Homeಮುಖಪುಟಗೋವಾ ಚುನಾವಣೆ: ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು 5 ಸಾವಿರ ರೂ ಭರವಸೆ

ಗೋವಾ ಚುನಾವಣೆ: ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು 5 ಸಾವಿರ ರೂ ಭರವಸೆ

- Advertisement -
- Advertisement -

ಫೆಬ್ರವರಿಯಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು 5 ಸಾವಿರ ರೂ ಸಹಾಯಧನ ನೀಡುವುದಾಗಿ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿನ ಗೃಹ ಲಕ್ಷ್ಮೀ ಯೋಜನೆಯಂತೆ ಗೋವಾದ ಮಹಿಳೆಯರಿಗೆ ಮಾಸಾಶನ ಕೊಡುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈಗ ಪಶ್ಚಿಮ ಬಂಗಾಳದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಪ್ರತಿ ತಿಂಗಳು 1,000ರೂ ಹಾಗೂ ಸಾಮಾನ್ಯ ವರ್ಗದ ಮಹಿಳೆಯರು 500ರೂ ಸಹಾಯಧನ ಪಡೆಯುತ್ತಿದ್ದಾರೆ.

ಗೋವಾದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ರೂ 5,000 ಜಮಾ ಮಾಡಲಾಗುವುದೆಂದು ಮಮತಾಬ್ಯಾನರ್ಜಿ ಹೇಳಿದ್ದಾರೆ. ರಾಜ್ಯದ 3.5 ಲಕ್ಷ ಮಹಿಳೆಯರ ಆರ್ಥಿಕ ಅನುಕೂಲಕ್ಕಾಗಿ ಗೃಹ ಲಕ್ಷ್ಮೀ ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಂತೆ ಮಹಿಳೆರಿಗೆ ವಾರ್ಷಿಕ 60 ಸಾವಿರ ರೂಪಾಯಿ ಸಿಗಲಿದೆಯೆಂದು ಅವರು ಹೇಳಿದ್ದಾರೆ.

ಗೋವಾದ ಅಧಿಕಾರ ಹಿಡಿಯಲು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರವರ ಆಮ್‌ ಆದ್ಮಿ ಪಕ್ಷ ಕೂಡ ಪೈಪೋಟಿಗಿಳಿದೆ. ತಮ್ಮ ಪಕ್ಷಕ್ಕೆ ಆಡಳಿತ ನೀಡಿದರೆ ರಾಜ್ಯದ ಎಲ್ಲ ವರ್ಗದ ಮಹಿಳೆಯರಿಗೆ ತಿಂಗಳಿಗೆ 1.000ರೂ ಸಹಾಯ ಧನ ಕೊಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಕಳೆದ ಭಾರೀ ಅತಿ ದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಪಡೆಯಲಾಗದ ಕಾಂಗ್ರೆಸ್ ಈ ಬಾರಿ ಶತಾಯಗತಾಯ ಅಧಿಕ್ಕಾರಕ್ಕೇರಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಟಿಎಂಸಿ, ಆಪ್ ಸೇರಿದಂತೆ ಇನ್ನಿತರ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಆಪ್ ಕೂಡ ಕಾಂಗ್ರೆಸ್‌ನಿಂದ ದೂರ ನಿಂತಿದೆ. ಅಲ್ಲದೆ ಟಿಎಂಸಿ ಮತ್ತು ಆಪ್ ಸಹ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿವೆ. ಇಂತಹ ಸಂದರ್ಭದಲ್ಲಿ ಮೈತ್ರಿ ಸಾಧ್ಯವೇ ಎಂಬ ಪ್ರಶ್ನೆಗಳು ಮೂಡಿವೆ. ಇವೆಲ್ಲಕ್ಕೂ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.


ಇದನ್ನೂ ಓದಿ: ಗೋವಾ ಚುನಾವಣೆ: ಟಿಎಂಸಿ, ಆಪ್ ಜೊತೆ ಮೈತ್ರಿಯತ್ತ ಕಾಂಗ್ರೆಸ್ ಚಿತ್ತ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂವಿಧಾನ-ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ

0
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭಗೊಂಡಿದ್ದು, ಮತದಾರರು ಎಚ್ಚರಿಕೆಯಿಂದ ಮತದಾನ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. "ಆರ್ಥಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಹೊಸ...