Homeಮುಖಪುಟಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಸಚಿವನನ್ನೆ ವಜಾ ಮಾಡಿದ ಗೋವಾ ಬಿಜೆಪಿ ಸರ್ಕಾರ!

ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಸಚಿವನನ್ನೆ ವಜಾ ಮಾಡಿದ ಗೋವಾ ಬಿಜೆಪಿ ಸರ್ಕಾರ!

- Advertisement -
- Advertisement -

ಬುಡಕಟ್ಟು ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳನ್ನು ಮಾಡಿದ್ದ ಗೋವಾ ಸಚಿವ ಗೋವಿಂದ್ ಗೌಡೆ ಅವರನ್ನು ಮೂರು ವಾರಗಳ ನಂತರ ಬುಧವಾರ ರಾಜ್ಯ ಸಚಿವ ಸಂಪುಟದಿಂದ ತೆಗೆದುಹಾಕಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಬುಡಕಟ್ಟು ಕಲ್ಯಾಣ ಖಾತೆಯನ್ನು ಹೊಂದಿದ್ದಾರೆ. ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ

ಕಲೆ ಮತ್ತು ಸಂಸ್ಕೃತಿ ಸಚಿವರಾದ ಗೌಡೆ ಅವರನ್ನು ಸಂಪುಟದಿಂದ ಕೈಬಿಡುವ ನಿರ್ಧಾರವನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಗೋವಾ ಬಿಜೆಪಿ ಮುಖ್ಯಸ್ಥ ದಾಮು ನಾಯಕ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ಸರ್ಕಾರ, ಪಕ್ಷ ಮತ್ತು ಪಕ್ಷದ ಕೇಂದ್ರ ನಾಯಕತ್ವದ ಸಮಾಲೋಚನೆಯ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ, ಪಕ್ಷದ ಶಿಸ್ತು ಅತ್ಯಗತ್ಯ.” ಎಂದು ಅವರು ಹೇಳಿದ್ದಾರೆ.

ಗೌಡೆ ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಮುಖ್ಯಮಂತ್ರಿ ಮಾಡಿದ ಶಿಫಾರಸನ್ನು ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅಂಗೀಕರಿಸಿದ್ದಾರೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಜೂನ್ 18 ರಂದು ಆಚರಿಸಲಾಗುವ ಗೋವಾ ವಿಮೋಚನಾ ದಿನದಂದು ಸಮಾಜದ ತಳಮಟ್ಟದಲ್ಲಿರುವ ವರ್ಗಗಳ ಪರವಾಗಿ ನಿಂತಿದ್ದಕ್ಕಾಗಿ “ಈ ಭಾಗ್ಯವನ್ನು” ನಾನು ಪಡೆದಿದ್ದೇನೆ ಎಂದು ಗೌಡೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಮೇ 26 ರಂದು ನಡೆದ ರಾಜ್ಯ ಮಟ್ಟದ ಸಮಾರಂಭದಲ್ಲಿ ಮಾತನಾಡಿದ್ದ ಗೌಡೆ ಅವರು ರಾಜ್ಯ ಬುಡಕಟ್ಟು ಕಲ್ಯಾಣ ಇಲಾಖೆಯು ಅಸಮರ್ಥವಾಗಿದೆ ಎಂದು ಆರೋಪಿಸಿದ್ದರು ಮತ್ತು ಫೈಲ್‌ಗಳಿಗೆ ಸಹಿ ಹಾಕಲು ಅದರ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಹೇಳಿದ್ದರು.

ಆದಿವಾಸಿ ನಾಯಕರೂ ಆಗಿರುವ ಗೌಡೆ ಅವರು, ರಾಜ್ಯದಲ್ಲಿ “ಬುಡಕಟ್ಟು ಭವನ” ನಿರ್ಮಾಣ ಏಕೆ ಸ್ಥಗಿತಗೊಂಡಿದೆ ಎಂದು ಪ್ರಶ್ನಿಸಿದ್ದರು.ಈ ಯೋಜನೆಗಾಗಿ ಅನೇಕ ಆದಿವಾಸಿಗಳು ತಮ್ಮ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಿದ್ದರು. “ನಾನು ಬುಡಕಟ್ಟು ಕಲ್ಯಾಣ ಸಚಿವನಾಗಿದ್ದಾಗ ಅಡಿಪಾಯ ಹಾಕಲಾಯಿತು. ಆದರೆ ಈಗ ಯೋಜನೆ ಸ್ಥಗಿತಗೊಂಡಿದೆ. ಯೋಜನೆಯಲ್ಲಿ ಏಕೆ ಪ್ರಗತಿಯಿಲ್ಲ?” ಎಂದು ಗೌಡೆ ಹೇಳಿದ್ದರು.

ಸಚಿವ ಗೌಡೆ ಅವರ “ಬೇಜವಾಬ್ದಾರಿ ಹೇಳಿಕೆಗಳಿಗಾಗಿ” ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾವಂತ್ ಹೇಳಿದ್ದರು. ಗೌಡೆ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ “ವಿಪರೀತ ಭ್ರಷ್ಟಾಚಾರ” ನಡೆಯುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಉಲ್ಲೇಖಿಸಿ ರಾಜ್ಯಪಾಲರನ್ನು ಕಾಂಗ್ರೆಸ್ ಒತ್ತಾಯಿಸಿದೆ.

ವಿರೋಧ ಪಕ್ಷದ ನಾಯಕ, ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ ಪ್ರತಿಕ್ರಿಯಿಸಿ, “ಗೌಡೆ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಾಗ ಅವರನ್ನು ತೆಗೆದುಹಾಕಲಾಗಿಲ್ಲ. ಆದರೆ, ಈಗ ಅವರು ಬುಡಕಟ್ಟು ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಎತ್ತಿದಾಗ, ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಂಡಿದೆ” ಎಂದು ರು ಹೇಳಿದ್ದಾರೆ. ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ | ರಾಂಚಿ, ಪಾಟ್ನಾದಲ್ಲಿ ಇಡಿ ದಾಳಿ

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ | ರಾಂಚಿ, ಪಾಟ್ನಾದಲ್ಲಿ ಇಡಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...