Homeಮುಖಪುಟ’ಲಕ್ಷಾಂತರ ಭಕ್ತರ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ’: ಶಬರಿಮಲೆ ಅರ್ಚಕರ ಹೇಳಿಕೆ

’ಲಕ್ಷಾಂತರ ಭಕ್ತರ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ’: ಶಬರಿಮಲೆ ಅರ್ಚಕರ ಹೇಳಿಕೆ

- Advertisement -
- Advertisement -

ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಯನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಏಳು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಿದೆ.

ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು ಶಬರಿಮಲೆ ದೇವಾಲಯದ ಅರ್ಚಕ ರಾಜೀವರು ಕಂದಾರೌ ಸ್ವಾಗತಿಸಿದ್ದಾರೆ. ’ಲಕ್ಷಾಂತರ ಭಕ್ತರ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ತೀರ್ಪು ನೀಡದ ಸುಪ್ರೀಂ: 7 ಜನರ ವಿಸ್ತೃತ ಪೀಠಕ್ಕೆ ಮೇಲ್ಮನವಿ ವರ್ಗಾವಣೆ

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್‌ ನೇತೃತ್ವದ ಸಾಂವಿಧಾನಿಕ ಪೀಠ ಸೆಪ್ಟೆಂಬರ್ 2018 ರಲ್ಲಿ ಎಲ್ಲಾ ವಯಸ್ಸಿನ ಮಹಿಳೆಯರು ಅಯ್ಯಪ್ಪ ಸ್ವಾಮಿ ದೇಗುಲವನ್ನು ಪ್ರವೇಶಿಸಬಹುದು ಎಂದು ತೀರ್ಪು ನೀಡಿತ್ತು. ಇದು ಸಾಕಷ್ಟು ವಿರೋಧಕ್ಕೆ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. ಅಲ್ಲದೇ ಅರ್ಜಿ ಮರು ಪರಿಶೀಲಿಸುವಂತೆ ಕೋರಿ ಸುಮಾರು 65 ಅರ್ಜಿಗಳು ಸಲ್ಲಿಕೆಯಾಗಿದ್ದವು.

ಇದನ್ನೂ ಓದಿ: ನಾಳೆ ಶಬರಿಮಲೆ ಮಹತ್ವದ ತೀರ್ಪು ಪ್ರಕಟಿಸಲಿರುವ ಸುಪ್ರೀಂ: ಕೇರಳದಲ್ಲಿ ಭಾರೀ ಬಿಗಿಭದ್ರತೆ

ಮರುಪರಿಶೀಲನಾ ಅರ್ಜಿ ಪರಿಶೀಲಿಸಿರುವ ನ್ಯಾಯಾಲಯ ಉನ್ನತ ಪೀಠ, ಏಳು ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸಿದೆ. ಇನ್ನು ವಿವಿಧ ಧರ್ಮಗಳಲ್ಲೂ ಕೆಲ ಪದ್ಧತಿಗಳು ಇವೆ. ಮಸೀದಿಗಳಲ್ಲಿ ಮಹಿಳೆಯರಿಗೆ ಪ್ರವೇಶ ನಿಬಂಧ, ಪಾರ್ಸಿ ಸಮುದಾಯದಲ್ಲಿ ವಿವಾಹಿತ ಮಹಿಳೆಯರಿಗೆ ದೇವಸ್ಥಾನ ಪ್ರವೇಶ ನಿರ್ಬಂಧ, ದಾವೂದಿ ಬೊಹ್ರಾ ಸಮುದಾಯದಲ್ಲಿ ಸ್ತ್ರೀಯರನ್ನು ನಗ್ನಗೊಳಿಸುವ ಪದ್ಧತಿ ಇದೆ. ಇದೆಲ್ಲವುಗಳನ್ನೂ ಏಳು ನ್ಯಾಯಮೂರ್ತಿಗಳ ಪೀಠ ಗಮನ ಹರಿಸಬೇಕು ಎಂದು ಹೇಳಿದೆ.

10 ರಿಂದ 50 ವರ್ಷದೊಳಗಿನ ಬಾಲಕಿಯರು ಮತ್ತು ಮಹಿಳೆಯರು ಶಬರಿಮಲೆ ಪ್ರವೇಶ ಮಾಡಬಾರದು ಎಂದು ಹೇರಿದ್ದ ನಿಷೇಧವನ್ನು ಉನ್ನತ ನ್ಯಾಯಾಲಯ ಸೆಪ್ಟೆಂಬರ್ 28, 2018 ರಂದು ತೆರವುಗೊಳಿಸಿತ್ತು. ಇದರಿಂದ ದೇಶದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದವು. ಹಿಂಸಾಚಾರ, ಘರ್ಷಣೆಗೆ ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...