Homeಮುಖಪುಟಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ 'ಭೋಲೆ ಬಾಬಾ'ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

ಹತ್ರಾಸ್ ಕಾಲ್ತುಳಿತ ಪ್ರಕರಣ| ಸ್ವಯಂಘೋಷಿತ ದೇವಮಾನವ ‘ಭೋಲೆ ಬಾಬಾ’ಗೆ ಕ್ಲೀನ್ ಚಿಟ್‌ ಕೊಟ್ಟ ಎಸ್‌ಐಟಿ: ವರದಿ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ ಅವಘಡಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರು ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಆದರೆ, ಸ್ವಯಂಘೋಷಿತ ದೇವಮಾನವನ ಮೇಲೆ ಯಾವುದೇ ಆರೋಪ ಹೊರಿಸಿಲ್ಲ ಎಂದು ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಜನರು ಸಾವನ್ನಪ್ಪಿದ್ದರು. ಈ ಕುರಿತು ತನಿಖೆ ನಡೆಸಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಒಪ್ಪಿಸಿರುವ ಎಸ್‌ಐಟಿ,
‘ಜನಸಂದಣಿಯೇ ಅವಘಡಕ್ಕೆ ಮುಖ್ಯ ಕಾರಣ’ ಎಂದಿದೆ. ಅಲ್ಲದೆ, ಅಧಿಕಾರಿಗಳು, ಪೊಲೀಸರು ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ದ ನಿರ್ಲಕ್ಷ್ಯದ ಆರೋಪ ಹೊರಿಸಿದೆ.

ವರದಿಗಳ ಪ್ರಕಾರ, ಕಾರ್ಯಕ್ರಮದ ಮುಖ್ಯ ಆಯೋಜಕ ಅಥವಾ ಕೇಂದ್ರ ಬಿಂದು ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಸಿಂಗ್ ಅಲಿಯಾಸ್ ‘ಭೋಲೆ ಬಾಬಾ’ ಗೆ ಎಸ್‌ಐಟಿ ಕ್ಲೀನ್ ಚಿಟ್‌ ನೀಡಿದೆ.

ಹೆಚ್ಚಾಗಿ ಸ್ವಯಂ ಸೇವಕರನ್ನು ಬಂಧಿಸಲಾಗಿದೆ. “ಎಸ್‌ಐಟಿ ಸಂದರ್ಶಿಸಿರುವ ಹಲವಾರು ಜನರು ಭೋಲೆ ಬಾಬಾ ಅವರನ್ನು ದೂಷಿಸಿದ್ದಾರೆ. ಆದರೆ, ಅವರನ್ನು ಎಫ್‌ಐಆರ್ ಅಥವಾ ಎಸ್‌ಐಟಿ ವರದಿಯಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ” ಎಂದು ಅಮಾನತುಗೊಂಡ ಅಧಿಕಾರಿಯೊಬ್ಬರು ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಮತ್ತೊಬ್ಬ ಹಿರಿಯ ಅಧಿಕಾರಿ, “ದಲಿತ ಸಮುದಾಯದಲ್ಲಿ ಭೋಲೆ ಬಾಬಾ ಭಾರೀ ಪ್ರಭಾವ ಹೊಂದಿದ್ದಾರೆ.. ಅವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಆತಂಕವಿರಬಹುದು. ಅಲ್ಲದೆ, ಬಾಬಾ ವಿರುದ್ಧದ ಕ್ರಮವು ಅಶಾಂತಿಯನ್ನು ಉಂಟು ಮಾಡಬಹುದು. ಹಾಗಾಗಿ, ಅವರ ವಿರುದ್ದ ಕ್ರಮ ಕೈಗೊಂಡಿಲ್ಲ ಎಂದು ತೋರುತ್ತದೆ” ಎಂಬುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

“ಬಾಬಾ ತನ್ನ ಪಾದದಡಿಯ ದೂಳನ್ನು ಸಂಗ್ರಹಿಸಲು ಜನರಿಗೆ ಕರೆ ನೀಡಿದರು. ಈ ವೇಳೆ ಜನರು ಒಮ್ಮೆಲೆ ಧಾವಿಸಿದ್ದು ಇದರಿಂದ ಕಾಲ್ತುಳಿತ ಸಂಭವಿಸಿದೆ. ಅವಘಡ ನಡೆದಾಗ ಬಾಬಾ ಮೈಕ್‌ ಮೂಲಕ ತನ್ನ ಭಕ್ತರನ್ನು ಶಾಂತರಾಗಿಸಬಹುದಿತ್ತು. ಆದರೆ, ಅವರು ಕಾರು ಹತ್ತಿ ಸ್ಥಳದಿಂದ ಹೊರಟು ಹೋದರು” ಎಂದು ಮೂವರು ಸದಸ್ಯರ ನ್ಯಾಯಾಂಗ ಸಮಿತಿಯು ಸಂದರ್ಶಿಸಿದ ಕೆಲವು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ವರದಿಯಾಗಿದೆ.

ಭೋಲೆ ಬಾಬಾ ಪರ ವಕೀಲ ಎ ಪಿ ಸಿಂಗ್, ಬಾಬಾ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳನ್ನು ನಿರಾಕರಿಸಿದ್ದು, “ಅವರು ತಲೆಮರೆಸಿಕೊಂಡಿಲ್ಲ. ಕಾನೂನಿನ ಮೇಲೆ ನಂಬಿಕೆ ಮತ್ತು ಗೌರವ ಅವರಿಗಿದೆ. ಪೊಲೀಸರ ನಿರ್ದೇಶನಗಳನ್ನು ಅನುಸರಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮದ ಜನಸಂದಣಿಯಲ್ಲಿದ್ದ ಸಮಾಜ ವಿರೋಧಿಗಳು ಕಾಲ್ತುಳಿತಕ್ಕೆ ಕಾರಣರಾದರು. ಮೃತರ ಶವ ಪರೀಕ್ಷೆ ವರದಿಗಳು ಉಸಿರುಗಟ್ಟಿರುವುದನ್ನು ತೋರಿಸಿದೆ. 10-12 ದುಷ್ಕರ್ಮಿಗಳ ಗುಂಪು ಜನಸಂದಣಿಯನ್ನು ವಿಷಪೂರಿತಗೊಳಿಸಿದೆ. ಜನರ ಸಾವಿಗೆ ಇದೇ ಕಾರಣ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ” ಎಂದಿದ್ದಾರೆ.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...