Homeಮುಖಪುಟಸರ್ಕಾರ ರಚನೆಯ ಕಸರತ್ತು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಶಿವಸೇನೆ

ಸರ್ಕಾರ ರಚನೆಯ ಕಸರತ್ತು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆ ರಾಜ್ಯಪಾಲರ ಕ್ರಮದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಮುಂದಾಗಿದೆ. ಸರ್ಕಾರ ರಚನೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಶಿವಸೇನೆ ಕೇಳಿತ್ತು. ಆದರೆ ಶಿವಸೇನೆ ಮನವಿಯನ್ನು ರಾಜ್ಯಪಾಲರು ನಿರಾಕರಿಸಿದ್ದರು. ಹೀಗಾಗಿ ಸುಪ್ರೀಂಕೋರ್ಟ್‌‌ಗೆ ಶಿವಸೇನೆ ಮೊರೆ ಹೋಗಿದೆ.

ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿತ್ತು. ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಸರ್ಕಾರ ರಚಿಸಲು ಒಂದು ದಿನದ ಗಡುವು ನೀಡಿದ್ದರು. ಆದರೆ ನಿನ್ನೆ ನಡೆದ ರಾಜಕೀಯ ಬೆಳವಣಿಗೆಯಿಂದಾಗಿ, ಸರ್ಕಾರ ರಚನೆಯ ಕಾಲಾವಕಾಶವನ್ನು ಹೆಚ್ಚಿಸಬೇಕು ಎಂದು ಶಿವಸೇನೆ ತಂಡ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿತ್ತು. ಆದರೆ ಮನವಿಗೆ ಅವಕಾಶ ಕೊಡದೇ ಹೆಚ್ಚಿನ ಸಮಯಾವಕಾಶ ನೀಡಲು ನಿರಾಕರಿಸಿದ್ದಾರೆ.

ಶಿವಸೇನೆ ಹಾಗೂ ಎನ್‌ಸಿಪಿ ಮೈತ್ರಿ ಮೂಲಕ ಕಾಂಗ್ರೆಸ್‌ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ. ಇದಕ್ಕೆ ಸ್ವಲ್ಪ ಹೆಚ್ಚಿನ ಕಾಲಾವಕಾಶ ನೀಡುವಂತೆ ಶಿವಸೇನೆ ಮನವಿ ಮಾಡಿತ್ತು. ಆದರೆ ಒಂದು ದಿನದ ಗಡುವು ನೀಡಿದ್ದ ರಾಜ್ಯಪಾಲರು ಅವಧಿ ವಿಸ್ತರಿಸಲು ಒಪ್ಪಲಿಲ್ಲ. ಆದರೆ ಬಿಜೆಪಿಗೆ ಸರ್ಕಾರ ರಚನೆ ಮಾಡಲು ೩ ದಿನಗಳವರೆಗೆ ಅವಕಾಶ ನೀಡಿತ್ತು.

ಇದನ್ನೂ ಓದಿ: ಬಾಳಾ ಠಾಕ್ರೆ, ವಾಜಪೇಯಿ ಫೋಟೋ ಟ್ವೀಟ್ ಮಾಡಿ, ಹಳೆಯ ಸಂಬಂಧ ನೆನಪಿಸಿದ ಬಿಜೆಪಿ ಸಚಿವ..!

ನಮಗೆ ಮಾತ್ರ ಕೇವಲ ಒಂದು ದಿನ ನೀಡಿದೆ. ರಾಜ್ಯಪಾಲರು ಬಿಜೆಪಿಯಿಂದ ನಿಯುಕ್ತಿಗೊಂಡಿದ್ದಾರೆ. ಹೀಗಾಗಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಇನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸುಪ್ರೀಂಕೋರ್ಟ್‌‌ನಲ್ಲಿ ಶಿವಸೇನೆ ಸಲ್ಲಿಸುವ ಮೇಲ್ಮನವಿ ಅರ್ಜಿ ಪರ ವಾದ ಮಂಡಿಸಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ. ಆದರೆ ಈ ಬಗ್ಗೆ ಮಾತನಾಡಲು ಸಿಬಲ್‌ ಅವರ ಸಂಪರ್ಕ ಸಾಧ್ಯವಾಗಿಲ್ಲ ಎಂದು ಶಿವಸೇನೆ ಹೇಳಿದೆ.

ಎನ್‌ಸಿಪಿ ಮತ್ತು ಕಾಂಗ್ರೆಸ್‌ ಬೆಂಬಲ ಪಡೆಯಲು ತಮಗೆ ಇನ್ನು ಸ್ವಲ್ಪ ಕಾಲಾವಕಾಶ ಬೇಕು. ಹೀಗಾಗಿ ಸರ್ಕಾರ ರಚನೆಯ ಅವಧಿ ವಿಸ್ತರಿಸುವಂತೆ ಆದಿತ್ಯ ಠಾಕ್ರೆ ತಂಡ ರಾಜ್ಯಪಾಲರ ಬಳಿ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...