Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...