Homeಮುಖಪುಟಗೋವಾ: ಪಾಕ್ ತಂಡ ಬೆಂಬಲಿಸಿದ ವ್ಯಕ್ತಿಗೆ 'ಭಾರತ್ ಮಾತಾ ಕಿ ಜೈ' ಘೋಷಣೆ ಕೂಗುವಂತೆ ಒತ್ತಾಯ

ಗೋವಾ: ಪಾಕ್ ತಂಡ ಬೆಂಬಲಿಸಿದ ವ್ಯಕ್ತಿಗೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಒತ್ತಾಯ

- Advertisement -
- Advertisement -

ಗೋವಾದ ಕ್ಯಾಲಂಗುಟ್‌ನಲ್ಲಿನ ಅಂಗಡಿ ಮಾಲೀಕರೊಬ್ಬರು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಮತ್ತು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಬಲವಂತಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಟ್ರಾವೆಲ್ ವ್ಲೋಗರ್ ದಿನಾಂಕವಿಲ್ಲದ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಈ ಘಟನೆ ನಡೆದಿದೆ. ಉತ್ತರ ಗೋವಾದ ಕ್ಯಾಲಂಗುಟ್‌ನಲ್ಲಿರುವ ಅಂಗಡಿ ಮಾಲೀಕರು, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ.

ವಿಡಿಯೋದಲ್ಲಿ ವ್ಲಾಗರ್, ಆ ವ್ಯಕ್ತಿಯೊಂದಿಗೆ ಸಂಕ್ಷಿಪ್ತ ಸಂಭಾಷಣೆ ನಡೆಸುತ್ತಿರುವುದು ಕಂಡುಬಂದಿದೆ. ”ಯಾರು ಆಡುತ್ತಿದ್ದಾರೆ? ನೀವು ನ್ಯೂಜಿಲೆಂಡ್‌ಗೆ ಬೆಂಬಲ ವ್ಯಕ್ತಪಡಿಸುತ್ತಿದ್ದೀರಾ?” ಎಂದು ಅಂಗಡಿ ಮಾಲೀಕರನ್ನು ವ್ಲಾಗರ್ ಕೇಳುತ್ತಾನೆ. ಆಗ ಆ ವ್ಯಕ್ತಿ “ಪಾಕಿಸ್ತಾನಕ್ಕೆ” ಎಂದು ಉತ್ತರಿಸುತ್ತಾನೆ. ನಂತರ ವ್ಲಾಗರ್ ಅವನನ್ನು ಏಕೆ ಎಂದು ಕೇಳುತ್ತಾನೆ, ಅದಕ್ಕೆ ಆ ವ್ಯಕ್ತಿ ಇದು ಮುಸ್ಲಿಂ ಪ್ರದೇಶ ಎಂದು ಉತ್ತರಿಸುತ್ತಾನೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು: ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದೇನು?

ಈ ವಿಡಿಯೋ ವೈರಲ್ ಆದ ಬಳಿಕ ಗುರುವಾರದಂದು ಜನರ ಗುಂಪೊಂದು ಅಂಗಡಿ ಮಾಲೀಕರನ್ನು ಸಂಪರ್ಕಿಸಿ ಪಾಕಿಸ್ತಾನವನ್ನು ಬೆಂಬಲಿಸಿದ್ದಕ್ಕಾಗಿ ಪ್ರಶ್ನಿಸಿದ್ದಾರೆ. ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ದೃಶ್ಯಾವಳಿಯಲ್ಲಿ, ಗುಂಪಿನ ಸದಸ್ಯರೊಬ್ಬರು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡುತ್ತಿರುವುದನ್ನು ಕಾಣಬಹುದು, ”ಇಡೀ ಗ್ರಾಮವು ಕಲಾಂಗುಟೆಗೆ ಸೇರಿದೆ ಮತ್ತು ಇದು ಯಾವುದೇ ನಿರ್ದಿಷ್ಟ ಧಾರ್ಮಿಕ ಗುಂಪಿಗೆ ಸೇರಿದ್ದಲ್ಲ” ಎಂದು ಹೇಳಿದ್ದಾನೆ.

ಆ ಬಳಿಕ ಅಂಗಡಿಯ ಮಾಲೀಕನಿಗೆ ಮಂಡಿಯೂರಿ ದೇಶವಾಸಿಗಳ ಕ್ಷಮೆಯಾಚಿಸುವಂತೆ ಕೇಳಲಾಗುತ್ತದೆ. ಆರಂಭದಲ್ಲಿ ಹಿಂಜರಿದ ಅಂಗಡಿ ಮಾಲೀಕರು ಕೊನೆಗೆ ಮಂಡಿಯೂರಿ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸಿದರು. ”ಭಾರತ್ ಮಾತಾ ಕಿ ಜೈ” ಘೋಷಣೆಗೆ ಒತ್ತಾಯಿಸಿ, ಅವರಿಂದ ಹೇಳಿರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರಿಗೆ ಈವರೆಗೂ ಯಾವುದೇ ದೂರುಗಳು ಬಂದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...