Homeಕರ್ನಾಟಕಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಅಂಗೀಕಾರ | ಮಸೂದೆ ಪ್ರತಿ ಹರಿದು ಸ್ಪೀಕರ್‌ಗೆ ಎಸೆದ...

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಅಂಗೀಕಾರ | ಮಸೂದೆ ಪ್ರತಿ ಹರಿದು ಸ್ಪೀಕರ್‌ಗೆ ಎಸೆದ ಬಿಜೆಪಿ ಸದಸ್ಯರು

- Advertisement -
- Advertisement -

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ಮಸೂದೆಯನ್ನು ರಾಜ್ಯ ವಿಧಾನಸಭೆ ಶುಕ್ರವಾರ ಅಂಗೀಕರಿಸಿತು. ಸಿದ್ದರಾಮಯ್ಯ ಸರ್ಕಾರದ ಈ ಮಸೂದೆಯ ವಿರುದ್ಧ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಭಾರಿ ಪ್ರತಿಭಟನೆ ನಡೆಸಿದ್ದು, ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಯು.ಟಿ. ಖಾದರ್ ಅವರ ಪೀಠಕ್ಕೆ ಬಿಸಾಕಿದ್ದಾರೆ. ಸರ್ಕಾರಿ ಗುತ್ತಿಗೆಗಳಲ್ಲಿ

ಮಸೂದೆಯನ್ನು “ಅಸಂವಿಧಾನಿಕ” ಎಂದು ಕರೆದಿರುವ ಬಿಜೆಪಿ, ಅದನ್ನು ಕಾನೂನುಬದ್ಧವಾಗಿ ಪ್ರಶ್ನಿಸುವುದಾಗಿ ಪ್ರತಿಜ್ಞೆ ಮಾಡಿದೆ. ಹನಿ ಟ್ರ್ಯಾಪ್ ಹಗರಣದ ಕುರಿತು ವಿಧಾನಸಭೆಯಲ್ಲಿನ ಗೊಂದಲದ ನಡುವೆ ಮಸೂದೆಯನ್ನು ಅಂಗೀಕರಿಸಲಾಯಿತು.

ಬಿಜೆಪಿ ನಾಯಕರು ಸದನದ ಬಾವಿಗೆ ನುಗ್ಗಿ ಆಡಳಿತಾರೂಢ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಅವರು ಸ್ಪೀಕರ್ ಆಸನವನ್ನು ಹತ್ತಿ ತಮ್ಮ ಪ್ರತಿಭಟನೆ ನಡೆಸಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ನಂತರ ಮಸೂದೆಯ ಪ್ರತಿಯನ್ನು ಹರಿದು ಸ್ಪೀಕರ್ ಮೇಲೆ ಎಸೆದಿರುವ ಘಟನೆ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ

ಬಿಜೆಪಿ ಶಾಸಕ ಭರತ್ ಶೆಟ್ಟಿ ಮಾತನಾಡಿ, “ಹನಿ ಟ್ರ್ಯಾಪ್ ಹಗರಣದ ಬಗ್ಗೆ ಚರ್ಚಿಸುವ ಬದಲು, ಮುಖ್ಯಮಂತ್ರಿ ನಾಲ್ಕು ಶೇಕಡಾ ಮುಸ್ಲಿಂ ಮಸೂದೆಯನ್ನು ಮಂಡಿಸುವಲ್ಲಿ ನಿರತರಾಗಿದ್ದಾರೆ. ಆದ್ದರಿಂದ ನಾವು ಪ್ರತಿಭಟಿಸಿದೆವು. ಆಡಳಿತರೂಢ ಶಾಸಕರು ಕೂಡಾ ಪುಸ್ತಕಗಳನ್ನು ಮತ್ತು ಹರಿದ ಕಾಗದಗಳನ್ನು ಎಸೆದಿದ್ದಾರೆ; ನಾವು ಯಾರಿಗೂ ಹಾನಿ ಮಾಡಲಿಲ್ಲ.” ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಅವಕಾಶಗಳನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಮೀಸಲಾತಿಯನ್ನು ಸಮರ್ಥಿಸಿಕೊಂಡರೆ, ವಿರೋಧ ಪಕ್ಷ ಬಿಜೆಪಿಯು ಕಾಂಗ್ರೆಸ್ ಪಕ್ಷ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಮಸೂದೆಯ ನಿಬಂಧನೆಗಳ ಪ್ರಕಾರ, ಮುಸ್ಲಿಂ ಗುತ್ತಿಗೆದಾರರು ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ ನಾಲ್ಕು ಕೋಟಾವನ್ನು ಪಡೆಯುತ್ತಾರೆ. ಈ ಮಸೂದೆಯು ಮುಸ್ಲಿಂ ಸಮುದಾಯ ಕೂಡಾ ಸಾರ್ವಜನಿಕ ಗುತ್ತಿಗೆಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಸ್ಪರ್ಧಿಸಲು ಅನುವು ಮಾಡಿಕೊಡುತ್ತದೆ. ಈ ಕ್ರಮವು ಸಮಗ್ರ ಅಭಿವೃದ್ಧಿ ಮತ್ತು ಸಕಾರಾತ್ಮಕ ಕ್ರಮದ ಸರ್ಕಾರದ ಬದ್ಧತೆಗೆ ಹೊಂದಿಕೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಹನಿ ಟ್ರ್ಯಾಪಿಂಗ್ ಬಗ್ಗೆ ಬಹಿರಂಗಪಡಿಸಿದ ನಂತರ ಶುಕ್ರವಾರ ಕರ್ನಾಟಕ ವಿಧಾನಸಭಾ ಕಲಾಪದಲ್ಲಿ ತೀವ್ರ ಗೊಂದಲ ಏರ್ಪಟ್ಟಿತ್ತು. ಹಗರಣವು ಇದೀಗ ಪ್ರಮುಖ ರಾಜಕೀಯ ಚರ್ಚೆಯಾಗಿ ಪರಿಣಮಿಸಿದ್ದು, ಬಿಜೆಪಿ ನಾಯಕರು ಸಿಡಿಗಳನ್ನು ಹಿಡಿದುಕೊಂಡು ಅವುಗಳನ್ನು ಬ್ಲ್ಯಾಕ್‌ಮೇಲ್ ಮತ್ತು ಬಲೆಗೆ ಬೀಳಿಸುವ ಸಾಧನಗಳೆಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...