Homeಕರ್ನಾಟಕ‘ಆರ್‌ಎಸ್‌ಎಸ್‌ ಬಹಿರಂಗವಾಗಿ ಮುಸ್ಲಿಂ ವಿರುದ್ಧ; ಅಂತರಂಗದಲ್ಲಿ ದಲಿತರ ವಿರುದ್ಧ'

‘ಆರ್‌ಎಸ್‌ಎಸ್‌ ಬಹಿರಂಗವಾಗಿ ಮುಸ್ಲಿಂ ವಿರುದ್ಧ; ಅಂತರಂಗದಲ್ಲಿ ದಲಿತರ ವಿರುದ್ಧ’

- Advertisement -
- Advertisement -

ಆರ್‌ಎಸ್‌ಎಸ್‌ ಕುರಿತು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ’ ಎಂದು ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ’ ಎಂದಿದ್ದಾರೆ.

‘ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ. ಬಾಯಿಯಲ್ಲಿ ಹಿಂದೂ ನಾವೆಲ್ಲರೂ ಒಂದು ಎನ್ನುವ ಮಂತ್ರವನ್ನು ಸದಾ ಪಠಿಸುವ ಸಂಘ ಪರಿವಾರದ ನಾಯಕರು ಶೂದ್ರರು ಮತ್ತು ದಲಿತರನ್ನು ಬಡಿಯಲು ಕಂಕುಳಲ್ಲಿ ಬಡಿಗೆ ಇಟ್ಟುಕೊಂಡಿರುತ್ತಾರೆ’ ಎಂದಿದೆ.

‘ಗೂಳಿಹಟ್ಟಿ ಶೇಖರ್ ಅವರಂತಹ ದಲಿತ ಸಮುದಾಯದ ನಾಯಕರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆ ಮತ್ತು ಸಂವಿಧಾನ ಮಾತ್ರ ರಕ್ಷಣೆ ನೀಡಬಹುದೇ ಹೊರತು ಸಂಘ ಪರಿವಾರದ ಸಾವರ್ಕರ್, ಗೋಲ್ವಾಲ್ಕರ್ ಚಿಂತನೆಗಳಲ್ಲ. ಶೇಖರ್ ಅವರು ತನ್ನ ಅನುಭವದಿಂದ ಪಾಠ ಕಲಿಯಲಿ ಎಂದು ಹಾರೈಸುತ್ತೇನೆ’ ಎಂದು ಸಲಹೆ ನೀಡಿದ್ದಾರೆ.

‘ಸಂವಿಧಾನ ಜಾರಿಯಾಗಿ 7 ದಶಕಗಳು ಕಳೆದಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬದಲಾಗಿದೆ. ಹಾಗಾಗಿ ಇನ್ನೆಷ್ಟು ವರ್ಷ ಮೀಸಲಾತಿ ಕೊಡಬೇಕು ಎಂದು ಪ್ರಶ್ನಿಸುತ್ತಿದ್ದವರು ಇಂದು ಗೂಳಿಹಟ್ಟಿ ಶೇಖರ್ ಅವರಿಗಾದ ಅವಮಾನದ ಹೊಣೆ ಹೊರುವರೇ? ಇದೇ ಕಾರಣಕ್ಕೆ ನಾನು ಹಿಂದೆ ನೂರು ಬಾರಿ ಹೇಳಿದ್ದೇನೆ, ಈಗ ಮತ್ತೆ ಹೇಳುತ್ತೇನೆ ‘ಎಲ್ಲಿಯವರೆಗೆ ಜಾತೀಯತೆ, ಅಸ್ಪೃಶ್ಯತೆ ಜೀವಂತವಾಗಿರುತ್ತದೆ ಅಲ್ಲಿಯವರೆಗೆ ಮೀಸಲಾತಿ ವ್ಯವಸ್ಥೆ ಇರಬೇಕು’. ಜಾತೀಯತೆಯನ್ನು ತೊಡೆದು ಹಾಕಲು ಮೀಸಲಾತಿಯೂ ಒಂದು ಪ್ರಬಲ ಅಸ್ತ್ರ’ ಎಂದು ಪ್ರತಿಪಾದಿಸಿದ್ದಾರೆ.

‘ಆರ್.ಎಸ್.ಎಸ್ ಸ್ಥಾಪನೆಯಾಗಿ ಇನ್ನೆರಡು ವರ್ಷಕ್ಕೆ ನೂರು ವರ್ಷಗಳಾಗುತ್ತದೆ. ಈ ವರೆಗೆ ಒಬ್ಬನೇ ಒಬ್ಬ ತಳ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಆರ್.ಎಸ್.ಎಸ್ ತನ್ನ ಸರಸಂಘಚಾಲಕ ಇಲ್ಲವೇ ಇತರ ಉನ್ನತ ಪದಾಧಿಕಾರಿಯಾಗಿ ಯಾಕೆ ನೇಮಿಸಿಲ್ಲ ಎಂದು ನಾನು ಪ್ರಶ್ನೆ ಮಾಡಿದ್ದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದವರು, ಎದೆ ಬಡಿದುಕೊಂಡು ನನ್ನ ಮೈಮೇಲೆ ಎರಗಿದರು, ಅಪಪ್ರಚಾರದ ಮೂಲಕ ನನ್ನ ನಿಂದನೆ ಮಾಡಿದರು. ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಹಿಂದುಗಳೆಲ್ಲ ಒಂದು’ ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ “ಹಿಂದೂ.. ಒಂದು” ಎಂದು ಸುಳ್ಳು ಹೇಳಿ ಜನರನ್ನು ನಂಬಿಸಿ ಮೋಸಮಾಡುವುದನ್ನು ನಿಲ್ಲಿಸಬೇಕು’ ಎಂದು ಹೇಳಿದ್ದಾರೆ.

‘ತನ್ನ ‘ಹೊಡಿ ಬಡಿ’ ರಾಜಕಾರಣ ಮತ್ತು ತನ್ನ ಸೈದ್ಧಾಂತಿಕ ವಿರೋಧಿಗಳನ್ನು ಹಣಿಯಲು ಶೂದ್ರ ಮತ್ತು ದಲಿತ ಸಮುದಾಯದ ಅಮಾಯಕರನ್ನು ಯಥೇಚ್ಚವಾಗಿ ಬಳಸುವ ಸಂಘ ಪರಿವಾರ, ಅವಕಾಶಗಳನ್ನು ನೀಡುವ ಸಮಯ ಬಂದಾಗ ಮನೆ ಗೇಟ್‌ನಿಂದ ಹೊರಗೆ ಇಡುತ್ತಾ ಬಂದಿದೆ. ಶೂದ್ರ ಮತ್ತು ದಲಿತ ಸಮುದಾಯ ಈಗಲಾದರೂ ಕಣ್ತೆರೆದು ಈ ನಗ್ನ ಸತ್ಯವನ್ನು ಅರಿತುಕೊಳ್ಳಲಿ’ ಎಂದಿದ್ದಾರೆ.

ಗೂಳಿಹಟ್ಟಿ ಆರೋಪಕ್ಕೆ ಆರ್‌ಎಸ್‌ಎಸ್‌ ಸ್ಪಷ್ಟನೆ:

ಗೂಳಿಹಟ್ಟಿ ಶೇಖರ್ ಆಡಿಯೋ ಆರೋಪಕ್ಕೆ ಕರ್ನಾಟಕ ಆರ್‌ಎಸ್‌ಎಸ್‌ ಸ್ಪಷ್ಟನೆ ನೀಡಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ‘ಹೊಸದುರ್ಗದ ಮಾಜಿ ಶಾಸಕರಾದ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ. ಹೆಡೆಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದ್ದಾರೆ. ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ಇಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲದ ಆರೋಪ’ ಎಂದು ಹೇಳಿದ್ದಾರೆ.

‘ಆರ್‌ಎಸ್‌ಎಸ್‌ನ ಯಾವುದೇ ಕಚೇರಿಯಲ್ಲಾಗಲಿ ಅಥವಾ ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಾಗಲಿ, ಎಲ್ಲರಿಗೂ ಮುಕ್ತ ಪ್ರವೇಶವಿದೆ. ಎಲ್ಲ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು, ಆ ನ೦ತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾಗಿದ್ದಾರೆ. ಎಲ್ಲಿಯೂ ತಮಗಾದ ಈ ‘ಅವಮಾನ’ದ ಬಗ್ಗೆ ಹೇಳಿರಲಿಲ್ಲ. ಈಗ ಹತ್ತು ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ. ರಾಷ್ಟೀಯ ಸ್ವಯಂಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ; ಮನುವಾದ ವಿಧಿಸಿದ ಎಚ್ಚರಿಕೆ; ಗೂಳಿಹಟ್ಟಿ ಆಡಿಯೋ ವಿವಾದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...