Homeಮುಖಪುಟಗೋವಾ ವಿಧಾನಸಭಾ ಚುನಾವಣೆ: 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಶಿವಸೇನೆ

ಗೋವಾ ವಿಧಾನಸಭಾ ಚುನಾವಣೆ: 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಶಿವಸೇನೆ

- Advertisement -
- Advertisement -

ಗೋವಾದಲ್ಲಿ ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಸಲಿದೆ. ಇದಕ್ಕಾಗಿ ರಾಜ್ಯದ ಪಕ್ಷಗಳು ತಯಾರಿ ನಡೆಸುತ್ತಿದ್ದು, ಮಹಾರಾಷ್ಟ್ರದ ಆಡಳಿತ ಪಕ್ಷವಾಗಿರುವ ಶಿವಸೇನೆ ಕೂಡಾ ಇಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದೆ. ಪಕ್ಷವು 22 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಬುಧವಾರ ಮಾಹಿತಿ ನೀಡಿದ್ದಾರೆ.

ಮುಂಬರುವ ಚುನಾವಣೆಗೆ ಪಕ್ಷದ ಸನ್ನದ್ಧತೆಯನ್ನು ಅವಲೋಕಿಸಲು ಸಂಜಯ್ ರಾವತ್‌ ಗೋವಾಗೆ ತೆರಳಿದ್ದಾರೆ. “ಗೋವಾ ಮತ್ತು ಮಹಾರಾಷ್ಟ್ರಗಳು ಭಾವನಾತ್ಮಕ ಸಂಬಂಧವನ್ನು ಹಂಚಿಕೊಂಡಿವೆ. ಶಿವಸೇನೆಯು ಮಹಾರಾಷ್ಟ್ರವನ್ನು ಆಳುತ್ತಿರುವ ರೀತಿಯಲ್ಲಿ ಗೋವಾವನ್ನೂ ಆಳುತ್ತದೆ” ಎಂದು ಪಕ್ಷದ ರಾಜ್ಯಸಭಾ ಸದಸ್ಯರೂ ಆಗಿರುವ ಸಂಜಯ್ ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ ಮತ್ತು ಯುಪಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಶಿವಸೇನೆ!

ಪ್ರಸ್ತುತ ಶಿವಸೇನೆಗೆ ಗೋವಾ ವಿಧಾನಸಭೆಯಲ್ಲಿ ಒಬ್ಬ ಶಾಸಕರೂ ಇಲ್ಲ. ಪಕ್ಷವು 2017 ರ ಚುನಾವಣೆಯಲ್ಲಿ ಮಹಾರಾಷ್ಟ್ರವಾಡಿ ಗೋಮಂತಕ್ ಪಾರ್ಟಿ (MGP) ಯೊಂದಿಗೆ ಮೈತ್ರಿಯಲ್ಲಿ ಮೂರು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದರೂ, ಸಫಲವಾಗಿರಲಿಲ್ಲ. 2017 ರಲ್ಲಿ ಕಾಂಗ್ರೆಸ್ 17 ಸ್ಥಾನಗಳನ್ನು ಮತ್ತು ಬಿಜೆಪಿ ಕೇವಲ 13 ಸ್ಥಾನಗಳನ್ನು ಗಳಿಸಿತು. ಆದರೆ ಬಿಜೆಪಿ ಇತರ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಮನೋಹರ್ ಪರಿಕ್ಕರ್ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಿತ್ತು.

ಈ ಮಧ್ಯೆ, ಗೋವಾದ ಮುಂಬರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳಿಗೆ 300 ಯುನಿಟ್ ಉಚಿತ ವಿದ್ಯುತ್ ಮತ್ತು ಸ್ಥಳೀಯರಿಗೆ ಉದ್ಯೋಗಗಳಲ್ಲಿ 80% ಮೀಸಲಾತಿಯನ್ನು ಘೋಷಿಸಿದ್ದಾರೆ.

ಇಷ್ಟೇ ಅಲ್ಲದೆ, ತೃಣಮೂಲ ಕಾಂಗ್ರೆಸ್‌ ಕೂಡಾ ಇಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದೆ. ಪಕ್ಷದ ನಾಯಕ ಡೆರೆಕ್ ಒ ಬ್ರಿಯಾನ್‌ ಅವರು ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಪಕ್ಷವು ಹಲವಾರು ಸ್ಥಳೀಯ ನಾಯಕರೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಹೇಳಿದ್ದರು, ಜೊತೆಗೆ ಗೋವಾದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ಲುಯಿಜಿನೊ ಫೆಲೇರೊ ತೃಣಮೂಲ ಪಕ್ಷವನ್ನು ಸೇರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿ ರದ್ದುಪಡಿಸಿದ್ದೇವೆ ಎಂಬ...

0
"ಕಾಂಗ್ರೆಸ್ ಸಂವಿಧಾನವನ್ನು ಗೌರವಿಸಲಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಗೌರವಿಸಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಮೂಲಕ ನಮಗೆ ಅವಕಾಶ ಸಿಕ್ಕಾಗ ನಾವು ಮಾಡಿದ ಮೊದಲ ಕೆಲಸವೆಂದರೆ, ಎಸ್‌ಸಿ, ಎಸ್‌ಟಿಗಳಿಂದ ಕಿತ್ತುಕೊಂಡು ನೀಡಿದ್ದ ಮುಸ್ಲಿಂ...