Homeಮುಖಪುಟಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಹೊಗಳಿದ ಸ್ಪಲ್ಪ ಸಮಯದಲ್ಲೇ ಗೋವಾ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಲುಯಿಜಿನೊ ಫೆಲೇರೊ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲುಯಿಜಿನೊ ಫೆಲೇರೊ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಸೇರುವ ಸೂಚನೆಗಳಿವೆ. ಅಧಿಕೃತವಾಗಿ ಘೋಷಣೆಯೊಂದೆ ಬಾಕಿಯಿದೆ. ರಾಜೀನಾಮೆ ನೀಡುವ ಮೊದಲು, ಬಿಜೆಪಿಗೆ ಕಠಿಣ ಪೈಪೋಟೆ ನೀಡುವ ಏಕೈಕ ಪ್ರತಿಸ್ಪರ್ಧಿ ಮಮತಾ ಬ್ಯಾನರ್ಜಿ ಎಂದು ಹೊಗಳಿದ್ದರು.

ಮುಂದಿನ ವರ್ಷ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅದಷ್ಟು ಬೇಗ ಘೋಷಿಸಲಾಗುವುದು ಎಂದು ಟಿಎಂಸಿ ತಿಳಿಸಿತ್ತು. ಇದರ ಬೆನ್ನಲ್ಲೇ ಲುಯಿಜಿನೊ ಫೆಲೇರೊ ರಾಜೀನಾಮೆ ನೀಡಿರುವುದು ಅವರು ಟಿಎಂಸಿ ಸೇರುತ್ತಾರೆ ಎಂಬ ವದಂತಿಗೆ ಪುಷ್ಠಿ ನೀಡಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

“ನಾನು ಹಲವು ಜನರನ್ನು ಭೇಟಿಯಾಗಿದ್ದೇನೆ ಅವರೆಲ್ಲರೂ ನಾನು 40 ವರ್ಷದ ಕಾಂಗ್ರೆಸ್ಸಿಗ ಎಂದು ಹೇಳುತ್ತಾರೆ. ನಾನು ಮುಂದೆಯೂ ಕಾಂಗ್ರೆಸ್ ಕುಟುಂಬದ ಕಾಂಗ್ರೆಸ್ಸಿಗನಾಗಿ ಮುಂದುವರಿಯುತ್ತೇನೆ. ಎಲ್ಲಾ ನಾಲ್ಕು ಕಾಂಗ್ರೆಸ್‌ ಪಕ್ಷಗಳಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಕಠಿಣ ಪೈಪೋಟಿ ನೀಡಿದ್ದಾರೆ. ಪ್ರಧಾನಿ ಮೋದಿ ಬಂಗಾಳದಲ್ಲಿ 200 ಸಭೆಗಳನ್ನು ನಡೆಸಿದ್ದರು. ಅಮಿತ್ ಶಾ 250 ಸಭೆಗಳನ್ನು ನಡೆಸಿದ್ದರು. ನಂತರ ಇಡಿ, ಸಿಬಿಐ ಕೂಡ ಅವರಿಗೆ ಸಹಾಯಕವಾಗಿದ್ದವು. ಆದರೆ ಮಮತಾ ಬ್ಯಾನರ್ಜಿ ಅವರ ಸೂತ್ರ ಗೆದ್ದಿದೆ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಲುಯಿಜಿನೊ ಫಲೇರೋ ಅವರು 2019 ರ ರಾಷ್ಟ್ರೀಯ ಚುನಾವಣೆಗೆ ತ್ರಿಪುರಾದ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಇವರು ಟಿಎಂಸಿ ಸೇರುವುದರಿಂದ ಈಶಾನ್ಯ ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ತನ್ನ ಹೆಜ್ಜೆಯಿಡಲು ಮತ್ತು ಬಿಜೆಪಿಯನ್ನು ಹಿಂದಿಕ್ಕಲು ಸಹಾಯಕವಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿವೆ.

ಕಾಂಗ್ರೆಸ್ ಹಿರಿಯ ನಾಯಕಿಯಾಗಿದ್ದ ಮಾಜಿ ಸಂಸದೆ ಸುಶ್ಮಿತಾ ದೇವ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಇತ್ತಿಚೆಗೆ ಟಿಎಂಸಿ ಸೇಪ್ಡೆಯಾಗಿದ್ದರು. ಇದಾದ ಬಳಿಕ ಕಾಂಗ್ರೆಸ್‌ಗೆ ಇದು ಎರಡನೇ ದೊಡ್ಡ ಹೊಡೆತ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದಾಗಿನಿಂದ ಬೇರೆ ಪಕ್ಷಗಳಿಂದ ಟಿಎಂಸಿಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗಿದೆ.


ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....