Homeಮುಖಪುಟಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು...

ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಗೌರವ್‌ ವಲ್ಲಭ್‌ ಈಗ ಜಾರ್ಖಂಡ್‌ ಸಿಎಂ ಎದುರು ಕಣಕ್ಕೆ…

- Advertisement -
- Advertisement -

ಟಿವಿ ಚರ್ಚೆಯೊಂದರಲ್ಲಿ ಬಿಜೆಪಿಯ ಸಂಬಿತ್‌ ಪಾತ್ರರನ್ನು ಟ್ರಿಲಿಯನ್‌ಗೆ ಎಷ್ಟು ಸೊನ್ನೆ ಎಂದು ಕೇಳಿ ಗಮನಸೆಳೆದಿದ್ದ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಗೌರವ್‌ ವಲ್ಲಭ್ ಈಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್ ಜಾರ್ಖಂಡ್ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಜಾರ್ಖಂಡ್ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೆಯದು ನವೆಂಬರ್ 30 ರಂದು ಮತ್ತು ಕೊನೆಯದು ಡಿಸೆಂಬರ್ 20 ರಂದು ನಡೆಯಲಿದೆ. ಡಿಸೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.

ಇದನ್ನೂ ಓದಿ: ಟಿವಿ ಚರ್ಚೆಯಲ್ಲಿ ಬಿಜೆಪಿಯ ಸಂಬಿತ್ ಪಾತ್ರನಿಗೆ ಮುಖಭಂಗ ಮಾಡಿದ ಗೌರವ್ ವಲ್ಲಭ್ ಯಾರು ಗೊತ್ತೆ?

ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರನ್ನು ಜೆಮ್‌ಶೆಡ್‌ಪುರ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಎದುರಿಸಲು ಕಾಂಗ್ರೆಸ್ ತನ್ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರನ್ನು ಶನಿವಾರ ಕಣಕ್ಕಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ವಲ್ಲಭ್ ಅವರ ಉಮೇದುವಾರಿಕೆಯನ್ನು ಅಂಗೀಕರಿಸಿದ್ದಾರೆ. ಇದರೊಂದಿಗೆ ಜಾರ್ಖಂಡ್ ಚುನಾವಣೆಗೆ ಕಾಂಗ್ರೆಸ್ ಈವರೆಗೆ ಘೋಷಿಸಿದ ಒಟ್ಟು ಅಭ್ಯರ್ಥಿಗಳ ಸಂಖ್ಯೆ 27 ಆಗಿದೆ.

ರಾಜಸ್ಥಾನದ ಪಾಲಿ ನಗರದ ನಿವಾಸಿಯಾದ 42 ವರ್ಷದ ಗೌರವ್ ವಲ್ಲಭ್, ಪಾಲಿಯಲ್ಲಿ ಶಾಲಾ ಶಿಕ್ಷಣದ ನಂತರ ಜೈಪುರದಿಂದ ಸಿಎ ಅಧ್ಯಯನ ಮಾಡಿದರು. ಗೌರವ್ ಅವರ ಪೋಷಕರು ಪಾಲಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಗೌರವ್ 2000-2003ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್ ಪೂನಾದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು. ಇದರೊಂದಿಗೆ ಅವರು ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದ ಅಜ್ಮೀರ್‌ನಿಂದ ಎಂ.ಕಾಂನಲ್ಲಿ ‘ಚಿನ್ನದ ಪದಕ’ವನ್ನು ಗಳಿಸಿದ್ದಾರೆ.

‘2017ರವರೆಗೆ ನಾನು ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದೆ, ಆನಂತರ ಭಾರತಕ್ಕೆ ಮರಳಿದೆ. ನಮ್ಮ ದೇಶದಲ್ಲಿ ಮಾಬ್ ಲಿಂಚಿಂಗ್ (ಗುಂಪು ಹಲ್ಲೆ) ಹೆಸರಿನಲ್ಲಿ ಜನರನ್ನು ದ್ವೇಷಕ್ಕೆ ಸಜ್ಜುಗೊಳಿಸಲಾಗುತ್ತಿದೆ. ಇದರ ವಿರುದ್ಧ ಹೋರಾಡಲು ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿದ್ದೇನೆ. ಆದ್ದರಿಂದ 2018 ರವರೆಗೆ ಪ್ಯಾನೆಲಿಸ್ಟ್ ಆಗಿ ಕೆಲಸ ಮಾಡಿದೆ, ಈ ವರ್ಷದ ಜನವರಿಯಲ್ಲಿ ರಾಷ್ಟ್ರೀಯ ವಕ್ತಾರನಾಗಿದ್ದೇನೆ ಎನ್ನುತ್ತಾರೆ.

ಇದನ್ನೂ ಓದಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ: 81 ಕ್ಷೇತ್ರಗಳಿಗೆ 5 ಹಂತಗಳಲ್ಲಿ ಚುನಾವಣೆ..

“ಸಿಎಂ ರಘುವರ್ ದಾಸ್ ಜಿ ವಿರುದ್ಧ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಪೂರ್ವ ಅಸೆಂಬ್ಲಿ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿದೆ. ಮುಖ್ಯಮಂತ್ರಿ ಎದುರು ಸ್ಪರ್ಧಿಸುವ ಸವಾಲಿಗೆ ನಾನು ಸಿದ್ಧ. ಇಷ್ಟು ದಿನ ಜಾರ್ಖಂಡ್ ಜನರನ್ನು ಮೋಸಗೊಳಿಸಲಾಗಿದೆ ಮತ್ತು ಈ ಚುನಾವಣಾ ಸ್ಪರ್ಧೆಯಲ್ಲಿ ನಾನು ವಿಜಯಶಾಲಿಯಾಗುತ್ತೇನೆ. ನನ್ನ ಮೇಲೆ ನಂಬಿಕೆಯನ್ನು ಇಟ್ಟ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಪದಾಧಿಕಾರಿಗಳಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಿಮ್ಮ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ” ಎಂದು ಗೌರವ್‌ ವಲ್ಲಭ್‌ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ರವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾದಳ ಇತ್ತೀಚೆಗೆ ಚುನಾವಣಾ ಪೂರ್ವ ಒಪ್ಪಂದವನ್ನು ಘೋಷಿಸಿವೆ.

ಇದನ್ನೂ ಓದಿ: ಐದು ಟ್ರಿಲಿಯನ್ ಡಾಲರ್ ನಲ್ಲಿ ಎಷ್ಟು ಸೊನ್ನೆಯಿವೆ ಹೇಳಿ ನೋಡೋಣ??

ಜಾರ್ಖಂಡ್ ವಿಧಾನಸಭೆಯಲ್ಲಿ 81 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಕಾಂಗ್ರೆಸ್ ಸ್ಪರ್ಧಿಸಲಿದೆ. ಆರ್‌ಜೆಡಿ ಏಳು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೈತ್ರಿಕೂಟದ ಬಹುಪಾಲು ಪಾಲು ಜೆಎಂಎಂಗೆ ಹೋಗಿದ್ದು ಅದು 43 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಏಕಾಂಗಿಯಾಗಿ ಕಣಕ್ಕಿಳಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...