋದಿ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ”ತಮ್ಮ ಒಂಬತ್ತು ವರ್ಷಗಳ ಆಡಳಿತ ಅವಧಿಯ ರಿಪೋರ್ಟ್ ಕಾರ್ಡ್ಅನ್ನು ಪಕ್ಷದ ನಾಯಕರು ಜನರಿಗೆ ತಲುಪಿಸುತ್ತಿದ್ದಾರೆ ಮತ್ತು ದೇಶದ ಜನರು ಸಂತೋಷವಾಗಿದ್ದಾರೆ” ಎಂದು ಹೇಳಿರುವುದಾಗಿ ಬಿಜೆಪಿ ಸಂಸದ ಮನೋಜ್ ತಿವಾರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

ಮೋದಿಗೆ ಪ್ರಶ್ನೆ ಮಾಡಿದ ಪತ್ರಕರ್ತೆಗೆ ಹಿಂದುತ್ವದವಾದಿಗಳಿಂದ ನಿಂದನೆ

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ತಾರತಮ್ಯದ ಕುರಿತು ವಾಲ್ ಸ್ಟ್ರೀಟ್ ಜರ್ನಲ್‌ನ ಶ್ವೇತಭವನದ ವರದಿಗಾರ್ತಿ ಸಬ್ರಿನಾ ಸಿದ್ದಿಕಿ ಅವರು ಪ್ರಶ್ನೆಯನ್ನು ಕೇಳಿದ್ದರು. ಆ ಬಳಿಕ ಅವರ ಮೇಲೆ ಹಿಂದುತ್ವದವಾದಿಗಳು, ಬಿಜೆಪಿ ಸದಸ್ಯರು ಟ್ವಿಟರ್‌ನಲ್ಲಿ ದಾಳಿ ನಡೆಸಿದರು. ಇದನ್ನು ಅಮೆರಿಕ ಶ್ವೇತಭವನ ಖಂಡಿಸಿದೆ.

ಸಬ್ರಿನಾ ಸಿದ್ದಿಕಿ ಮೋದಿಯವರನ್ನು ಕೇಳಿದ ಪ್ರಶ್ನೆ:

”ಭಾರತವು ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ದೀರ್ಘಕಾಲ ಹೆಮ್ಮೆಪಡುತ್ತಿದೆ, ಆದರೆ ನಿಮ್ಮ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅನೇಕ ಮಾನವ ಹಕ್ಕುಗಳ ಗುಂಪುಗಳು ಹೇಳಿವೆ. ನಿಮ್ಮ ದೇಶದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಸುಧಾರಿಸಲು ಮತ್ತು ಎತ್ತಿಹಿಡಿಯಲು ನೀವು ಮತ್ತು ನಿಮ್ಮ ಸರ್ಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದರು.

ಭಾರತದಲ್ಲಿ ಮೋದಿಯವರು ಪ್ರಧಾನಿಯಾದ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಆರೋಪ ಮಾಡಿದರು.

ಪತ್ರಕರ್ತೆ ಮೋದಿಗೆ ಪ್ರಶ್ನೆ ಕೇಳಿದ ಕೆಲವೇ ಗಂಟೆಗಳಲ್ಲಿ ಹಿಂದುತ್ವಾದಿಗಳು ಹಾಗೂ ಬಿಜೆಪಿ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ನೇತೃತ್ವದಲ್ಲಿ ಪತ್ರಕರ್ತೆ ಸಿದ್ದಿಕಿ ಅವರ ಮೇಲೆ ಆನ್‌ಲೈನ್ ದಾಳಿ ನಡೆಯಿತು. ”ಸಬ್ರಿನಾ ಸಿದ್ದಿಕಿ ಮುಸ್ಲಿಂ ಸಮುದಾಯದವಳಾಗಿದ್ದು, ಪಾಕಿಸ್ತಾನದೊಂದಿಗಿನ ಸಂಪರ್ಕವನ್ನು ಹೊಂದಿದ್ದಾಳೆ. ಅವರು ಟೂಲ್‌ಕಿಟ್ ಗ್ಯಾಂಗ್‌ನ ಭಾಗವಾಗಿದ್ದಾರೆ” ಎಂದು ಮಾಳವಿಯ ಟ್ವೀಟ್ ಮಾಡಿದರು.

ಇನ್ನೂ ಕೆಲವು ಹಿಂದುತ್ವವಾದಿಗಳು ಸಿದ್ದಿಕಿ ಅವರನ್ನು ‘ಪಾಕಿಸ್ತಾನಿ ಇಸ್ಲಾಮಿಸ್ಟ್’ ಎಂದು ಲೇಬಲ್ ಮಾಡಿದರು. ಈ ಪ್ರಶ್ನೆಯನ್ನು ಮೋದಿಯ ಮುಂದೆ ಕೇಳಲು ಆಕೆಗೆ ಉದ್ಯೋಗದಾತ ಅವಕಾಶ ನೀಡುವ ಪಿತೂರಿ ಎಂದಿದ್ದಾರೆ. ”ಅವಳು ಭಾರತದ ಮೇಲೆ ಮಾತ್ರ ದಾಳಿ ಮಾಡುತ್ತಾಳೆ. ದ್ವೇಷವು ಪಾಕಿಸ್ತಾನಿಗಳ ಡಿಎನ್‌ಎಯಲ್ಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

”ಭಾರತದಲ್ಲಿ ಮುಸ್ಲಿಮರ ಮೇಲಿನ ಕಿರುಕುಳವನ್ನು ಆರೋಪಿಸಿದ ಪತ್ರಕರ್ತೆ ಸಬ್ರಿನಾ ಸಿದ್ದಿಕ್ ಬೇರೆ ಯಾರೂ ಅಲ್ಲ … ಪಾಕಿಸ್ತಾನಿ ಪೋಷಕರ ಮಗಳು” ಎಂದು ಟ್ವೀಟ್ ಮಾಡಿದ್ದಾರೆ.

ತನ್ನನ್ನು ‘ಭಾರತ ವಿರೋಧಿ’ ಎಂದು ಕರೆಯುವ ಆನ್‌ಲೈನ್ ದಾಳಿಗೆ ಸಿದ್ದಿಕಿ ಪ್ರತ್ಯತ್ತರವಾಗಿ ಟ್ವೀಟ್ ಮಾಡಿದ್ದಾರೆ. ತನ್ನ ತಂದೆಯೊಂದಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ”ಕೆಲವರು ನನ್ನ ವೈಯಕ್ತಿಕ ಹಿನ್ನೆಲೆಯನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಹಾಗಾಗಿ ಸಂಪೂರ್ಣ ಚಿತ್ರವನ್ನು ಒದಗಿಸುವುದು ಸರಿ ಎನಿಸುತ್ತದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದರು.

ಇದಾದ ಬಳಿಕ ಅಮೆರಿಕ ಶ್ವೇತಭವನವು ಪತ್ರಕರ್ತೆಯ ಬೆಂಬಲಕ್ಕೆ ನಿಂತು, ”ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ …” ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...