Homeಕರ್ನಾಟಕ‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

‘ವಾರ್ತಾಭಾರತಿ’ಗೆ ಸರ್ಕಾರಿ ಜಾಹಿರಾತು ನಿರಾಕರಣೆ: ಮುಖ್ಯಮಂತ್ರಿಗೆ ಪತ್ರ ಬರೆದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಪ್ರಮುಖ ದಿನ ಪತ್ರಿಕೆಯಾಗಿರುವ ‘ವಾರ್ತಾಭಾರತಿ’ ಗೆ ರಾಜ್ಯ ಸರ್ಕಾರ ತನ್ನ ಸರ್ಕಾರಿ ಜಾಹಿರಾತುಗಳನ್ನು ನೀಡದೆ ಇರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ವಾರ್ತಾಇಲಾಖೆಯ ಆಯುಕ್ತರಾಗಿರುವ ಡಾ.ಪಿ.ಎಸ್. ಹರ್ಷ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಅವರು ಪತ್ರಿಕೆಯ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಪತ್ರಿಕೆಯೊಂದಕ್ಕೆ ಅನ್ಯಾಯ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಧ್ವನಿ ಎತ್ತಿದ್ದಾರೆ.

ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, “ವಾರ್ತಾಭಾರತಿ ಪತ್ರಿಕೆಗೆ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ಸಿದ್ದರಾಮಯ್ಯ ಅವರು ತನ್ನ ಪತ್ರದಲ್ಲಿ, “ಕರ್ನಾಟಕದಲ್ಲಿ ನೈಜ ಸ್ಫೂರ್ತಿಯಲ್ಲಿ ಪತ್ರಿಕಾ ವೃತ್ತಿಯನ್ನು ನಿರ್ವಹಿಸುತ್ತಿರುವ ಮಾಧ್ಯಮಗಳಲ್ಲಿ ‘ವಾರ್ತಾಭಾರತಿ’ ಕೂಡ ಒಂದು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ರಂಗಗಳಿಗೆ ಭಾರತದ ಸಂವಿಧಾನದ ಆಶಯಗಳೆ ಆತ್ಯಂತಿಕವಾಗಿವೆ. ನಮ್ಮ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕೆಲಸ ಮಾಡುವವರೆಲ್ಲರೂ ನೈಜ ಸ್ಫೂರ್ತಿಯಿಂದ ಕೆಲಸ ಮಾಡುತ್ತಿದ್ದಾರೆಂದು ಅರ್ಥ” ಎಂದು ಹೇಳಿದ್ದಾರೆ.

“ಈ ನಾಲ್ಕೂ ಅಂಗಗಳು ತಮಗೆ ನಿರ್ಧಿಷ್ಟ ಪಡಿಸಿದ ಚೌಕಟ್ಟುಗಳಲ್ಲೆ ಕೆಲಸ ಮಾಡಬೇಕು. ಹಾಗೆ ಒಂದು ಚೌಕಟ್ಟನ್ನು ವಿಧಿಸಿಕೊಂಡು ಕೆಲಸ ಮಾಡುತ್ತಿರುವ ಪತ್ರಿಕೆಗಳಲ್ಲಿ ವಾರ್ತಾಭಾರತಿ ಕೂಡ ಒಂದು. ನಾನದರ ಓದುಗ ಆಗಿರುವುದರಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ ಮೂರು ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರವು ‘ನ್ಯೂಸ್‌ ಪ್ರಿಂಟ್‌’ನ ಜಿಲೆ ವಿಪರೀತ ಹೆಚ್ಚಿಸಿದೆ. ಜಿಎಸ್‌ಟಿಯನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಪತ್ರಿಕೆಗಳು ಕೂಡ ದಿನ ನಿತ್ಯದ ಚಟುವಟಿಕೆಗಳನ್ನು ನಡೆಸಲೂ ಆಗದಷ್ಟು ಸುಸ್ತಾಗುತ್ತಿವೆ. ಇದರಿಂದಾಗಿ ಲೆಕ್ಕವಿಲ್ಲದಷ್ಟು ಪತ್ರಕರ್ತರನ್ನು ಕೆಲಸದಿಂದ ತೆಗೆದು ಹಾಕಿವೆ. ಅನೇಕ ಪತ್ರಿಕೆಗಳು ಸಾಲ ತಗೆದು, ಆಸ್ತಿ ಪಾಸ್ತಿಗಳನ್ನು ಮಾರಿ ನಿರ್ವಹಣೆ ಮಾಡುತ್ತಿವೆ” ಎಂದು ಅವರು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ಉಳಿಯಬೇಕೆಂದರೆ ಮಾಧ್ಯಮಗಳು ಉಳಿಯಬೇಕು. ಕೇಂದ್ರ ಸರ್ಕಾರಕ್ಕೆ ಈ ಕುರಿತು ಕಾಳಜಿಗಳಿದ್ದರೆ ನ್ಯೂಸ್‌‌ ಪ್ರಿಂಟ್‌ನ ಬೆಲೆಯನ್ನು ಇಳಿಸಬೇಕು. ಅತಿ ಕಡಿಮೆ ದರದಲ್ಲಿ ಪತ್ರಿಕೆಗಳಿಗೆ ಪೂರೈಸಬೇಕು. ಇಂಥ ಸಂದರ್ಭದಲ್ಲಿ ಪತ್ರಿಕೆಗಳು ಸರ್ಕಾರವು ನೀಡುವ ಜಾಹಿರಾತುಗಳ ಮೇಲೆ ಅವಲಂಬಿತವಾಗುತ್ತವೆ. ಸರ್ಕಾರವು ನಿಷ್ಟಕ್ರಪಾತವಾಗಿ ಜಾಹಿರಾತುಗಳನ್ನು ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

“ನಮ್ಮ ಸರ್ಕಾರದ ಅವಧಿಯಲ್ಲಿ ಹೊಸದಿಗಂತದಂತಹ ಪತ್ರಿಕೆಗಳಿಗೆ ಕೂಡ ಉಳಿದ ಪತ್ರಿಕೆಗಳಿಗೆ ನೀಡಿದ ಪ್ರಮಾಣದಲ್ಲೆ ಜಾಹಿರಾತುಗಳನ್ನು ನೀಡಿದ್ದೆವು. ಜನರ ತೆರಿಗೆ ಹಣದಲ್ಲಿ ಸರ್ಕಾರ ನಡೆಸುವಾಗ ಸರ್ಕಾರಗಳು ಪಕ್ಷಪಾತ ಮಾಡದಂತೆ ಎಚ್ಚರವಹಿಸಬೇಕಾಗುತ್ತದೆ. ಕನ್ನಡದ 9 ದಿನಪತ್ರಿಕೆಗಳನ್ನು ರಾಜ್ಯ ಪತ್ರಿಕೆಗಳಂದು ಗುರುತಿಸಲಾಗಿದೆ. ಅದರಲ್ಲಿ ವಾರ್ತಾಭಾರತಿ ಕೂಡ ಒಂದು. ಆದರೆ ಸರ್ಕಾರವು ಪಕ್ಷಪಾತ ಮಾಡಿ ಕಳೆದ ಒಂದು ವರ್ಷದಿಂದ ಸುಮಾರು 1 ಕೋಟಿಗೂ ಹೆಚ್ಚಿನ ಮೌಲ್ಯದ ಜಾಹಿರಾತುಗಳನ್ನು ನೀಡದೆ ವಂಚಿಸಿ, ಪಕ್ಷಪಾತ ಮಾಡಲಾಗಿದೆ. ಇದು ಅಕ್ಷಮ್ಯಕರ ನಿಲುವು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪತ್ರಿಕೆಗಳ ಕೆಲಸವೆ ಆಡಳಿತ ನಡೆಸುವ ಸರ್ಕಾರಗಳ ಮುಖಕ್ಕೆ ಕನ್ನಡಿ ಹಿಡಿಯುವುದು. ಸರಿಯಾದ ಕೆಲಸ ಮಾಡಿದರೆ ಬೆನ್ನುತಟ್ಟುವುದು, ತಪ್ಪು ಮಾಡಿದರೆ ತಪ್ಪು ಮಾಡುತ್ತಿದ್ದೀರೆಂದು ಹೇಳಬೇಕಾದುದು ಮಾಧ್ಯಮಗಳ ನೈತಿಕ ಜವಾಬ್ದಾರಿ. ಈ ನಿಲುವಿಗೆ ವಿರುದ್ಧವಾದರೆ ಅದನ್ನು ಅನೈತಿಕ ಪತ್ರಿಕೋದ್ಯಮ ಎನ್ನಬೇಕಾಗುತ್ತದೆ. ನೈತಿಕ ಪತ್ರಿಕೋದ್ಯಮವನ್ನು ಆರೋಗ್ಯಕರ ಮನಸ್ಸುಗಳು ಬೆಂಬಲಿಸಬೇಕು, ಪ್ರೋತ್ಸಾಹಿಸಬೇಕು” ಎಂದು ಅವರು ತಿಳಿಸಿದ್ದಾರೆ.

“ಆದ್ದರಿಂದ ಸರ್ಕಾರವು ವಾರ್ತಾಭಾರತಿಗೆ ಮಾಡಿರುವ ಅನ್ಯಾಯವನ್ನು ಕೂಡಲೆ ಸರಿಪಡಿಸಿ ಇದುವರೆಗೆ ತಡೆಹಿಡಿದಿರುವ ಮೌಲ್ಯದಷ್ಟು ಜಾಹಿರಾತುಗಳನ್ನು ನೀಡಬೇಕು. ಅಲ್ಲದೆ ಇನ್ನು ಮುಂದೆ ಸರ್ಕಾರ ನೀಡುವ ಜಾಹಿರಾತುಗಳನ್ನು ತಾರತಮ್ಯವಿಲ್ಲದೆ ಬಿಡುಗಡೆ ಮಾಡಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. That’s true … Varthabarathi is a great paper, reports ground reality as it is. It’s unjust from PS Harsha take personal revenge.
    Change this biased officer if he is found guilty.
    We need media/newspaper which is genuine and reports the reality of the world.

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...