ದಾವಣಗೆರೆ: ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಮತ್ತ ಪಕ್ಷದ ಅಧ್ಯಕ್ಷ ಸ್ಥಾನದ ಬದಲಾವಣೆಯ ಊಹಾಪೋಹಗಳಿಗೆ ಸಂಬಂಧಿಸಿದ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ತಮ್ಮ ಸಂಪುಟದಲ್ಲಿ ಖಾಲಿ ಇರುವ ಸ್ಥಾನವನ್ನು ಭರ್ತಿ ಮಾಡುವ ಬಗ್ಗೆ ರಾಜ್ಯದ ನಾಯಕತ್ವದೊಂದಿಗೆ ಸಮಾಲೋಚನೆಯಲ್ಲಿ ಅವರು ನಿರ್ಧರಿಸುತ್ತಾರೆ ಎಂದು ಸಿಎಂ ತಿಳಿಸಿದ್ದಾರೆ.
ಒಳಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಆದರೆ ಪ್ರಾಯೋಗಿಕ ದತ್ತಾಂಶ ಇಲ್ಲ ಎಂದು ಕೆಲವರು ಹೇಳಿರುವುದರಿಂದ (ನ್ಯಾಯಮೂರ್ತಿ) ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎಸ್‌ಸಿಗಳಲ್ಲಿ ಒಳ ಮೀಸಲಾತಿಯನ್ನು ಶಿಫಾರಸು ಮಾಡುವ ಆಯೋಗದ ಮುಖ್ಯಸ್ಥರಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌ಎನ್ ನಾಗಮೋಹನ್ ದಾಸ್ ಅವರನ್ನು ಸರ್ಕಾರ ನವೆಂಬರ್‌ನಲ್ಲಿ ನೇಮಿಸಿತ್ತು.
ಎಸ್‌ಸಿಗಳ ಅನೇಕ ಸಮುದಾಯಗಳು ಇನ್ನೂ ಅಂಚಿನಲ್ಲಿರುವಾಗ ಕೆಲವು ಪ್ರಭಾವಿ ಉಪಜಾತಿಗಳು ಮಾತ್ರ ಬಹುಪಾಲು ಪ್ರಯೋಜನಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಒಳ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ ಎಂದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನು ಬದಲಾಯಿಸುವ ಕುರಿತು ಕೇಳಿದ ಪ್ರಶ್ನೆಗೆ, “ಇದನ್ನು ಹೈಕಮಾಂಡ್ ನಿರ್ಧರಿಸುತ್ತದೆ, ನಾವಲ್ಲ, ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ — ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ” ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಿ ನಾಲ್ಕು ವರ್ಷ ಪೂರೈಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಸ್ತುತ ಹುದ್ದೆಯಲ್ಲಿ ಮುಂದುವರಿಯುತ್ತಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಖಾಲಿ ಇರುವ ಸ್ಥಾನವನ್ನು ತುಂಬುವ ಕುರಿತು ಹೈಕಮಾಂಡ್ ಜೊತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮಾತನಾಡಿ, ವಿಷಯ ನ್ಯಾಯಾಲಯದಲ್ಲಿದೆ. ಅಲ್ಲಿಯೇ ತೀರ್ಮಾನವಾಗಬೇಕು, ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದರು.
ಬೆಂಗಳೂರಿನಲ್ಲಿ ಸಚಿವರೊಂದಿಗೆ ಊಟಕ್ಕೆ ಸಭೆ ಸೇರಿದ ಬಗ್ಗೆ ಕುರಿತು ಪ್ರಶ್ನಿಸಿದ ಅವರು, ಊಟಕ್ಕೆ ಸೇರುವುದು ತಪ್ಪಾ. ನಾಲ್ಕೈದು ಮಂದಿ ಊಟಕ್ಕೆ ಸೇರುವುದು ಸಹಜವಲ್ಲವೇ. ರಾಜಕಾರಣಿಗಳು ಜೊತೆಯಾಗಿ ಊಟ ಮಾಡಿದರೆ ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.
ಕೆಲವರು ನಾನ್ ವೆಜ್ ಊಟ ಮಾಡುತ್ತಾರೆ, ಇನ್ನೂ ಕೆಲವರು ವೆಜ್ ಊಟ ಮಾಡುತ್ತಾರೆ. ಅದೇ ರೀತಿ ನಾವು ಸೇರಿದ್ದೇವು. ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಪುನರುಚ್ಚರಿಸಿದರು.
‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ


