Homeಮುಖಪುಟದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಗುಜರಾತ್‌ನ ಜುನಾಗಢದಲ್ಲಿ ಸ್ಥಳೀಯ ಎನ್‌ಎಸ್‌ಯುಐ ನಾಯಕ, ದಲಿತ ಸಮುದಾಯಕ್ಕೆ ಸೇರಿದ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಗುಜರಾತ್ ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಗಣೇಶ್ ಜಡೇಜಾ ಮತ್ತು ಇತರರ ವಿರುದ್ಧ ಅಪಹರಣ ಮತ್ತು ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ರಾಜ್‌ಕೋಟ್ ಜಿಲ್ಲೆಯ ಗೊಂಡಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಗನ ದುಷ್ಕೃತ್ಯದ ಬಗ್ಗೆ ಶಾಸಕಿ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಗಣೇಶ್ ಜಡೇಜಾ ಹಾಗೂ ಆತನ ಸಹಚರರು ಶುಕ್ರವಾರ ಮುಂಜಾನೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂಜಯ್ ಸೋಲಂಕಿಯನ್ನು ಕಾರಿನಲ್ಲಿ ಹಿಂಬಾಲಿಸಿದ್ದು, ಸಂಜಯ್‌ ಬೈಕ್‌ಗೆ ಕಾರಿನಲ್ಲಿ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾರೆ. ಸೋಲಂಕಿ ಬೈಕ್‌ನಿಂದ ಕೆಳಕ್ಕೆ ಬಿದ್ದಾಗ, ಕಾರಿನಿಂದ ಕೆಳಗಿಳಿದಿರುವ ಆರೋಪಿಗಳು ಸೋಳಂಕಿಗೆ ದೊಣ್ಣೆಗಳಿಂದ ಥಳಿಸಿದ್ದಾರೆ. ಬಳಿಕ ಅವರನ್ನು ಗೊಂಡಾಲ್‌ನಲ್ಲಿರುವ ಗಣೇಶ್‌ ಜಡೇಜಾ ಅವರ ನಿವಾಸಕ್ಕೆ ಕರೆದೊಯ್ದು ಅಲ್ಲಿ ಗಣೇಶ್ ಮತ್ತು ಇತರರು ನಿರ್ದಯವಾಗಿ ಥಳಿಸಿ ಎನ್‌ಎಸ್‌ಯುಐ ತೊರೆಯುವಂತೆ ಬೆದರಿಸಿದ್ದಾರೆ. ಬಳಿಕ ಬೆಳಿಗ್ಗೆ ಆರೋಪಿಗಳು ಸೋಲಂಕಿಯನ್ನು ಭೇಸನ್ ಕ್ರಾಸ್‌ರೋಡ್‌ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಎನ್‌ಎಸ್‌ಯುಐ ನಗರ ಘಟಕದ ಮುಖ್ಯಸ್ಥರಾಗಿರುವ ಸಂಜಯ್ ಸೋಲಂಕಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆರೋಪಿಗಳ ವಿರುದ್ಧ ಈಗಾಗಲೇ  ಕೊಲೆಯತ್ನ, ಅಪಹರಣ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಸೇರಿ ವಿವಿಧ ಸೆಕ್ಸನ್‌ಗಳಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈ ಕುರಿತು ಜುನಾಗಢ ಎ ವಿಭಾಗದ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿ ಜೆ ಸವಾಝ್‌ ಪ್ರತಿಕ್ರಿಯಿಸಿದ್ದು,  ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. ಗಣೇಶ್ ಜಡೇಜಾ ಮತ್ತು ಆತನ ಸಹಚರರ ವಿರುದ್ಧ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಸಿ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂತ್ರಸ್ತನ ತಂದೆ ರಾಜುಭಾಯಿ ಸೋಲಂಕಿ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಗಣೇಶ್ ಜಡೇಜಾ ಮತ್ತು ಸಹಚರರು ಮೂರು ಕಾರುಗಳಲ್ಲಿ ಜುನಾಗಢ್ ದಾತಾರ್ ರಸ್ತೆ ಪ್ರದೇಶದಿಂದ ನನ್ನ ಮಗನನ್ನು ಅಪಹರಿಸಿ  ಬೆತ್ತಲೆಗೊಳಿಸಿ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿವೈಎಸ್ಪಿ ಹಿತೇಶ್ ಧಾಂಧಲ್ಯಾ, ಗಣೇಶ್ ಜಡೇಜಾ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಧ್ಯಾನ’ಕ್ಕೆ ಹೊರಡುವ ಮೊದಲು ಕೊನೆಯ ಸಭೆಯಲ್ಲೂ ಸುಳ್ಳು ಹೇಳಿದ್ದ ಮೋದಿ: ಪ್ರಧಾನಿಯ 2024ರ ಚುನಾವಣಾ ಪ್ರಚಾರ ಹೇಗಿತ್ತು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....