Homeಮುಖಪುಟಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಗೋವಾ ಚುನಾವಣೆ: ಉಚಿತ ವಿದ್ಯುತ್, ಉದ್ಯೋಗ ಖಾತ್ರಿ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಗೋವಾದ ಬಿಜೆಪಿ ನಿತ್ಯ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿರುವ ಅವರು ಇದನ್ನು ಅಲ್ಲಿನ ಮಾಜಿ ರಾಜ್ಯಪಾಲರೇ ಬಹಿರಂಗವಾಗಿ ಹೇಳಿದ್ದಾರೆ ಎಂದಿದ್ದಾರೆ.

- Advertisement -
- Advertisement -

ಗೋವಾದಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ ಉಚಿತ ವಿದ್ಯುತ್ ನೀಡಲಾಗುವುದು ಮತ್ತು ಯುವಜನರಿಗೆ ಉದ್ಯೋಗ ಖಾತ್ರಿ ನೀಡಲಾಗುವುದು ಎಂದು ದೆಹಲಿ ಸಿಎಂ ಮತ್ತು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಈಗಾಗಲೇ 1.12 ಲಕ್ಷ ಯುವಜನರು ಉದ್ಯೋಕ ಖಾತ್ರಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. 2.9 ಕುಟುಂಬಗಳು ಉಚಿತ ವಿದ್ಯುತ್ ಗಾಗಿ ನೋಂದಣಿ ಮಾಡಿಕೊಂಡಿವೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಉಚಿತ ಧಾರ್ಮಿಕ ಯಾತ್ರೆಗಳನ್ನು ಆಯೋಜಿಸುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.

ಆಪ್ ಅಧಿಕಾರಕ್ಕೆ ಬಂದರೆ ರಾಮನ ದರ್ಶನಕ್ಕೆ ಅಯೋಧ್ಯಗೆ ಕರೆದೊಯ್ಯುತ್ತೇವೆ. ಕ್ರಿಶ್ಚಿಯನ್ ಸಹೋದರರನ್ನು ವೇಲಂಕಾಣಿಗೆ ಮತ್ತು ಮುಸ್ಲಿಮರನ್ನು ಅಜ್ಮೀರ್ ಶರೀಫ್‌ಗೆ ಕರೆಯೊಯ್ಯಲಾಗುವುದು. ಬಹಳಷ್ಟು ಜನರು ಸಾಯಿ ಬಾಬಾರ ಮೇಲೆ ನಂಬಿಕೆಯಿಟ್ಟಿದ್ದಾರೆ. ಅವರಿಗೆ ಶಿರಡಿಗೆ ಉಚಿತ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

ಗೋವಾದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನಿತ್ಯ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿರುವ ಅವರು ಇದನ್ನು ಅಲ್ಲಿನ ಮಾಜಿ ರಾಜ್ಯಪಾಲರೇ ಬಹಿರಂಗವಾಗಿ ಹೇಳಿದ್ದಾರೆ ಎಂದಿದ್ದಾರೆ. ರಾಜ್ಯಪಾಲರಿಗೆ ರಾಜ್ಯದಲ್ಲಿ ಏನೇನು ನಡೆಯುತ್ತದೆ ಎಂಬುದರ ಮಾಹಿತಿ ಒಳಗಿನಿಂದಲೇ ತಿಳಿದಿರುತ್ತದೆ. ಹಾಗಾಗಿ ಇಲ್ಲಿನ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಗೆ ಸಿಎಂ ಪ್ರಮೋದ್ ಸಾವಂತ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಹೇಳಿದ್ದಾರೆ. ಸತ್ಯಪಾಲ್‌ರವರು ಸುಮ್ಮನೆ ಮಾತಾಡುವ ವ್ಯಕ್ತಿಯಲ್ಲ. ಗೌರವವುಳ್ಳ ವ್ಯಕ್ತಿಯಾಗಿದ್ದು ಅವರೇ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸತ್ಯಪಾಲ್ ಮಲ್ಲಿಕ್‌ರವರು ಗೋವಾ ಸಿಎಂ ವಿರುದ್ಧ ಮಾತ್ರ ಆರೋಪ ಮಾಡಿಲ್ಲ. ಕೇಂದ್ರ ಸಚಿವರ ವಿರುದ್ಧವೂ ಭ್ರಷ್ಟಾಚಾರದ ಆರೋಪವೊರಿಸಿದ್ದಾರೆ. 1947ರಿಂದ ಇಲ್ಲಿಯವರೆಗೂ ರಾಜ್ಯಪಾಲರು ತಮ್ಮದೇ ಪಕ್ಷದ ಮುಖ್ಯಮಂತ್ರಿಯ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರಲಿಲ್ಲ. ಅದು ಈಗ ಸಂಭವಿಸಿದೆ ಮತ್ತು ಬಿಜೆಪಿ ಬಹಿರಂಗವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: ಆರ್‌ಎಸ್‌ಎಸ್‌, ಬಿಜೆಪಿಯಲ್ಲಿ ಭಾರೀ ಭ್ರಷ್ಟಾಚಾರ: ಮೇಘಾಲಯ ರಾಜ್ಯಪಾಲರ ಗಂಭೀರ ಆರೋಪ


2017ರ ವಿಧಾನಸಭಾ ಚುನಾವಣೆಯಲ್ಲಿ ಆಪ್ ಭರ್ಜರಿಯಾಗಿ ಸಿದ್ಧತೆ ನಡೆಸಿ ಎಲ್ಲಾ 40 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿತ್ತು. ಆದರೆ ಒಂದು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕಡೆ ಠೇವಣಿ ಕಳೆದುಕೊಂಡಿತ್ತು. 17 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ 13 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿತ್ತು. ಹಲವು ಪಕ್ಷಗಳೊಂದಿಗೆ ಮೈತ್ರಿ ಸಾಧಿಸಿ ಬಿಜೆಪಿ ಅಧಿಕಾರ ಹಿಡಿದಿತ್ತು.

2022 ರಲ್ಲಿ ನಡೆಯುವ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಪೈಪೋಟಿ ನಡೆಸಿದರೆ, ಆಪ್ ಜೊತೆಗೆ ಟಿಎಂಸಿ ಸಹ ಕಣಕ್ಕಿಳಿದಿವೆ. ಟಿಎಂಸಿಯ ಮಮತಾ ಬ್ಯಾನರ್ಜಿಯವರು 3 ದಿನ ಗೋವಾ ಪ್ರವಾಸ ನಡೆಸಿದರೆ ಅದೇ ಸಮಯದಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಸಹ ಗೋವಾದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿದ್ದರು. ಒಟ್ಟಿನಲ್ಲಿ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನ ಯೂನಿಟ್ ವಿದ್ಯುತ್‌ಗೆ 3 ರೂ ಕಡಿತ ಘೋಷಿಸಿದ ಸಿಎಂ ಚನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...