Homeಮುಖಪುಟಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

ಗೋಧ್ರಾ ಹತ್ಯಾಕಾಂಡ: ನರೇಂದ್ರ ಮೋದಿ ಕಾರಣ ಎಂದ ಬಿಬಿಸಿ ಸಾಕ್ಷ್ಯಚಿತ್ರ

- Advertisement -
- Advertisement -

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುಬ ಬಿಬಿಸಿ ಸಾಕ್ಷ್ಯಚಿತ್ರ ಮಂಗಳವಾರ ಬಿಡುಗಡೆಯಾಗಿದೆ. ಆದರೆ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿದೆ.

ಗುಜರಾತ್ ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಎಂಬ ಆರೋಪವನ್ನು ಮೋದಿ ಅಲ್ಲಗಳೆದಿದ್ದಾರೆ.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ.

ಆದಾಗ್ಯೂ, ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಇದನ್ನೂ ಓದಿ: ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು ಆದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002 ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...