Homeಮುಖಪುಟಗೋವಾ: ಸಿಎಂ ಆಯ್ಕೆ ಗೊಂದಲದ ನಡುವೆ ವಿಧಾನಸಭೆ ಅಧಿವೇಶನ ಕರೆದ ರಾಜ್ಯಪಾಲ

ಗೋವಾ: ಸಿಎಂ ಆಯ್ಕೆ ಗೊಂದಲದ ನಡುವೆ ವಿಧಾನಸಭೆ ಅಧಿವೇಶನ ಕರೆದ ರಾಜ್ಯಪಾಲ

- Advertisement -
- Advertisement -

ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಗೋವಾದಲ್ಲಿ ಅನಿಶ್ಚಿತತೆ ಮುಂದುವರಿದಿದ್ದು, ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಮಂಗಳವಾರ ರಾಜ್ಯ ವಿಧಾನಸಭೆಯ ಅಧಿವೇಶನವನ್ನು ಕರೆದಿದ್ದಾರೆ.

ಕಳೆದ ಶುಕ್ರವಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಬಿಜೆಪಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಗೋವಾದ ಮಹಾರಾಷ್ಟ್ರ ಗೋಮಾಂತಕ್ ಪಾರ್ಟಿ (ಎಂಜಿಪಿ) ಮತ್ತು ಮೂವರು ಸ್ವತಂತ್ರ ಶಾಸಕರ ಬೆಂಬಲವನ್ನೂ ಬಿಜೆಪಿ ಹೊಂದಿದೆ.

ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಗೋವಾದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಇಂದು ಸಂಜೆ ಗೋವಾಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲವಾದರೆ ದೇಶ ಛಿದ್ರವಾಗುತ್ತದೆ, ಪಕ್ಷ ಸಂಘಟಿಸಿ: ಡಿ.ಕೆ.ಶಿವಕುಮಾರ್‌‌

ಗೋವಾದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವುದೇ ಮನಸ್ಥಾಪವಿಲ್ಲ  ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದು,  ಬಿಜೆಪಿ ಗೆಲುವು ದಾಖಲಿಸಿರುವ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಂಘಟಿತ ಪ್ರಮಾಣವಚನ ಸಮಾರಂಭವನ್ನು ಕೇಂದ್ರದ ನಾಯಕತ್ವವು ಯೋಜಿಸುತ್ತಿದೆ ಎಂದು ತಿಳಿಸಿದ್ದಾರೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಮತದಾನ ನಡೆದಿದ್ದು, ಮಾರ್ಚ್ 10 ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದುಕೊಂಡಿದೆ.

ಶನಿವಾರದಂದು ಹಾಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...