Homeಮುಖಪುಟಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಪ್ರಯೋಗಿಸುತ್ತಿದೆ ಎಂದು ಆರೋಪಿಸಿರುವ ಅರವಿಂದ್‌ ಕೇಜ್ರಿವಾಲ್‌, ಪರಿಕ್ಕರ್‌ ಅವರ ಮಗನನ್ನು ಎಎಪಿ ಟಿಕೆಟ್‌ನಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿ ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಮಗ ಉತ್ಪಲ್ ಪರಿಕ್ಕರ್‌ ಕೇಳಿದ್ದ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದೆ.

ಪಣಜಿ ಕ್ಷೇತ್ರವು ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಕ್ಷೇತ್ರವಾಗಿದ್ದು, ಅವರ ಮಗ ಉತ್ಪಲ್ ಪರಿಕ್ಕರ್‌ ಅಲ್ಲಿನ ಟಿಕೆಟ್‌ ಅಕಾಂಕ್ಷಿಯಾಗಿದ್ದರು. ಆದರೆ ಪಕ್ಷವು ಅವರಿಗೆ ಈ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದ್ದು, ಅಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಅಟಾನಾಸಿಯೊ ಮಾನ್ಸೆರೇಟ್ ‘ಬಾಬುಷ್’ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಉತ್ಪಲ್ ಪರಿಕ್ಕರ್ ತಾನು ಪಣಜಿಯಿಂದಲೆ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದು, ಬಿಜೆಪಿ ಪ್ರಸ್ತಾಪಿಸಿದ್ದ ಇತರ ಎರಡು ಕ್ಷೇತ್ರಗಳನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉತ್ಪಲ್ ‌ಅವರಿಗೆ ಇನ್ನೆರಡು ಆಯ್ಕೆಗಳನ್ನು ನೀಡಲಾಗಿದೆ ಎಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. “ಅವರು ಅದನ್ನು ಒಪ್ಪಿಕೊಳ್ಳಬೇಕು ಎಂದು ನಾವು ಭಾವಿಸುತ್ತೇವೆ. ಬಿಜೆಪಿ ಯಾವಾಗಲೂ ಪರಿಕ್ಕರ್ ಪರಿವಾರಕ್ಕೆ ಗೌರವವನ್ನು ನೀಡುತ್ತದೆ” ಎಂದು ಫಡ್ನವಿಸ್‌ ಅವರು ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ತಡೆಯುವ ಉದ್ದೇಶದೊಂದಿಗೆ ಹೇಳಿದ್ದಾರೆ.

ಆದರೆ, ಉತ್ಪಲ್ ಪರಿಕ್ಕರ್‌ ಬಿಜೆಪಿಯ ಆಯ್ಕೆಯನ್ನು ನಿರಾಕರಿಸಲಿದ್ದಾರೆ ಎನ್ನಲಾಗಿದೆ. ಗೋವಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಉತ್ಪಲ್‌ಗೆ ಆನ್‌ ಆದ್ಮಿ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಪರಿಕ್ಕರ್ ಕುಟುಂಬದೊಂದಿಗೆ ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಅಳವಡಿಸಿಕೊಂಡಿರುವುದಕ್ಕೆ ಗೋವಾ ಜನರು ತುಂಬಾ ದುಃಖಿತರಾಗಿದ್ದಾರೆ. ನಾನು ಮನೋಹರ್ ಪರಿಕ್ಕರ್ ಅವರನ್ನು ಯಾವಾಗಲೂ ಗೌರವಿಸುತ್ತೇನೆ. ಉತ್ಪಲ್ ಅವರು ಎಎಪಿ ಸೇರಿ, ಪಕ್ಷದ ಟಿಕೆಟ್‌ನೊಂದಿಗೆ ಚುನಾವಣೆ ಎದುರಿಸಲು ಸ್ವಾಗತ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ, ಶಿವಸೇನೆಯ ಸಂಜಯ್ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರು ಬಿಜೆಪಿಯಿಂದ ಹೊರಗುಳಿದು ಸ್ವತಂತ್ರವಾಗಿ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದರು.

ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ, ರಾಜ್ಯ ಬಿಜೆಪಿಯ ಉನ್ನತ ನಾಯಕರಾಗಿದ್ದ ಮನೋಹರ್ ಪರಿಕ್ಕರ್ ಅವರು 2019 ರಲ್ಲಿ ನಿಧನರಾಗಿದ್ದರು. ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರ ಪ್ರತಿಸ್ಪರ್ಧಿಯಾಗಿದ್ದ ಬಾಬುಷ್ ಮಾನ್ಸೆರೆಟ್ ಅವರು, ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪರಿಕ್ಕರ್ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಬಾಬುಷ್ ಮಾನ್ಸೆರೇಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಬಿಜೆಪಿಗೆ ಸೇರಿಕೊಂಡಿದ್ದರು.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇಂಜಿನಿಯರಿಂಗ್ ಪದವೀಧರರಾದ ಉತ್ಪಲ್ ಪರಿಕ್ಕರ್ ಅವರು ಪಣಜಿಯನ್ನೇ ಕೇಂದ್ರೀಕರಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಷೇತ್ರದ ಜನರನ್ನು ಭೇಟಿ ಮಾಡುತ್ತಿದ್ದು, ದೇವಸ್ಥಾನಗಳಿಗೂ ಭೇಟಿ ನೀಡಿ ಚುನಾವಣೆ ಎದುರಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಕುಟುಂಬ ಎಂಬ ಕಾರಣಕ್ಕಾಗಿ ಅಭ್ಯರ್ಥಿಯಾಗಬೇಕೆಂದು ಯಾರೂ ನಿರೀಕ್ಷಿಸಬಾರದು ಎಂದು ಫಡ್ನವಿಸ್ ಅವರು ಸ್ಪಷ್ಟಪಡಿಸಿದ್ದಾರೆ. “ಗೋವಾದಲ್ಲಿ ಬಿಜೆಪಿಯನ್ನು ಕಟ್ಟಲು ಮನೋಹರ್ ಪರಿಕ್ಕರ್ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಮನೋಹರ್ ಪರಿಕ್ಕರ್ ಅಥವಾ ನಾಯಕರ ಮಗ ಎಂಬ ಕಾರಣಕ್ಕಾಗಿ ಯಾರಿಗೂ ಬಿಜೆಪಿ ಟಿಕೆಟ್ ನೀಡುವುದಿಲ್ಲ. ಯಾರು ಕೆಲಸ ಮಾಡುತ್ತಾರೋ ಅವರನ್ನು ಪರಿಗಣಿಸಲಾಗುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿಯು ಬಾಬುಷ್ ಮೊನ್ಸೆರಾಡ್‌ ಮಾತ್ರವಲ್ಲದೆ ಅವರ ಪತ್ನಿ ಜೆನ್ನಿಫರ್ ಮೊನ್ಸೆರಾಟ್‌ ಅವರನ್ನು ತಾಲೀಗಾವ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಗೋವಾದ ಸಚಿವ ವಿಶ್ವಜಿತ್ ರಾಣೆ ಮತ್ತು ಅವರ ಪತ್ನಿ ದಿವ್ಯಾ ವಿಶ್ವಜಿತ್ ಇಬ್ಬರೂ ಪಟ್ಟಿಯಲ್ಲಿದ್ದಾರೆ. ದಿವ್ಯಾ ವಿಶ್ವಜಿತ್ ಅವರು ಪೊರಿಯಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಮಾವ ಪ್ರತಾಪ್‌ಸಿಂಹ ರಾಣೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...