ರಾಜ್ಯದ ಕೊರೊನಾ ಪರಿಸ್ಥಿತಿಯ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಸರ್ಕಾರವನ್ನು ದೂಷಿಸಿದ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್, “ಸರ್ಕಾರಕ್ಕೆ ಯಾವುದೇ ಜವಾಬ್ದಾರಿಯ ಪ್ರಜ್ಞೆ ಇಲ್ಲ” ಎಂದು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, “ಕೊರೊನಾ ವಿರುದ್ದ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾತನಾಡಲು ಮುಖ್ಯಮಂತ್ರಿಗೆ ನಾನು ಸವಾಲು ಹಾಕಿದ್ದೆ. ಆದರೂ, ಅವರಿಗೆ ಯಾವುದೇ ಜವಾಬ್ದಾರಿಯಿಲ್ಲ. ದೇವರು ನಮ್ಮ ಬಿಹಾರವನ್ನು ಉಳಿಸಲಿ!” ಎಂದು ಅವರು ಬರೆದಿದ್ದಾರೆ.
ಇದನ್ನೂ ಓದಿ: ‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ
“ಕಳೆದ ವರ್ಷವೂ ನಾನು ನಿರಂತರವಾಗಿ ಸಹಕರಿಸುತ್ತಿದ್ದೆ ಮತ್ತು ದೃಢವಾದ ಕ್ರಮಗಳನ್ನು ಸೂಚಿಸುತ್ತಿದ್ದೆ ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಂತಹ ಸಕಾರಾತ್ಮಕ ಸಲಹೆಗಳ ಬಗ್ಗೆ ಅಷ್ಟೇನೂ ಕಾಳಜಿ ವಹಿಸಲಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last year also, I was continuously cooperating & suggesting concrete measures but CM Nitish Kumar hardly cared for such positive suggestions.
Even I had challenged him to speak on steps taken by him. Still they have no sense of responsibility. May God save our Bihar!? https://t.co/CH3SvNrnGb
— Tejashwi Yadav (@yadavtejashwi) April 17, 2021
ಸೋಂಕಿನ ಹರಡುವಿಕೆಯನ್ನು ಕಡಿಮೆ ಮಾಡಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ನಿತೀಶ್ ಕುಮಾರ್ ಗುರುವಾರ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಕಳೆದ 24 ಗಂಟೆಗಳಲ್ಲಿ 4387 ಹೊಸ ಪ್ರಕರಣಗಳು ಮತ್ತು ಒಂದೇ ದಿನದಲ್ಲಿ 13 ಸಾವುಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದಾಗಿ 1688 ಜನರು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ: ಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!
ವಿಡಿಯೋ ನೋಡಿ►►ಕೊವಾಕ್ಸಿನ್ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ?



