HomeಮುಖಪುಟGoa Election Results | ಗೋವಾ ಅತಂತ್ರ; ಆದರೆ ಬಿಜೆಪಿಗೆ ಸುಲಭದ ತುತ್ತು!

Goa Election Results | ಗೋವಾ ಅತಂತ್ರ; ಆದರೆ ಬಿಜೆಪಿಗೆ ಸುಲಭದ ತುತ್ತು!

- Advertisement -
- Advertisement -

Goa Election Results | 40 ವಿಧಾನಸಭಾ ಕ್ಷೇತ್ರವಿರುವ ಗೊವಾದ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ ರಾಜ್ಯದ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಸಮೀಕ್ಷೆಗಳು ಹೇಳಿದ್ದ ಹಿನ್ನಲೆಯಲ್ಲಿ ಆಡಳಿತರೂಢ ಪಕ್ಷವಾದ ಬಿಜೆಪಿ ತನ್ನ ಮಾಜಿ ಮಿತ್ರ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ್‌ ಪಕ್ಷ(ಎಂಜಿಪಿ) ಜೊತೆಗೆ ಕಳೆದ ಎರಡು ದಿನಗಳಿಂದ ಮಾತುಕತೆ ನಡೆಸುತ್ತಿತ್ತು.

ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ನಾಯಕ ದಿವಂಗತ ಮನೋಹರ್‌ ಪರಿಕ್ಕರ್‌ ಅವರ ಪುತ್ರ ಉತ್ಪಲ್‌ ಪರಿಕ್ಕರ್‌ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಿದ್ದರೂ, ಅಲ್ಪ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅದಕ್ಕೆ ಅಧಿಕಾರ ಹಿಡಿಯಲು ಆಗಿರಲಿಲ್ಲ. ಕೊನೆಗೆ ಕಾಂಗ್ರೆಸ್‌ನ ಮುಕ್ಕಾಲು ಪಾಲು ಶಾಸಕರು ಪಕ್ಷಾಂತರವಾಗಿದ್ದರು.

40 ಕ್ಷೇತ್ರಗಳಿರುವ ರಾಜ್ಯದಲ್ಲಿ ಬಹುಮತಕ್ಕೆ 21 ಕ್ಷೇತ್ರಗಳ ಅಗತ್ಯವಿದೆ. ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಅವರ ಮೈತ್ರಿ ಪಕ್ಷವಾದ ಗೋವಾ ಫಾರ್ವರ್ಡ್ (MFP) ಪಕ್ಷ 1 ಕ್ಷೇತ್ರವನ್ನು ಗೆದ್ದುಕೊಂಡಿದೆ.

ಈ ನಡುವೆ ಟಎಂಟಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (MGP) 2 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಆದರೆ ಟಿಎಂಸಿಗೆ ಯಾವುದೆ ಸ್ಥಾನಗಳು ಲಭ್ಯವಾಗಿಲ್ಲ.

ರಾಜ್ಯದ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ಆಮ್‌ ಆದ್ಮಿ ಪಕ್ಷ (AAP) ಕೇವಲ ಎರಡು ಸ್ಥಾನಗಳನ್ನು ಮಾತ್ರವೆ ಪಡೆದುಕೊಂಡಿದೆ. ಜೊತೆಗೆ ಆಮ್‌ ಆದ್ಮಿ ಪಕ್ಷದ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಇದಲ್ಲದೆ ಗೋವನ್‌ ರೆವಲ್ಯೂಷನ್ ಪಾರ್ಟಿ(GRP) 1 ಕ್ಷೇತ್ರವನ್ನು ಗೆದ್ದುಕೊಂಡಿದ್ದು, ಇನ್ನಿಬ್ಬರು ಪಕ್ಷೇತರ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.

ಗೋವಾದ ಸಂಪೂರ್ಣ ಫಲಿತಾಂಶ ಕೆಳಗಿನಂತಿದೆ.

40 ಕ್ಷೇತ್ರಗಳಿದ್ದು, ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ.

ಬಿಜೆಪಿ – 20
ಕಾಂಗ್ರೆಸ್ – 11
GFP – 1
MGP – 2
AAP – 2
RGP – 1
ಪಕ್ಷೇತರ – 3

ಇದನ್ನೂ ಓದಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...