Homeಮುಖಪುಟಗೋವಾ: ಪ್ರಧಾನಿ ಮೋದಿ ಮೇಲೆ ವಿಡಂಬನಾತ್ಮಕ ಕಾರ್ಟೂನ್ ಶೇರ್ ಮಾಡಿದ್ದಕ್ಕೆ ವ್ಯಕ್ತಿಯ ಬಂಧನ

ಗೋವಾ: ಪ್ರಧಾನಿ ಮೋದಿ ಮೇಲೆ ವಿಡಂಬನಾತ್ಮಕ ಕಾರ್ಟೂನ್ ಶೇರ್ ಮಾಡಿದ್ದಕ್ಕೆ ವ್ಯಕ್ತಿಯ ಬಂಧನ

- Advertisement -
- Advertisement -

“ಹರ್ ಘರ್ ತಿರಂಗ” ಅಭಿಯಾನವನ್ನು ಸೂಚಿಸುವ ವ್ಯಂಗ್ಯ ಚಿತ್ರವನ್ನು ಸಾಮಾಜಿಕ ಜಾಲತಾಣದ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಗೋವಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ರಾಷ್ಟ್ರಧ್ವಜ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನಿಸಲಾಗಿದೆ ಎಂದು ಆ ವ್ಯಕ್ತಿಯ ಮೇಲೆ ಆರೋಪ ಮಾಡಲಾಗಿದೆ.

ಕಲಾವಿದ ಮೀರ್ ಸುಹೇಲ್ ಅವರು ಬಿಡಿಸಿದ ವಿಡಂಬನಾತ್ಮಕ ಕಾರ್ಟೂನ್‌ನ್ನು ಪಣಜಿಯ ನಿವಾಸಿ ನಜಾರಿಯೋ ಡಿಸೋಜಾ ಅವರು ಆಗಸ್ಟ್ 13ರಂದು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ವ್ಯಂಗ್ಯಚಿತ್ರದಲ್ಲಿ ತ್ರಿವರ್ಣ ಧ್ವಜದ ಪಕ್ಕದಲ್ಲಿ ಊಸರವಳ್ಳಿಯ ರೂಪದಲ್ಲಿ ಮೋದಿಯನ್ನು ತೋರಿಸಿದ್ದಾರೆ.

ಈ ವ್ಯಂಗ್ಯಚಿತ್ರವು “ಹರ್ ಘರ್ ತಿರಂಗ” ಅಭಿಯಾನವನ್ನು ಸೂಚಿಸುತ್ತದೆ. ಅದರ ಭಾಗವಾಗಿ ಕೇಂದ್ರವು ಸ್ವಾತಂತ್ರ್ಯ ದಿನದಂದು ಸಾಮಾಜಿಕ ಮಾಧ್ಯಮದಲ್ಲಿ ರಾಷ್ಟ್ರಧ್ವಜದೊಂದಿಗೆ ಸೆಲ್ಫಿಗಳನ್ನು ಪೋಸ್ಟ್ ಮಾಡಲು ನಾಗರಿಕರನ್ನು ಪ್ರೋತ್ಸಾಹಿಸಿತು.

ಪಣಜಿಯ ಸಾಂತಾಕ್ರೂಜ್‌ನ ವಾರ್ಡ್‌ ಸದಸ್ಯ ಇನಾಸಿಯೊ ಡೊಮ್ನಿಕ್‌ ಪಿರೇರಾ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ. ”ಸ್ವಾತಂತ್ರ್ಯ ದಿನದ ಮುನ್ನಾದಿನದಂದು ಡಿಸೋಜಾ ಅವರ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ‘ಅತ್ಯಂತ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್’ನ್ನು ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ತಮ್ಮ ಪೋಸ್ಟ್‌ನಲ್ಲಿ ಅವರು ನಮ್ಮ ದೇಶದ ಪ್ರಧಾನಿಯನ್ನು ರಾಷ್ಟ್ರಧ್ವಜದ ಮೇಲೆ ಗೋಸುಂಬೆಯಂತೆ ಚಿತ್ರಿಸಿದ್ದಾರೆ. ಈ ಅಗೌರವವು ನಮ್ಮ ರಾಷ್ಟ್ರೀಯ ಚಿಹ್ನೆಗಳ ಘನತೆಯನ್ನು ಹಾಳುಮಾಡುತ್ತದೆ ಅದೇರೀತಿ ನಮ್ಮ ಗೌರವಾನ್ವಿತ ಪ್ರಧಾನಿಯನ್ನು ಅವಮಾನಿಸುತ್ತದೆ” ಎಂದು ದೂರಿನಲ್ಲಿ ಹೇಳಿದ್ದಾರೆ.

ಡಿಸೋಜಾ ವಿರುದ್ಧ ಐಪಿಸಿ ಸೆಕ್ಷನ್ 500 (ಮಾನನಷ್ಟಕ್ಕಾಗಿ ಶಿಕ್ಷೆ) ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ಮಾಡುವುದನ್ನು ತಡೆಯುವ ಕಾಯಿದೆ 1971ರ ಸೆಕ್ಷನ್ 2 (ಭಾರತದ ರಾಷ್ಟ್ರೀಯ ಧ್ವಜ ಮತ್ತು ಭಾರತದ ಸಂವಿಧಾನಕ್ಕೆ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

”ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಆರೋಪಿಯನ್ನು ತನಿಖೆಗೆ ಒಳಪಡಿಸಲು ನೋಟಿಸ್ ನೀಡಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...