Homeಮುಖಪುಟನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

ನಮ್ಮದೆ ಸರ್ಕಾರದ ಟೀಕೆ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ

- Advertisement -
- Advertisement -

ನಮ್ಮದೆ ಸರ್ಕಾರವನ್ನು ಟೀಕಿಸುವುದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಭಾರತ ಪಾಕಿಸ್ತಾನ ಸಂಘರ್ಷದ ನಡುವೆ ನೆರೆಯ ದೇಶದ ಸೇನಾ ಅಧಿಕಾರಿಯ ಹೇಳಿಕೆಗಳನ್ನು ಟೀಕಿಸುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ನಮ್ಮದೆ ಸರ್ಕಾರದ ಟೀಕೆ

“ಭಾರತದ ಜನರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ಪಾಕಿಸ್ತಾನ ಸೇನಾ ವಕ್ತಾರರು ಬಹಳ ಖುಷಿ ಪಡುತ್ತಿದ್ದಾರೆ. ನಾಗರಿಕರು ತಮ್ಮದೇ ಸರ್ಕಾರವನ್ನು ಟೀಕಿಸುವುದನ್ನು ನೋಡುವಾಗ ಪಾಕಿಸ್ತಾನಕ್ಕೆ ಆಶ್ಚರ್ಯವಾಗಬಹುದು. ಆದರೆ ಅದು ಯಾವುದೇ ಮುಕ್ತ ಮತ್ತು ಕಾರ್ಯನಿರ್ವಹಿಸುವ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ. ಅದರ ಬಗ್ಗೆ ಪಾಕಿಸ್ತಾನದ ಪರಿಚಯವಿಲ್ಲದಿರುವುದು ಆಶ್ಚರ್ಯಕರವಲ್ಲ” ಮಿಶ್ರಿ ಶನಿವಾರ ನಡೆದ ಸರ್ಕಾರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಭಾರತ ಸರ್ಕಾರದ ಕ್ರಮಗಳನ್ನು ಟೀಕಿಸಿದ ಹಲವಾರು ಭಾರತೀಯರ ಹೇಳಿಕೆಗಳನ್ನು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಮಿಸ್ರಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡ ಪಾಕ್: ಮಿಸ್ರಿ

ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನ ನಡೆಸುತ್ತಿರುವ ದಾಳಿಯಗಳನ್ನು ಮಿಶ್ರಿ ಖಂಡಿಸಿದ್ದಾರೆ. ಭಾರತದಲ್ಲಿ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವನ್ನು ಬಿತ್ತಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಮಿಶ್ರಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ನಲ್ಲಿ ನಾಗರಿಕ ಮೂಲಸೌಕರ್ಯ ಮತ್ತು ಜನರನ್ನು ಪಾಕಿಸ್ತಾನ ಗುರಿಯಾಗಿಸಿಕೊಂಡಿದೆ” ಎಂದು ಮಿಶ್ರಿ ಹೇಳಿದ್ದಾರೆ

ಮಾರಣಾಂತಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ ಜಮ್ಮು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು ನಗರಗಳಲ್ಲಿ ಬೆಳಿಗ್ಗೆ ದಾಳಿಗಳು ನಡೆದಿವೆ ಎಂದು ವರದಿಯಾಗಿದೆ. ಮಧ್ಯಾಹ್ನದ ಸುಮಾರಿಗೆ ಶ್ರೀನಗರದಲ್ಲಿ ಮತ್ತೆ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ಅದು ಹೇಳಿದೆ.

“ಇಂದು ಬೆಳಿಗ್ಗೆ, ಪಾಕಿಸ್ತಾನವು ರಾಜೌರಿ ಪಟ್ಟಣದ ಮೇಲೆ ಶೆಲ್ ದಾಳಿ ನಡೆಸಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ. ಅಲ್ಲಿ ನಾಗರಿಕ ಸಾವುನೋವುಗಳು ಮತ್ತು ಹಾನಿಯನ್ನು ಹೆಚ್ಚಿಸಿದೆ” ಎಂದು ಮಿಸ್ರಿ ಹೇಳಿದ್ದಾರೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ಭಾರತ ನಾಶಪಡಿಸಿದ ಒಂದು ದಿನದ ನಂತರ ಶುಕ್ರವಾರ ಮತ್ತು ಶನಿವಾರ ಭಾರತ ಡ್ರೋನ್ ದಾಳಿ ಮತ್ತು ಪ್ರತಿದಾಳಿ ನಡೆಸಿದೆ. ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಎರಡು ವಾರಗಳ ನಂತರ ಭಾರತವು ಆಪರೇಷನ್ ಸಿಂಧೂರ್ ಎಂಬ ದಾಳಿ ನಡೆಸಿತ್ತು. ನಮ್ಮದೆ ಸರ್ಕಾರದ ಟೀಕೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ಭಾರತ-ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ | ವೈದ್ಯರ ರಜೆ ರದ್ದುಗೊಳಿಸಿದ ಜಾರ್ಖಂಡ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...