Homeಮುಖಪುಟ'ದೇವರುಗಳನ್ನು ರಾಜಕೀಯದಿಂದ ಹೊರಗಿಡಬೇಕು..; ತಿರುಪತಿ ಲಡ್ಡು ವಿವಾದದ ಕುರಿತು ಆಂಧ್ರ ಸಿಎಂಗೆ ಚಾಟಿ ಬೀಸಿದ ಸುಪ್ರೀಂ...

‘ದೇವರುಗಳನ್ನು ರಾಜಕೀಯದಿಂದ ಹೊರಗಿಡಬೇಕು..; ತಿರುಪತಿ ಲಡ್ಡು ವಿವಾದದ ಕುರಿತು ಆಂಧ್ರ ಸಿಎಂಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

“ಕನಿಷ್ಠ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರವಿಡಬೇಕು” ಎಂದು ಹೇಳಿದ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ಸೋಮವಾರ ಪ್ರಶ್ನಿಸಿದೆ. ಆರೋಪಕ್ಕೆ ಸಂಬಂಧಿಸಿದಂತೆ ಅದಕ್ಕೆ ಪುರಾವೆ ನೀಡುವಂತೆ ಕೇಳಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು, ಸೆಪ್ಟಂಬರ್ 25 ರಂದು ಎಫ್‌ಐಆರ್ ದಾಖಲಿಸಿದ್ದರೂ, ಸೆಪ್ಟೆಂಬರ್ 26 ರಂದು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಆದರೂ ಸಹ ಮುಖ್ಯಮಂತ್ರಿ ಅವರು ಸೆಪ್ಟೆಂಬರ್ 18 ರಂದು ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ ಎಂಬುದನ್ನು ಕೋರ್ಟ್‌ ಗಮನಿಸಿತು.

“ಉನ್ನತ ಸಾಂವಿಧಾನಿಕ ವ್ಯಕ್ತಿಗಳು ಸಾರ್ವಜನಿಕವಾಗಿ ಹೋಗಿ ಕೋಟ್ಯಂತರ ಜನರ ಭಾವನೆಗಳ ಮೇಲೆ ಪರಿಣಾಮ ಬೀರುವಂತಹ ಹೇಳಿಕೆ ನೀಡುವುದು ಸೂಕ್ತವಲ್ಲ” ಎಂದು ಪೀಠ ಹೇಳಿದೆ.

ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ ತನಿಖೆಯನ್ನು ಮುಂದುವರಿಸಬೇಕೆ ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೆ ಎಂಬುದನ್ನು ನಿರ್ಧರಿಸಲು ಸಹಾಯ ಮಾಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪೀಠ ಕೇಳಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ ಸಲ್ಲಿಸಿದ ಅರ್ಜಿಗಳು ಒಂದು ಬ್ಯಾಚ್ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲುಷಿತ ತುಪ್ಪವನ್ನು ಬಳಸಲಾಗಿದೆ ಎಂಬುದಕ್ಕೆ ಪುರಾವೆ ಕೇಳಿತ್ತು. ಈ ಸಂದರ್ಭದಲ್ಲಿ “ಕನಿಷ್ಠ, ದೇವರುಗಳನ್ನು ರಾಜಕೀಯದಿಂದ ದೂರವಿಡಬೇಕೆಂದು ನಾವು ನಿರೀಕ್ಷಿಸುತ್ತೇವೆ” ಎಂದು ಪೀಠವು ಆಂಧ್ರ ಸಿಎಂಗೆ ಚಾಟಿ ಬೀಸಿತು.

ಇದು ನಂಬಿಕೆಗೆ ಸಂಬಂಧಿಸಿದ ವಿಷಯವಾಗಿದ್ದು, ಲಡ್ಡು ತಯಾರಿಕೆಯಲ್ಲಿ ಕಲುಷಿತ ತುಪ್ಪವನ್ನು ಬಳಸಿದರೆ ಅದನ್ನು ಸ್ವೀಕಾರಾರ್ಹವಲ್ಲ ಎಂದು ಮೆಹ್ತಾ ಪೀಠಕ್ಕೆ ತಿಳಿಸಿದರು. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.

ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ರಾಜ್ಯದಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಈ ತಿಂಗಳ ಆರಂಭದಲ್ಲಿ ಹೇಳಿಕೊಂಡಿದ್ದರು, ಇದು ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು.

ವೈಎಸ್ಆರ್ ಕಾಂಗ್ರೆಸ್ ಪಕ್ಷವು ನಾಯ್ಡು ಅವರು ರಾಜಕೀಯ ಲಾಭಕ್ಕಾಗಿ “ಹೇಯ ಆರೋಪ”ದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದೆ.

ಇದನ್ನೂ ಓದಿ; ಆದೇಶ ಉಲ್ಲಂಘಿಸಿ ‘ಬುಲ್ಡೋಝರ್ ಕಾರ್ಯಾಚರಣೆ’ : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...