Homeಮುಖಪುಟಸರ್ಕಾರ ರಚಿಸುವ ಪಕ್ಷವನ್ನು ಬೆಂಬಲಿಸುತ್ತೇವೆ: ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್

ಸರ್ಕಾರ ರಚಿಸುವ ಪಕ್ಷವನ್ನು ಬೆಂಬಲಿಸುತ್ತೇವೆ: ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್

- Advertisement -
- Advertisement -

ತಮ್ಮ ಪಕ್ಷವೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಗತ್ಯವಿರುವ ಸಂಖ್ಯೆಗಳಲ್ಲಿ ಗೆಲುವು ಪಡೆದರೆ, ಸರ್ಕಾರ ರಚಿಸುವ ಪಕ್ಷವನ್ನು ಆಯ್ಕೆ ಮಾಡುತ್ತದೆ ಎಂದು ವಂಚಿತ್ ಬಹುಜನ ಅಘಾಡಿ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಅವರು ಶುಕ್ರವಾರ ಹೇಳಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗನೂ ಆಗಿರುವ ಪ್ರಕಾಶ್ ಅಂಬೇಡ್ಕರ್‌ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು,”ನಾಳೆ ಅಗತ್ಯವಿರುವ ಸಂಖ್ಯೆಗಳನ್ನು ವಂಚಿತ್ ಬಹುಜನ ಅಘಾಡಿಯು ಪಡೆದರೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಪಕ್ಷ ಅಥವಾ ಮೈತ್ರಿಕೂಟವನ್ನು ಬೆಂಬಲಿಸುತ್ತದೆ. ನಾವು ಸರ್ಕಾರ ರಚಿಸಬಲ್ಲವರ ಜೊತೆ ಇರಲು ಆಯ್ಕೆ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಅಧಿಕಾರವನ್ನು ಆರಿಸಿಕೊಳ್ಳುತ್ತೇವೆ! ಹಮ್ ಸತ್ತಾ ಮೆಂ ರಹನಾ ಚುನೆಂಗೆ!” ಎಂದು ಪ್ರಕಾಶ್ ಅಂಬೇಡ್ಕರ್‌ ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

 

ಮಹಾರಾಷ್ಟ್ರದಲ್ಲಿ ಮುಖ್ಯವಾಗಿ ಆಡಳಿತರೂಢ ಮಹಾಯುತಿ ಮತ್ತು ವಿಪಕ್ಷಗಳ ಮಹಾ ವಿಕಾಸ್ ಅಘಾಡಿ ಎಂದು ಎರಡು ಪ್ರಮುಖ ಮೈತ್ರಿ ಕೂಟಗಳಿವೆ. ಮಹಾಯುತಿಯಲ್ಲಿ ಪ್ರಮುಖವಾಗಿ ಬಿಜೆಪಿ, ಸಿಎಂ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯಿವೆ. ವಿಪಕ್ಷಗಳ ಮಹಾ ವಿಕಾಸ್ ಅಘಾಡಿಯಲ್ಲಿ ಪ್ರಮುಖವಾಗಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಇವೆ.

ಈ ಎರಡೂ ಮೈತ್ರಿ ಕೂಟಗಳಿಗೆ ಸೇರದ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ್ ಅಘಾಡಿ ಪಕ್ಷವು ಏಕಾಂಗಿಯಾಗಿ 200 ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಚುನಾವಣೆಯಲ್ಲಿ ಕಣಕ್ಕಿಳಿದಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 236 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೂ ಖಾತೆ ತೆರೆಯಲು ವಿಫಲವಾಗಿತ್ತು. ಆದರೆ ಸ್ಪರ್ಧಿಸಿದ್ದ ಸ್ಥಾನಗಳಲ್ಲಿ ಅದರ ಮತಗಳ ಪಾಲು ಶೇ.5.5 ರಷ್ಟಿತ್ತು.

ವಂಚಿತ್ ಬಹುಜನ ಆಘಾಡಿ ಪಕ್ಷವನ್ನು ಪ್ರಕಾಶ್ ಅಂಬೇಡ್ಕರ್ ಅವರು 2018ರ ಮಾರ್ಚ್ 20ರಂದು ಸ್ಥಾಪಿಸಿದ್ದರು. ಮಹಾರಾಷ್ಟ್ರ ನೆಲೆಯಾಗಿಸಿ ಪ್ರಾರಂಭವಾದ ಈ ಪಕ್ಷ ಫುಲೆ ಅಂಬೇಡ್ಕರ್ ಸಿದ್ಧಾಂತವನ್ನು ಅನುಸರಿಸುತ್ತದೆ.

288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ 20 ರಂದು ಮತದಾನ ಮುಕ್ತಾಯಗೊಂಡಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ಲೂಟಿಯಾದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯುವಂತೆ ಕುಕಿ ಶಾಸಕರ ಒತ್ತಾಯ; ಮಣಿಪುರದಾದ್ಯಂತ ‘ಎಎಫ್‌ಎಸ್‌ಪಿಎ’ ವಿಸ್ತರಣೆಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...