Homeಮುಖಪುಟನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ, ನೃತ್ಯಗಾರ್ತಿ ಜೊಹ್ರಾ ಸೆಹಗಲ್‌ಗೆ ಗೂಗಲ್ ಡೂಡಲ್ ನಮನ

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ’ಪಾಮ್ ಡಿ ಓರ್’ ಪ್ರಶಸ್ತಿಯನ್ನು ಪಡೆದಿತ್ತು.

- Advertisement -
- Advertisement -

ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, ನೃತ್ಯಸಂಯೋಜಕಿ, ರಂಗಕಲಾವಿದೆ ಜೊಹ್ರಾ ಮುಮ್ತಾಜ್ ಸೆಹಗಲ್‌ಗೆ ಗೂಗಲ್ ವಿಶೇಷ ಗೌರವ ಸಲ್ಲಿಸಿದೆ. ಹಿರಿಯ ನಟಿ ಜೊಹ್ರಾ ಸೆಗಲ್‌ರನ್ನು ಶಾಸ್ತ್ರೀಯ ನೃತ್ಯ ಭಂಗಿಯಲ್ಲಿ, ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ ಅನಿಮೇಟೆಡ್ ಚಿತ್ರವನ್ನು ಡೂಡಲ್ ತೋರಿಸಿದೆ. ಈ ಡೂಡಲ್ ಅನ್ನು ಕಲಾವಿದೆ ಪಾರ್ವತಿ ಪಿಳ್ಳೈ ವಿನ್ಯಾಸಗೊಳಿಸಿದ್ದಾರೆ.

ನಟಿ ಜೊಹ್ರಾ ಅವರ ಚಿತ್ರ ‘ನೀಚಾ ನಗರ’ 1946ರ ಇದೇ ದಿನ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಬಿಡುಗಡೆಯಾಗಿತ್ತು, ಮತ್ತು ಉತ್ಸವದ ಅತ್ಯುನ್ನತ ಗೌರವವಾದ ಪಾಮ್ ಡಿ ಓರ್ ಪ್ರಶಸ್ತಿಯನ್ನು ಪಡೆದಿತ್ತು. ಆ ನೆನಪಿಗಾಗಿ ಗೂಗಲ್ ಈ ವಿಶೇಷ ಗೌರವ ಸಲ್ಲಿಸಿದೆ. ಗೂಗಲ್ ತನ್ನ ಟಿಪ್ಪಣಿಯಲ್ಲಿ ನಟಿಯನ್ನು ‘ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಿಜವಾಗಿಯೂ ಮನ್ನಣೆಗಳಿಸಿದ ದೇಶದ ಮೊದಲ ಮಹಿಳಾ ನಟಿಯರಲ್ಲಿ ಒಬ್ಬರು’ ಎಂದು ಬಣ್ಣಿಸಿದೆ.

PC: Google

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಹಿರಿಯ ನಟಿ ಸೆಹಗಲ್ ಏಪ್ರಿಲ್ 27, 1912 ರಂದು ಉತ್ತರಪ್ರದೇಶದಲ್ಲಿ ಜನಿಸಿದರು. ತನ್ನ 20 ರ ದಶಕದ ಆರಂಭದಲ್ಲಿ ಬ್ಯಾಲೆ ನೃತ್ಯ ಕಲಿಯಲು ಜರ್ಮನಿಯ ಪ್ರತಿಷ್ಠಿತ ಶಾಲೆಗೆ ಸೇರಿಕೊಂಡಿದ್ದರು. ಭಾರತೀಯ ಪ್ರಸಿದ್ಧ ನೃತ್ಯಗಾರ ಉದಯ್ ಶಂಕರ್ ಅವರೊಂದಿಗೆ ಅಂತರರಾಷ್ಟ್ರೀಯ ಪ್ರವಾಸ ಕೈಗೊಂಡಿದ್ದರು. ನಂತರ ಉದಯ್ ಶಂಕರ್ ಅವರ ತಂಡದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. 1942ರ ಆಗಸ್ಟ್‌ನಲ್ಲಿ ಕಾಮೇಶ್ವರ ಸೆಹಗಲ್‌ರನ್ನು ವಿವಾಹವಾದರು.

PC: Scroll.in

ಜೊಹ್ರಾ ಸೆಹಗಲ್ ಬಾಲಿವುಡ್‌ಗೆ ಭಾರಿ ಕೊಡುಗೆ ನೀಡಿದ್ದು, ಅವರು ಕೊನೆಯ ಬಾರಿಗೆ ಸಂಜಯ್ ಲೀಲಾ ಭನ್ಸಾಲಿಯವರ ‘ಸಾವರಿಯಾ’ ಚಿತ್ರದಲ್ಲಿ ರಣಬೀರ್ ಕಪೂರ್ ಮತ್ತು ಸೋನಮ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಅವರು ಯಶಸ್ವಿ ಚಿತ್ರಗಳಾದ ‘ಚೀನಿ ಕಮ್’, ‘ಹಮ್ ದಿಲ್ ದೇ ಚುಕೆ ಸನಮ್’, ‘ದಿಲ್ ಸೆ’, ‘ಕಭಿ ಖುಷಿ ಕಭಿ ಗಮ್’, ಮತ್ತು ‘ವೀರ್ ಜಾರಾ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

PC: Outlook India

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರ್ಷರಣ್ ಕೌರ್ ನವದೆಹಲಿಯಲ್ಲಿ ಜೊಹ್ರಾ ಸೆಹಗಲ್‌ ಅವರ 100ನೇ ಹುಟ್ಟುಹಬ್ಬದಂದು ‘ಜೊಹ್ರಾ ಸೆಗಲ್’ ಪುಸ್ತಕವನ್ನು ಬಿಡುಗಡೆ ಮಾಡಿದ್ದರು.

ಪದ್ಮಶ್ರೀ (1998), ಕಾಳಿದಾಸ್ ಸಮ್ಮನ್ (2001), ಮತ್ತು ಪದ್ಮವಿಭೂಷಣ್ (2010) ಸೇರಿ ಹಲವು ಗೌರವಗಳನ್ನು ಸೆಹಗಲ್ ಪಡೆದಿದ್ದಾರೆ. ತಮ್ಮ 102 ನೇ ವಯಸ್ಸಿನಲ್ಲಿ ನವದೆಹಲಿಯಲ್ಲಿ ನಿಧನರಾದರು.


ಇದನ್ನೂ ಓದಿ: ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...