Homeಕರ್ನಾಟಕಚಿನ್ನದ ಕಳ್ಳಸಾಗಣೆ ಪ್ರಕರಣ | ರನ್ಯಾ ರಾವ್ ಜಾಮೀನು ಆದೇಶ ಮಾರ್ಚ್ 27ಕ್ಕೆ ಕಾಯ್ದಿರಿಸಿದ ಕೋರ್ಟ್‌

ಚಿನ್ನದ ಕಳ್ಳಸಾಗಣೆ ಪ್ರಕರಣ | ರನ್ಯಾ ರಾವ್ ಜಾಮೀನು ಆದೇಶ ಮಾರ್ಚ್ 27ಕ್ಕೆ ಕಾಯ್ದಿರಿಸಿದ ಕೋರ್ಟ್‌

- Advertisement -
- Advertisement -

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ ನ್ಯಾಯಾಲಯ ಮಂಗಳವಾರ ಮಾರ್ಚ್ 27 ಕ್ಕೆ ಕಾಯ್ದಿರಿಸಿದೆ. ರನ್ಯಾ ಅವರ ವಕೀಲರ ವಾದಗಳು ಮತ್ತು ತನಿಖಾ ಸಂಸ್ಥೆಯಾದ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಸಲ್ಲಿಸಿದ ಆಕ್ಷೇಪಣೆಗಳ ನಂತರ 63 ನೇ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿದ್ದಾರೆ. ಚಿನ್ನದ ಕಳ್ಳಸಾಗಣೆ ಪ್ರಕರಣ

33 ವರ್ಷದ ರನ್ಯಾ ಅವರನ್ನು ಮಾರ್ಚ್ 3 ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾಗ ಬಂಧಿಸಲಾಗಿತ್ತು. ಅವರು 12.56 ಕೋಟಿ ರೂ. ಮೌಲ್ಯದ 14.2 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಗಳನ್ನು ತಮ್ಮೊಂದಿಗೆ ಸಾಗಿಸುತ್ತಿರುವುದು ಕಂಡುಬಂದಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ಆರೋಪಿಸಿತ್ತು. ಅವರು ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಾರ್ಚ್ 14 ರಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ರನ್ಯಾ ಅವರ ಜಾಮೀನು ತಿರಸ್ಕರಿಸಿದ ನಂತರ ಅವರು ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಭಾರತೀಯ ಆರ್ಥಿಕತೆಯ ಮೇಲಿನ ಪರಿಣಾಮಗಳು, ದುಬೈಗೆ ಹವಾಲಾ ವಹಿವಾಟು, ಅಂತರರಾಷ್ಟ್ರೀಯ ಸಂಪರ್ಕಗಳು, ಈ ವರ್ಷ ದುಬೈಗೆ 27 ಬಾರಿ ಪ್ರಯಾಣ, ಯುಎಇ ನಿವಾಸಿ ಗುರುತಿನ ಚೀಟಿ ಹೊಂದಿರುವುದು ಮತ್ತು ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಕಸ್ಟಮ್ಸ್‌ನ ಗ್ರೀನ್ ಚಾನೆಲ್‌ಗೆ ಪ್ರವೇಶ ಸೇರಿದಂತ ಹಲವು ವಿಚಾರಗಳನ್ನು ವಿಶೇಷ ನ್ಯಾಯಾಲಯವು ನಟಿಯ ಜಾಮೀನು ತಿರಸ್ಕರಿಸುವಾಗ ಅವಲಂಬಿಸಿತ್ತು.

ರನ್ಯಾ ರಾವ್ ಅವರು ಕರ್ನಾಟಕದ ಡಿಜಿಪಿ ಕೆ. ರಾಮಚಂದ್ರ ರಾವ್‌ ಅವರ ಮಲಮಗಳು. ಈ ಪ್ರಕರಣದಲ್ಲಿ ಅವರ ಪತಿ ಜತಿನ್ ಹುಕ್ಕೇರಿ ವಿರುದ್ಧ ಕೂಡಾ ತನಿಖೆ ನಡೆಸಲಾಗುತ್ತಿದ್ದು, ಡಿಜಿಪಿ ಕೆ. ರಾಮಚಂದ್ರ ಅವರನ್ನು ಸರ್ಕಾರ ಕಡ್ಡಾಯ ರಜೆಯಲ್ಲಿರುವಂತೆ ಆದೇಶಿಸಲಾಗಿದೆ. ಚಿನ್ನದ ಕಳ್ಳಸಾಗಣೆ ಪ್ರಕರಣ

ನಟಿ ಮತ್ತು ಮಾಡೆಲ್ ಆಗಿರುವ ರನ್ಯಾ ರಾವ್ ಅವರು ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. 2014ರಲ್ಲಿ ಸುದೀಪ್ ನಿರ್ದೇಶನದ “ಮಾಣಿಕ್ಯ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ನಂತರ 2016ರಲ್ಲಿ ತಮಿಳು ಚಿತ್ರ “ವಾಗಾ” ಮತ್ತು 2017ರಲ್ಲಿ ಕನ್ನಡ ಚಿತ್ರ “ಪಟಾಕಿ”ಯಲ್ಲಿ ನಟಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಕಂಪ್ಯೂಟರ್ ಸಹಾಯಕರು ಮಾಡಿದ ನಮೂದುಗಳ ಮರುಪರಿಶೀಲನೆಗೆ ಯುಪಿ ಸಿಇಒ ಆದೇಶ

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಬೆನ್ನಲ್ಲೇ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಕಂಪ್ಯೂಟರ್ ಸಹಾಯಕರು ಮಾಡಿದ ಎಲ್ಲ ನಮೂದುಗಳನ್ನು ಕಡ್ಡಾಯವಾಗಿ ಮರುಪರಿಶೀಲಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ...

ಮಧ್ಯಪ್ರದೇಶ | ನರ್ಮದಾ ನದಿ ತೀರದಲ್ಲಿ 300ಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆ : ‘ಮತಗಳ್ಳತನ’ಕ್ಕೆ ಸ್ಪಷ್ಟ ಪುರಾವೆ ಎಂದ ಕಾಂಗ್ರೆಸ್

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಮಂಡ್ಲೇಶ್ವರ್ ಘಾಟ್‌ನಲ್ಲಿರುವ ನರ್ಮದಾ ನದಿಯ ದಡದಲ್ಲಿ ಭಾನುವಾರ (ಅ.25) ಒಟ್ಟು 343 ಮತದಾರರ ಗುರುತಿನ ಚೀಟಿಗಳು (ವೋಟರ್ ಐಡಿಗಳು) ಪತ್ತೆಯಾಗಿದ್ದು, ಇವೆಲ್ಲವೂ ಇಂದೋರ್‌ನ ವಿಳಾಸಗಳನ್ನು ಹೊಂದಿವೆ ಎಂದು newindianexpress.com...

ಲೀಟರ್ ಫಿನೈಲ್‌ಗೆ 33,500 ರೂ, ಎಲ್‌ಇಡಿ ಬಲ್ಬ್‌ಗೆ 11,800 ರೂ!: ಬಿಜೆಪಿ ಆಡಳಿತದ ಮಧ್ಯಪ್ರದೇಶ ನಗರಾಡಳಿತದಲ್ಲಿ ಬೃಹತ್ ಭ್ರಷ್ಟಾಚಾರ ಬಯಲಿಗೆಳೆದ ಹಿರಿಯ ಐಎಎಸ್ ಅಧಿಕಾರಿ!

ಮಧ್ಯಪ್ರದೇಶದ ನಗರಾಡಳಿತ ಇಲಾಖೆಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ಖರೀದಿ ಪ್ರಕರಣವು ಈಗ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ವಿವಿಧ ನಗರ ಸ್ಥಳೀಯ ಸಂಸ್ಥೆಗಳು (ULBs) ಮತ್ತು ಪುರಸಭೆಗಳಲ್ಲಿ ಅತ್ಯಗತ್ಯ ವಸ್ತುಗಳನ್ನು ಮಾರುಕಟ್ಟೆ...

ತಮಿಳುನಾಡು| 42 ವರ್ಷಗಳ ನಂತರ ದಲಿತ ಕೇರಿಗೆ ಪ್ರವೇಶಿಸಿದ ದೇವಾಲಯದ ರಥ

42 ವರ್ಷಗಳ ಸುದೀರ್ಘ ಅಂತರದ ನಂತರ, ದೇವಾಲಯದ ರಥವೊಂದು ದಲಿತರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸಿರುವ ಘಟನೆ ತಮಿಳುನಾಡಿನ ಕಾಂಚೀಪುರ ಜಿಲ್ಲೆಯ ವಾಲಾಜಾಬಾದ್ ಸಮೀಪವಿರುವ ಪುತಾಗರಂ ಗ್ರಾಮದಲ್ಲಿ ನಡೆದಿದೆ. ಜಿಲ್ಲಾಡಳಿತದ ಸೂಚನೆಯ ಮೇರೆಗೆ ಭಾನುವಾರ...

ವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ ಕೈಬಿಡಲು ವಿದ್ಯಾರ್ಥಿಗಳ ನಕಾರ

ಕ್ಯಾಂಪಸ್‌ನಲ್ಲಿ ಚುನಾಯಿತ ಪ್ರತಿನಿಧಿಗಳ ಮಂಡಳಿಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು (ಜೆಎಂಐ) ಸುಮಾರು 20 ವರ್ಷಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವುದಾಗಿ...

ಸಾಹಿಲ್ ವಕೋಡ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹ

ಜಾತಿ ತಾರತಮ್ಯದ ಆರೋಪ ಎದುರಿಸುತ್ತಿರುವ ಡೀನ್‌ಗೆ ಸಂಸ್ಥೆಯ ಬೆಂಬಲ, ವಿದ್ಯಾರ್ಥಿಯ ವಿರುದ್ಧ ಮಾಧ್ಯಮಗಳಿಗೆ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ ಸೋರಿಕೆ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ ಮುಂಬೈ: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸಾಹಿಲ್...

ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ 

ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ...

ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

ಪ್ರಸ್ತಾವಿತ 11,200 ಮೆಗಾವ್ಯಾಟ್ ಸಾಮರ್ಥ್ಯದ ಸಿಯಾಂಗ್ ಅಪ್ಪರ್ ಮಲ್ಟಿಪರ್ಪಸ್ ಪ್ರಾಜೆಕ್ಟ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಾಸಿಘಾಟ್‌ನಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ, ಕೇಂದ್ರ ಸರ್ಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ರಾಪಿಡ್ ಆಕ್ಷನ್...

ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಯ) ಡಿ.ವೈ. ಚಂದ್ರಚೂಡ್ ಅವರು ನ್ಯಾಯಾಧೀಶರ ನೇಮಕಾತಿಗಾಗಿ ಪ್ರಸ್ತಾಪಿಸಲಾದ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಕೃತವಾಗಿ ಚರ್ಚಿಸುವ ಮುನ್ನವೇ ಸರ್ಕಾರದೊಂದಿಗೆ ಚರ್ಚಿಸುವ ಅಭ್ಯಾಸವನ್ನು ಹೊಂದಿದ್ದರು ಎಂದು...

ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಕರ್ನಾಟಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಐಟಿ ವಲಯ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...