Homeಮುಖಪುಟಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ.

- Advertisement -
- Advertisement -

ಅಸ್ಸಾಂ ಜೈಲಿನಿಂದ ಬಿಡುಗಡೆಯಾಗಿರುವ ದಲಿತ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿ, ನನ್ನ ಬಂಧನದ ಹಿಂದೆ ಗುಜರಾತ್-ಅಸ್ಸಾಂ ಸರ್ಕಾರಗಳ ಪಿತೂರಿಯಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಗುಜರಾತ್‌ ವಿಧಾನಸಭೆ ಚುನಾವಣೆಗೆ ಮುನ್ನ ನನ್ನ ವ್ಯಕ್ತಿತ್ವ ನಾಶಪಡಿಸಲು ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಪೂರ್ವ ಯೋಜಿತ ಪಿತೂರಿ ನಡೆಸಲಾಗಿದೆ. ಅದಕ್ಕಾಗಿ ಪೊಲೀಸರು ನನ್ನನ್ನು ಬಂಧಿಸಲು ಒಂದೇ ದಿನ 2500 ಕಿ,ಮೀ ಕ್ರಮಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ. ಕೆಲ ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ ಎಂದು ಮೇವಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮತ್ತು ನನ್ನ ತಂಡದ ಸದಸ್ಯರಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಸರ್ಕಾರವು “ಏನನ್ನಾದರೂ ತೂರಿಸಿರುವ” ಎಲ್ಲ ಅವಕಾಶಗಳಿವೆ. ಆದರೆ ನಾನು ಫ್ಲವರ್, ಫಯರ್ ಆಗಿದ್ದು ಸರ್ಕಾರದ ಎದುರು ತಗ್ಗುವ ಮಾತೆ ಇಲ್ಲ ಎಂದು ಪುಷ್ಪ ಸಿನಿಮಾದ ಸಂಭಾಷಣೆಯನ್ನು ಅನುಕರಿಸಿದ್ದಾರೆ.

ಗುಜರಾತ್‌ನಲ್ಲಿ 22 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆದರೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ, ಯಾವುದೇ ಬಂಧನವಾಗಿಲ್ಲ ಅಥವಾ ಯಾವುದೇ ತನಿಖೆ ನಡೆಸಲಾಗಿಲ್ಲ. ಅದೇ ರೀತಿ ಮುಂದ್ರಾ ಬಂದರಿನಲ್ಲಿ ಸಿಕ್ಕಿದ ಬೃಹತ್ ಮಾದಕ ದ್ರವ್ಯ ಸಾಗಣೆಯ ಪ್ರಕರಣದ ಬಗ್ಗೆ ಯಾವುದೇ ತನಿಖೆಯಾಗಲಿಲ್ಲ. ದಲಿತ ಮಹಿಳೆಯೊಬ್ಬರು ಗುಜರಾತ್ ಸಚಿವರ ವಿರುದ್ಧ ಅತ್ಯಾಚಾರದ ಆರೋಪ ಮಾಡಿದರೂ ಅದರ ಬಗ್ಗೆ ತನಿಖೆಗಳು ಅಥವಾ ಬಂಧನಗಳು ನಡೆದಿಲ್ಲ. ಧರಮ್ ಸಂಸದ್‌ನಲ್ಲಿ ನಿರ್ದಿಷ್ಟ ಸಮುದಾಯದ ನರಮೇಧಕ್ಕೆ ಕರೆ ನೀಡಲಾಯಿತು ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ನನ್ನನ್ನು ಮಾತ್ರ ಏಕೆ ಬಂಧಿಸಲಾಯಿತು ಎಂದು ಜಿಗ್ನೇಶ್ ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನ್ನ ಟ್ವೀಟ್ ಸರಳವಾಗಿತ್ತು. ಶಾಂತಿ ಮತ್ತು ಸೌಹಾರ್ದತೆಗಾಗಿ ಮನವಿ ಮಾಡುವಂತೆ ನಾನು ಪ್ರಧಾನಿಯನ್ನು ಕೇಳಿದ್ದೆ. ಅದಕ್ಕಾಗಿ ಅವರು ನನ್ನನ್ನು ಬಂಧಿಸಿದರು. ಇದು ಏನನ್ನು ತೋರಿಸುತ್ತದೆ? ಇದು ನನ್ನನ್ನು ನಾಶಮಾಡಲು ಪೂರ್ವ ಯೋಜಿತ ಸಂಚು ಅಲ್ಲವೇ? ನನಗೆ ಎಫ್‌ಐಆರ್‌ನ ಪ್ರತಿಯನ್ನು ನೀಡಲಾಗಿಲ್ಲ. ನನ್ನ ವಿರುದ್ಧದ ಸೆಕ್ಷನ್‌ಗಳನ್ನು ನನಗೆ ತಿಳಿಸಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ. ಶಾಸಕನಾಗಿ ನನ್ನ ವಿಶೇಷತೆಯನ್ನು ಕಡೆಗಣಿಸಲಾಗಿದೆ. ನನ್ನ ಬಂಧನದ ಬಗ್ಗೆ ಗುಜರಾತ್ ಅಸೆಂಬ್ಲಿಯ ಸ್ಪೀಕರ್‌ಗೆ ಮಾಹಿತಿ ಇರಲಿಲ್ಲ. ಬಹುಶಃ ನನ್ನನ್ನು ಅಸ್ಸಾಂಗೆ ಕರೆದೊಯ್ದ ನಂತರ ಅವರಿಗೆ ತಿಳಿಸಲಾಗಿದೆ. ಇದು ಗುಜರಾತ್‌ನ ಹೆಮ್ಮೆಗೆ ಧಕ್ಕೆ ತಂದಿದೆ. ಗುಜರಾತ್ ಸರ್ಕಾರಕ್ಕೂ ನಾಚಿಕೆಯಾಗಬೇಕು ಎದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

ಜಿಗ್ನೇಶ್ ಮೇವಾನಿಯವರಿಗೆ ಜಾಮೀನು ನೀಡುವಾಗ ನ್ಯಾಯಾಲಯ, “ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ’. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಧಾನಿಯೇ ಗೋಡ್ಸೆ ಭಕ್ತ. ದ್ವೇಷ ಹರಡುವುದರಲ್ಲಿ ಗೋಡ್ಸೆಯನ್ನೂ ಮೀರಿಸಿದಾತ.

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...