Homeಕರ್ನಾಟಕ‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. 

ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 

ಇದೇ ವೇಳೆ ಹೆಚ್.ವೈ. ಮೇಟಿಯವರನ್ನು ನೆನೆದ ಮುಖ್ಯಮಂತ್ರಿಗಳು ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ, ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ ಎಂದರು.

ಮೆಡಿಕಲ್ ಕಾಲೇಜು ಸ್ಥಾಪಿಸಲು 2025ರ ಬಜೆಟ್ ನ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳನ್ನು ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು..

ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ

ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಸಮಾನ ಆದ್ಯತೆ ನೀಡುತ್ತಿದ್ದೇವೆ ಎಂದರು. ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದು ಕಿಡಿಕಾರಿದರು.

ಯುಕೆಪಿ ಹಂತ 3 ಭೂ-ಪರಿಹಾರ ಒಂದೇ ಬಾರಿಗೆ ಪಾವತಿ

ಬಿಜೆಪಿಯವರು ತಮ್ಮ ಅವಧಿಯಲ್ಲಿ ಯುಕೆಪಿ ಯೋಜನೆಗೆ ಪರಿಹಾರ ನೀಡಲು ಆಸಕ್ತಿ ವಹಿಸಲಿಲ್ಲ. ಆದ್ದರಿಂದ ರೈತರು ಭೂಮಿ ನೀಡಲು ಮುಂದೆ ಬರಲಿಲ್ಲ. ಈಗ ರೈತರಿಗೆ ಭೂ ಪರಿಹಾರವನ್ನು ಒಂದೇ ಬಾರಿಗೆ ನೀಡಲು ಕಾಂಗ್ರೆಸ್ ಸರ್ಕಾರ ನಿರ್ಣಯಿಸಿದೆ. ಈ ಬಾರಿಯ ಬಜೆಟ್ ನಲ್ಲಿ ಯುಕೆಪಿ ಯೋಜನೆಯ 3 ಹಂತದಲ್ಲಿ ಭೂ-ಪರಿಹಾರಕ್ಕೆ ಹಣ ಮೀಸಲಿಡಲಾಗಿದ್ದು, ನಂತರವೂ ಹೆಚ್ಚಿನ ಅನುದಾನಕ್ಕೆ ವ್ಯವಸ್ಥೆಗೊಳಿಸಲಾಗುವುದು. ಸ್ವಯಂ ಪ್ರೇರಣೆಯಿಂದ ಭೂಮಿ ನೀಡುವ ರೈತರಿಗೆ ನೀರಾವರಿ ಜಮೀನಿಗೆ 40 ಲಕ್ಷ ರೂ, ಹಾಗೂ ಖುಷ್ಕಿ ಜಮೀನಿಗೆ 30 ಲಕ್ಷ ರೂ. ನೀಡಲು ಸರ್ಕಾರ ನಿರ್ಣಯಿಸಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮತಿ ದೊರಕಿಲ್ಲ

ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ.ಗಳ ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರದಿಂದ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಉತ್ತರ ಕರ್ನಾಟಕದ  ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...