Homeಮುಖಪುಟಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ 'ಟಿಎಂಸಿ' ಎಂದರೆ ಟೆಂಪಲ್, ಮಸ್ಜಿದ್, ಚರ್ಚ್ ಎಂದು ಕರೆದಿದ್ದಾರೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಸೋಲಿಸೋಣ ಎಂದು ಗೋವಾ ಫಾರ್ವಾಡ್ ಪಾರ್ಟಿ ಅಧ್ಯಕ್ಷ ವಿಜಯ್ ಸರ್ದೇಸಾಯಿ ಕರೆ ನೀಡಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಬಿಜೆಪಿ ಮೈತ್ರಿಯಿಂದ ಹೊರಬಂದಿರುವ ಅವರು ಇಂದು ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗಲಿದ್ದಾರೆ.

“ಭ್ರಷ್ಟ, ಕೋಮುವಾದಿ ಬಿಜೆಪಿಯ ಆಳ್ವಿಕೆಯನ್ನು ಕೊನೆಗೊಳಿಸಲು ವಿರೋಧ ಪಕ್ಷಗಳ ಐಕ್ಯತೆ ಅತಿ ಮುಖ್ಯವಾಗಿದೆ. ಹಾಗಾಗಿ 2022ರ ಚುನಾವಣೆ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಮಮತಾ ಬ್ಯಾನರ್ಜಿಯವರ ಆಹ್ವಾನದ ಮೇರೆಗೆ ನಾನು ಮತ್ತು ನಮ್ಮ ಹಿರಿಯ ಸಹೋದ್ಯೋಗಿಗಳು ಇಂದು ಬೆಳಿಗ್ಗೆ 10 ಗಂಟೆಗೆ ಅವರನ್ನು ಭೇಟಿಯಾಗುತ್ತಿದ್ದೇವೆ” ಎಂದು ವಿಜಯ್ ಸರ್ದೇಸಾಯಿ ತಿಳಿಸಿದ್ದಾರೆ.

ಮೂವರು ವಿಧಾನಸಭಾ ಸದಸ್ಯರನ್ನು ಹೊಂದಿರುವ ಗೋವಾ ಫಾರ್ವಾಡ್ ಪಾರ್ಟಿ ಬಿಜೆಪಿಯೊಂದಿಗೆ ಸರ್ಕಾರದ ಭಾಗವಾಗಿತ್ತು. ವಿಜಯ್ ಸರ್ದೇಸಾಯಿ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ ಬಿಜೆಪಿಯೊಂದಿಗೆ ಬಿರುಕು ಕಾಣಿಸಿಕೊಂಡ ನಂತರ ಬಿಜೆಪಿಯನ್ನು ಸಮಾಜ ವಿರೋಧ ಪಕ್ಷ ಎಂದು ಕರೆದ ಅವರು 2021ರ ಏಪ್ರಿಲ್‌ನಲ್ಲಿ ಮೈತ್ರಿಯಿಂದ ಹೊರಬಂದಿದ್ದರು.

ಅವರು ಮೊದಲು ಕಾಂಗ್ರೆಸ್‌ನೊಂದಿಗೆ ಮೈತ್ರಿಗೆ ಯತ್ನಿಸಿದ್ದರು. ಆದರೆ ಕಾಂಗ್ರೆಸ್ ಒಪ್ಪದಿದ್ದಾಗ ಟಿಎಂಸಿ ಜೊತೆ ಮಾತುಕತೆಗೆ ಮುಂದಾಗಿದ್ದಾರೆ. ಟಿಎಂಸಿ ಸಹ ಗೋವಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪರ್ಧಿಸಲು ನಿರ್ಧರಿಸಿದೆ. ಮೂರು ದಿನಗಳ ಗೋವಾ ಪ್ರವಾಸದಲ್ಲಿರುವ ಮಮತಾ ಬ್ಯಾನರ್ಜಿ ಭರ್ಜರಿ ಚುನಾವಣಾ ತಯಾರಿ ನಡೆಸಿದ್ದಾರೆ.

ನಿನ್ನೆ ಗೋವಾದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ‘ಟಿಎಂಸಿ’ ಎಂದರೆ ಟೆಂಪಲ್ (ದೇವಾಲಯ), ಮಸ್ಜಿದ್ (ಮಸೀದಿ), ಚರ್ಚ್ (ಇಗರ್ಜಿ) ಎಂದು ಕರೆದಿದ್ದಾರೆ. ಹಲವು ದೇವಾಲಯಗಳಿಗೆ ಭೇಟಿ ಕೊಟ್ಟಿರುವ ಅವರು, “ನಾನು ನಿಮ್ಮ ಸಹೋದರಿ. ನಿಮ್ಮ ಅಧಿಕಾರ ಹಿಡಿಯಲು ನಾನು ಬಂದಿಲ್ಲ. ಆದರೆ ಜನರು ತೊಂದರೆ ಎದುರಿಸುತ್ತಿರುವಾಗ ಅವರನ್ನು ನೋಡಲು ನನ್ನ ಹೃದಯ ಬಯಸುತ್ತದೆ” ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’ ಮತ್ತು ನಟಿ, ಕಾರ್ಯಕರ್ತೆ ನಫೀಸಾ ಅಲಿ ಟಿಎಂಸಿ ಸೇರಿರುವುದು ಪಕ್ಷ ಬಲ ತಂದುಕೊಟ್ಟಿದೆ.

40 ಸದಸ್ಯಬಲದ ಗೋವಾ ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ. 2017ರಲ್ಲಿ ನಡೆದ ಚುನವಣೆಯಲ್ಲಿ ಕಾಂಗ್ರೆಸ್ ಪಕ್ಷ 17 ಸ್ಥಾನಗಳಲ್ಲಿ ಜಯಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಯು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿದೆ.


ಇದನ್ನೂ ಓದಿ: ಗೋವಾ: ಟಿಎಂಸಿ ಸೇರಿದ ಮಾಜಿ ಟೆನಿಸ್ ತಾರೆ ‘ಲಿಯಾಂಡರ್‌ ಪೇಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...