Homeಮುಖಪುಟಚಿನ್ನ ಕಳ್ಳಸಾಗಣೆ ಆರೋಪ: ನಮ್ಮ ಸರ್ಕಾರ ಸುಳ್ಳಿನ ಅಭಿಯಾನವನ್ನು ಎದುರಿಸುತ್ತಿದೆ ಎಂದ ಪಿಣರಾಯಿ ವಿಜಯನ್

ಚಿನ್ನ ಕಳ್ಳಸಾಗಣೆ ಆರೋಪ: ನಮ್ಮ ಸರ್ಕಾರ ಸುಳ್ಳಿನ ಅಭಿಯಾನವನ್ನು ಎದುರಿಸುತ್ತಿದೆ ಎಂದ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಕ್ಕೆ ’ತಮ್ಮ ಸರ್ಕಾರ ಮತ್ತೆ ಸುಳ್ಳಿನ ಪ್ರಚಾರವನ್ನು ಎದುರಿಸುತ್ತಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ತಿರುವನಂತಪುರಂನಲ್ಲಿ ನಡೆದ ಸೆಕ್ರೆಟರಿಯೇಟ್ ಎಂಪ್ಲಾಯಿಸ್ ಅಸೋಸಿಯೇಶನ್‌ನ 49ನೇ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಸಿಎಂ ಮಾತನಾಡುತ್ತಿದ್ದರು. ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಸರ್ಕಾರವು “ಸುಳ್ಳಿನ ಪ್ರವಾಹ” ದಿಂದ ಬದುಕುಳಿದಿದೆ. ಆದರೆ, ಜನರು ತಮ್ಮ ಮೇಲೆ ವಿಶ್ವಾಸವಿಟ್ಟಿದ್ದರಿಂದ ಮತ್ತೆ ಅಧಿಕಾರಕ್ಕೆ ಬಂದಿತು ಎಂದು ಹೇಳಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮಾಡಿರುವ ಆರೋಪಗಳನ್ನು ಸಿಎಂ ಪಿಣರಾಯಿ ವಿಜಯನ್ ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ. “ಎಲ್‌ಡಿಎಫ್ ಸರಕಾರಕ್ಕೆ ಒಳ್ಳೆಯ ಹೆಸರು ಇದೆ. ಹಾಗಾಗಿ, ಸರ್ಕಾರಕ್ಕೆ ಮಾನಹಾನಿ ಮಾಡುವ ಹಲವರ ಉದ್ದೇಶದ ಸುಳ್ಳುಗಳ ಪ್ರವಾಹವನ್ನು ಅದು ಜಯಿಸಿದೆ. ಎಲ್‌ಡಿಎಫ್ ಮತ್ತೆ ಅಧಿಕಾರಕ್ಕೆ ಏಕೆ ಬಂತು ಎಂದರೆ ಜನರು ತಮ್ಮ ಬಿಕ್ಕಟ್ಟಿನ ಸಮಯದಲ್ಲಿ ಕಾಳಜಿ ವಹಿಸಿದ ಸರ್ಕಾರವನ್ನು ಬೆಂಬಲಿಸಿದರು” ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಭೀಕರ ಹತ್ಯೆ: ನಾಲೆಯಲ್ಲಿ ತೇಲಿ ಬಂದ ಅರ್ಧ ಕತ್ತರಿಸಿದ ಮಹಿಳೆಯರ ಮೃತದೇಹಗಳು

ಮಂಗಳವಾರ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್,  ಸಿಎಂ ಪಿಣರಾಯಿ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಅಕ್ರಮ ಸಾಗಣೆ ಪ್ರಕರಣದಲ್ಲಿ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು.

2020 ರ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್, ಅವರ ಪತ್ನಿ ಮತ್ತು ಮಗಳು ಭಾಗಿಯಾಗಿರುವ ಬಗ್ಗೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿರುವುದಾಗಿ ಸ್ವಪ್ನಾ ಸುರೇಶ್ ಮಂಗಳವಾರ ಬಹಿರಂಗಪಡಿಸಿದ್ದಾರೆ.

ಆಕೆಯ ಆರೋಪವನ್ನು ತಳ್ಳಿಹಾಕಿದ ಸಿಎಂ ವಿಜಯನ್, “ಅವರ ಈ  ಹೇಳಿಕೆಗಳು ರಾಜಕೀಯ ಅಜೆಂಡಾದ ಭಾಗವಾಗಿದೆ. ಸಾರ್ವಜನಿಕರು ಈಗಾಗಲೇ ಈ ಅಜೆಂಡಾವನ್ನು ತಳ್ಳಿಹಾಕಿದ್ದಾರೆ. ಈ ಆರೋಪದಲ್ಲಿ ಸ್ವಲ್ಪವೂ ಸತ್ಯವಿಲ್ಲ. ಈ ಸುಳ್ಳುಗಳನ್ನು ಹರಡುವ ಮೂಲಕ ನೀವು ಸರ್ಕಾರ ಮತ್ತು ರಾಜಕೀಯ ನಾಯಕತ್ವದ ದೃಢತೆಯನ್ನು ನಾಶಪಡಿಸಬಹುದು ಎಂದು ಅವರು ತಿಳಿದಿದ್ದರೇ, ಇದು ವ್ಯರ್ಥ ಪ್ರಯತ್ನ” ಎಂದಿದ್ದಾರೆ.

ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆರೋಪ ಮಾಡಿರುವುದು ಇದೇ ಮೊದಲಲ್ಲ ಎಂದು ಕೇರಳ ಪ್ರವಾಸೋದ್ಯಮ ಸಚಿವ ಪಿಎ ಮೊಹಮ್ಮದ್ ರಿಯಾಸ್ ಹೇಳಿದ್ದಾರೆ.


ಇದನ್ನೂ ಓದಿ: ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...