Homeಮುಖಪುಟಗೋವಾ ಚುನಾವಣೆ: ಗಣಿಗಾರಿಕೆ ಪುನರಾರಂಭ, ಮಹಿಳೆಯರಿಗೆ ಮೀಸಲಾತಿ ಭರವಸೆ ನೀಡಿದ ಟಿಎಂಸಿ-ಎಂಜಿಪಿ ಮೈತ್ರಿ

ಗೋವಾ ಚುನಾವಣೆ: ಗಣಿಗಾರಿಕೆ ಪುನರಾರಂಭ, ಮಹಿಳೆಯರಿಗೆ ಮೀಸಲಾತಿ ಭರವಸೆ ನೀಡಿದ ಟಿಎಂಸಿ-ಎಂಜಿಪಿ ಮೈತ್ರಿ

- Advertisement -
- Advertisement -

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷಗಳು ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಎರಡೂ ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ತಾವು ಅಧಿಕಾರಕ್ಕೆ ಬಂದರೆ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿವೆ.

ಗೋವಾದಲ್ಲಿನ 88 ಗಣಿಗಾರಿಕೆ ಗುತ್ತಿಗೆಗಳನ್ನು ಸುಪ್ರೀಂ ಕೋರ್ಟ್ 2018ರ ಮಾರ್ಚ್‌ನಲ್ಲಿ ರದ್ದುಗೊಳಿಸಿತ್ತು. ನಂತರ ಗೋವಾದಲ್ಲಿ ಗಣಿಗಾರಿಗೆ ಸ್ಥಗಿತಗೊಂಡಿದೆ. ಗೋವಾಕ್ಕೆ ಆದಾಯದ ಮುಖ್ಯ ಮೂಲಗಳಲ್ಲಿ ಒಂದಾಗಿದ್ದ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಕೂಡ ಪುನರಾರಂಭಿಸುವುದಾಗಿ ಈ ಪಕ್ಷಗಳು ಭರವಸೆ ನೀಡಿವೆ.

ಗೋವಾ ಮಿನರಲ್ ಕಾರ್ಪೊರೇಷನ್ ಮೂಲಕ ಉತ್ಪತ್ತಿಯಾಗುವ ಎಲ್ಲಾ ಆದಾಯವನ್ನು ರಾಜ್ಯದಲ್ಲಿ ಕಲ್ಯಾಣ ಯೋಜನೆಗಳಿಗೆ ಧನಸಹಾಯ ಮಾಡಲು ಬಳಸಿಕೊಳ್ಳಲಾಗುವುದು ಎಂದು ಶನಿವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಮೈತ್ರಿ ಪಕ್ಷಗಳು ತಿಳಿಸಿವೆ.

ಖಾಸಗಿ ವಲಯ ಸೇರಿದಂತೆ ಎಲ್ಲ ಉದ್ಯೋಗಗಳಲ್ಲಿ ಗೋವಾದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡುವುದಾಗಿಯೂ ಭರವಸೆ ನೀಡಿವೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

ಟಿಎಂಸಿ-ಎಂಜಿಪಿ ಮೈತ್ರಿಕೂಟವು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳನ್ನು ಪರಿಹರಿಸಲು ಎರಡು ತ್ವರಿತ ನ್ಯಾಯಾಲಯಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ ಮೊಬೈಲ್ ಅಪ್ಲಿಕೇಶನ್ ಅನ್ನು ಸ್ಥಾಪಿಸುವ ಭರವಸೆಯನ್ನು ನೀಡಿವೆ. ಪ್ರಣಾಳಿಕೆಯ ಪ್ರಕಾರ, TMC-MGP ಅಧಿಕಾರಕ್ಕೆ ಬಂದರೆ, ಸರ್ಕಾರವು ಗೋವಾದ ಒಟ್ಟು ಆಂತರಿಕ ಉತ್ಪನ್ನವನ್ನು 1.8 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವುದಾಗಿ ಮತ್ತು 2 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನೂ ನೀಡಿವೆ.

ಗೋವಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕಳೆದ ತಿಂಗಳು ರಾಜ್ಯದ ಅತ್ಯಂತ ಹಳೆಯ ಪ್ರಾದೇಶಿಕ ಪಕ್ಷ ಎಂಜಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. 2017 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ, MGP ಮೂರು ಸ್ಥಾನಗಳನ್ನು ಗೆದ್ದಿತ್ತು. ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...