Homeಕರ್ನಾಟಕರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಉಚಿತ ಬಸ್ ಪ್ರಯಾಣ; ಸಿಎಂ ಸಿದ್ದರಾಮಯ್ಯರಿಂದ ಶಕ್ತಿ ಯೋಜನೆಗೆ...

ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಉಚಿತ ಬಸ್ ಪ್ರಯಾಣ; ಸಿಎಂ ಸಿದ್ದರಾಮಯ್ಯರಿಂದ ಶಕ್ತಿ ಯೋಜನೆಗೆ ಚಾಲನೆ

- Advertisement -
- Advertisement -

ಸರ್ಕಾರ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳ ಪೈಕಿ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ನೀಡಲಾಯಿತು.. ಈ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಮಾಹಿತಿ ನೀಡಿದೆ.

ವಿಧಾನಸೌಧದ ಎದುರು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯನ್ನು ಉದ್ಘಾಟಿಸಿದರು. ಇದೇ ಹೊತ್ತಿಗೆ ಸರಿಯಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ಕೊಟ್ಟರು.

ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಕೆ.ಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಮಧು ಬಂಗಾರಪ್ಪ ಮತ್ತು ಪಕ್ಷದ ಶಾಸಕರು ಕಾರ್ಯಕ್ರಮದಲ್ಲಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ನಾವು ನುಡಿದಂತೆ ನಡೆದಿದ್ದೇವೆ, ನಾವು ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಲ್ಲಿದ್ದೇವೆ. ಇಂದಿನಿಂದ ನಮ್ಮ ಮೊದಲ ಗ್ಯಾರಂಟಿಯ ಅನುಷ್ಠಾನವಾಗುತ್ತಿದೆ. ಕರ್ನಾಟಕದ ಸರ್ವತೋಮುಖ ಅಭಿವೃದ್ದಿಯೇ ನಮ್ಮ ಗುರಿ, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸುವುದೇ ನಮ್ಮ ಧ್ಯೇಯ. # ಜನಪರಕಾಂಗ್ರೆಸ್” ಎಂದು ಹೇಳಿದೆ.

ಇಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ ಯೋಜನೆ ಶಕ್ತಿಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 1.00 ಗಂಟೆಯ ನಂತರ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ. ”ಬಡ ಮತ್ತು ಕೆಳ ಮಧ್ಯಮವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಹೊಸ ಭಾಷ್ಯ ಬರೆಯಲಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಉದ್ಘಾಟನಾ ಕಾರ್ಯಕ್ರಮಕ್ಕೂ ಮುಂಚೆ ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ”ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಿದ ಬಳಿಕ ಬಸ್‌ನಲ್ಲಿ ನಾವೂ ಒಂದು ಸುತ್ತು ಹೋಗುತ್ತೇವೆ. ಕೆಲವರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ಕೊಡುತ್ತೇವೆ. ಮೂರು ತಿಂಗಳ ಒಳಗೆ ಎಲ್ಲರೂ ಸ್ಮಾರ್ಟ್ ಮಾಡಿಸಿಕೊಳ್ಳಬೇಕು” ಎಂದು ತಿಳಿಸಿದರು.

”ಯಾವ ಬಸ್‌ಗಳಲ್ಲಿ ಉಚಿತ ಪ್ರಯಾಣ ಅವಕಾಶ ಸಿಗಲಿದೆ ಎಂದು ಈಗಾಗಲೇ ಜಾಹೀರಾತುಗಳ ಮೂಲಕ ಮಾಹಿತಿ ನೀಡಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ” ಎಂದೂ ಅವರು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...