Homeಕರ್ನಾಟಕಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

- Advertisement -
- Advertisement -

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ ಇದ್ದ ಕಂದಕಕ್ಕೆ ಅಂತೂ ತೆರಬಿದ್ದಿದೆ. ತರುವೇಕೆರೆ ತಹಶೀಲ್ದಾರ್ ಎಂ ಎನ್  ಕುಂ ಇ ಅಹಮದ್ ಸಮ್ಮುಖದಲ್ಲಿ ನವ ದಂಪತಿ ದೇಗುಲ ಪ್ರವೇಶಿಸಿದ್ದಾರೆ.

ಹೊಸದಾಗಿ ವಿವಾಹವಾದ ನವಜೋಡಿಯ ತಮ್ಮೂರಿನ ಗ್ರಾಮ ದೇವತೆ ಶ್ರೀ ಆದಿಶಕ್ತಿ ಅರಶಮ್ಮ ದೇವಿಯ ದೇವಾಲಯ ಪ್ರವೇಶ ಮತ್ತು ಪೂಜೆಗೆ ಸಂಬಂಧಿಸಿದಂತೆ ಸವರ್ಣೀಯರಿಂದ ಆಗಿದ್ದ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ತಹಸಿಲ್ದಾರ್ ಎಂ ಎನ್  ಕುಂ ಇ ಅಹಮದ್ ರವರ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ವತಿಯಿಂದ ಗೋಣಿ ತುಮಕೂರು ಗ್ರಾಮದಲ್ಲಿ  ಸಭೆ ಏರ್ಪಡಿಸಲಾಗಿತ್ತು.

ಗ್ರಾಮದಲ್ಲಿ ಉಂಟಾಗಿದ್ದ ಅಶಾಂತಿ ಹೋಗಲಾಡಿಸಲು ಎರಡೂ ಸಮುದಾಯದ ಮುಖಂಡರುಗಳನ್ನು ದೇವಾಲಯದ ಮುಂಭಾಗದಲ್ಲಿ ಸೇರಿಸಿ ಕಾನೂನು ಪಾಠ ಮಾಡಿದ ತಹಶೀಲ್ದಾರ್, ಜಾರಿಯಲ್ಲಿರುವ ದೌರ್ಜನ್ಯ ಪ್ರಕರಣಗಳ ವಿರುದ್ಧ ನಡೆಯುವ ಕಾಯಿದೆಗಳನ್ನ ವಿವರಿಸಿ ಹೇಳಿದರು.

21ನೇ ಶತಮಾನದಲ್ಲಿದ್ದರೂ ಜಾತಿಯ ವಿಷ ಬೀಜ ಬೀಜ ಇನ್ನೂ ನಶಿಸಿ ಹೋಗಿಲ್ಲ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವೇಶ್ವರರೇ ಜಾತೀಯತೆ ವಿರುದ್ಧ ಅನುಭವ ಮಂಟಪವನ್ನು ನಿರ್ಮಿಸಿದ್ದರು ಎಂದು ತಹಶೀಲ್ದಾರ್ ಶರಣಪರಂಪರೆಯ ಜಾತ್ಯತೀತ ಪಾಠ ಮಾಡಿದರು.

:ಅರಸಮ್ಮ ದೇವಿ ದೇವಾಲಯವು ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದು, ದೇವಾಲಯಕ್ಕೆ ಯಾವುದೇ ಮತ-ಪಂಥವಿಲ್ಲದಂತೆ ಪೂಜೆ ಹಾಗೂ ದರ್ಶನ ಮಾಡಬಹುದು. ಇದಕ್ಕೆ ಯಾರೂ ನಿರ್ಬಂಧ ಮಾಡುವಂತಿಲ್ಲ. ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಅಡಗಿಡದಂತೆ ಎಲ್ಲರೂ ತಮ್ಮ ತಮ್ಮ ಜನಾಂಗೀಯ ದ್ವೇಷಗಳನ್ನು ತಾರತಮ್ಯಗಳನ್ನು ಮರೆತು ಧಾರ್ಮಿಕ ಅಸ್ತಿತ್ವವನ್ನು ಕಂಡುಕೊಳ್ಳಬೇಕು” ಎಂದು ತಹಶೀಲ್ದಾರ್ ಹೇಳಿದರು.

ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ನವಜೋಡಿ ಹಾಗೂ ಪೋಷಕರನ್ನು ಕರೆದುಕೊಂಡು ದೇವಸ್ಥಾನದ ಒಳಗೆ ಪ್ರವೇಶಿಸಿ ಪೂಜೆ ಸಲ್ಲಿಸುವಂತೆ ಹಾಗೂ ದರ್ಶನ ಪಡೆಯುವ ಅವಕಾಶವನ್ನು ಮಾಡಿಕೊಟ್ಟರು. ಇನ್ನು ಮುಂದೆ ಈ ತರಹದ ದೌರ್ಜನ್ಯ ಪ್ರಕರಣಗಳು ತಾಲೂಕಿನ ಯಾವ ಭಾಗದಲ್ಲೂ ನಡೆಯಬಾರದು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು, ಆರಕ್ಷಕ ಉಪನಿರೀಕ್ಷಕ ಟಿ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಕಣ್ಮಣಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಕಂದಾಯ ನಿರೀಕ್ಷಕ ರಂಗಸ್ವಾಮಿ, ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಜಗದೀಶ್, ರಾಜ್ಯ ಗುಪ್ತಚರ ಇಲಾಖೆಯ ರಾಜಕುಮಾರ್, ಅರ್ಚಕ ನಂಜೇಗೌಡ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಧನಂಜಯ, ಕಿರಣ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಮಲ್ಲಿಕ್, ಭೂತೇಶ್, ವಧುವಿನ ಅಣ್ಣ ಜಗದೀಶ್ ಮತ್ತು ಪೋಷಕರು ಸೇರಿದಂತೆ ಗ್ರಾಮಸ್ಥರುಗಳು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...