Homeಮುಖಪುಟಹಣಕಾಸು ಆಯೋಗದ ಅಧ್ಯಕ್ಷರಾಗಿ ಮೋದಿ ಆಪ್ತ ಅರವಿಂದ್ ಪನಗಾರಿಯಾ ನೇಮಕ

ಹಣಕಾಸು ಆಯೋಗದ ಅಧ್ಯಕ್ಷರಾಗಿ ಮೋದಿ ಆಪ್ತ ಅರವಿಂದ್ ಪನಗಾರಿಯಾ ನೇಮಕ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಆಪ್ತ ಮತ್ತು ಮಾಜಿ ಸಲಹೆಗಾರ ಅರವಿಂದ್ ಪನಗಾರಿಯಾ ಅವರನ್ನು ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಭಾರತ ಸರ್ಕಾರವು ಭಾನುವಾರ ಅರವಿಂದ್ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿದೆ. ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ ಅವರು ಆಯೋಗದ ಕಾರ್ಯದರ್ಶಿಯಾಗಿರುತ್ತಾರೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಹಣಕಾಸು ಆಯೋಗ ರಾಜ್ಯಗಳಿಗೆ ತೆರಿಗೆಗಳ ಹಂಚಿಕೆ ಬಗ್ಗೆ ಶಿಫಾರಸ್ಸನ್ನು ಮಾಡುತ್ತದೆ.

ಇದಕ್ಕೂ ಮೊದಲು 2015ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದರು. ಅರವಿಂದ್ ಪನಗಾರಿಯಾ ಅವರು ಇಂಡೋ–ಅಮೆರಿಕನ್ ಆರ್ಥಿಕ ತಜ್ಞರಾಗಿದ್ದು, ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ವಿಶ್ವಬ್ಯಾಂಕ್, ಐಎಂಎಫ್, ಏಷಿಯನ್ ಡೆವಲಪ್‌ಮೆಂಟ್‌ ಬ್ಯಾಂಕ್‌ಗಳಲ್ಲಿ ಉನ್ನತ ಹುದ್ದೆಯನ್ನು ನಿಭಾಯಿಸಿರುವ ಅವರು ಅಪಾರ ಅನುಭವ ಹೊಂದಿದ್ದಾರೆ.

ಅರವಿಂದ್ ಪನಗಾರಿಯಾ ಅವರಿಗೆ ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ನೀತಿಯಲ್ಲಿನ ಕೊಡುಗೆಗಳಿಗಾಗಿ 2012 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅವರು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಅವರು ಕಾಲೇಜ್ ಪಾರ್ಕ್‌ನಲ್ಲಿರುವ ಮೇರಿಲ್ಯಾಂಡ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಪನಗಾರಿಯಾ ಅವರು ಈ ವರ್ಷದ ಆರಂಭದಲ್ಲಿ 2026ರ ವೇಳೆಗೆ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗುತ್ತದೆ ಎಂದು ಹೇಳಿದ್ದರು.

5 ವರ್ಷಕ್ಕೊಮ್ಮೆ ಕೇಂದ್ರ ಸರ್ಕಾರ ರಚಿಸುವ ಹಣಕಾಸು ಆಯೋಗ ಕೇಂದ್ರ ಹಾಗೂ ರಾಜ್ಯಗಳ ನಡುವೆ ತೆರಿಗೆ ಸಂಗ್ರಹದ ಹಂಚಿಕೆ ಬಗ್ಗೆ ಸಲಹೆ, ಸೂಚನೆ ಹಾಗೂ ಶಿಫಾರಸುಗಳನ್ನು ನೀಡುತ್ತದೆ. ಕೇಂದ್ರ ಸರ್ಕಾರ ಪ್ರತಿ ಶತ 42ರಷ್ಟು ತೆರಿಗೆ ಸಂಗ್ರಹವನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ. ಹಣಕಾಸು ಆಯೋಗವು 2025ರ ಅ.31 ರೊಳಗೆ 5 ವರ್ಷದ ತನ್ನ ವರದಿಯನ್ನು ಸಿದ್ದಪಡಿಸಿ ಒಪ್ಪಿಸಬೇಕು. ವರದಿಯು 2026ರ ಏ.1ರಿಂದ ಜಾರಿಗೆ ಬರಲಿದೆ.

ಇದನ್ನು ಓದಿ: ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...