Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜೊತೆ ಮೊಟ್ಟೆ ನೀಡಲು ಸರ್ಕಾರ ಚಿಂತನೆ

ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಜೊತೆ ಮೊಟ್ಟೆ ನೀಡಲು ಸರ್ಕಾರ ಚಿಂತನೆ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್‌ಗೆ ಜೀವ ಬಂದಂತಾಗಿದೆ. ಆಹಾರ ತಜ್ಞರು ಕ್ಯಾಂಟೀನ್‌ಗಳಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದು, ಈ ಹಿನ್ನೆಲೆ ಕ್ಯಾಂಟೀನ್‌ಗಳಲ್ಲಿ ಊಟದ ಜತೆಗೆ ಮೊಟ್ಟೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

2013-18ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿತು. ಆದರೆ 2018-23ರ ವರಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿತ್ತು. ಅನೇಕ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿತ್ತು, ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲ ಕಡೆಗಳಲ್ಲೂ ಇಂದೀರಾ ಕ್ಯಾಂಟೀನ್‌ಗಳನ್ನು ತೆರೆಯಲು ಕ್ರಮ ವಹಿಸಲಾಗುತ್ತಿದೆ.

ಈ ಇಂದಿರಾ ಕ್ಯಾಂಟೀನ್‌ಗಳಲ್ಲಿ ದುಡಿಯುವ ವರ್ಗ, ಕಾರ್ಮಿಕ ವರ್ಗ, ಬಡವರಿಗೆ ಅತಿ ಕಡಿಮೆ ದರದಲ್ಲಿ ತಿಂಡಿ ಮತ್ತು ಊಟ ನೀಡಲಾಗುತ್ತದೆ. ಇದು ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದೆ.

ಇದನ್ನೂ ಓದಿ: ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಸೂಚಿಸಿದ್ದು, ಬೆಂಗಳೂರಿನ 250 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜತೆಗೆ ಕ್ಯಾಂಟೀನ್‌ನ ಊಟದ ಮೆನು ಬದಲಾವಣೆಯಾಗಲಿದೆ. ಮೆನುವನ್ನು ಬಹುತೇಕ ಮುಖ್ಯಮಂತ್ರಿಗಳೇ ಅಂತಿಮಗೊಳಿಸಲಿದ್ದಾರೆ. ಈ ನಡುವೆ ಸಾರ್ವಜನಿಕರು, ಕ್ಯಾಂಟೀನ್‌ನಲ್ಲಿ ಚಪಾತಿ, ರಾಗಿ ಮುದ್ದೆ ಟೀ ಸೇರಿದಂತೆ ಮಾಂಸಾಹಾರವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು.

”ವಾರದಲ್ಲಿ ಮೂರು ದಿನವಾದರೂ ಕೋಳಿ ಮೊಟ್ಟೆಯನ್ನು ನೀಡಬೇಕು ಇದರಿಂದ ಜನರಲ್ಲಿ ಪೌಷ್ಠಿಕಾಂಶ ಕೊರತೆಯನ್ನು ಸ್ವಲ್ಪಮಟ್ಟಿಗೆ ಆದರೂ ನೀಗಿಸಬಹುದು. ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರ ನೀಡಲು ಕೋಳಿ ಮೊಟ್ಟೆ ಅತ್ಯುತ್ತಮವಾದ ಆಹಾರ” ಎಂದು ಆಹಾರ ತಜ್ಞರು ಹಾಗೂ ಬಿಬಿಎಂಪಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಪೌಷ್ಟಿಕತೆ ಹೋಗಲಾಡಿಸಲು ಕಡಿಮೆ ಬೆಲೆಯಲ್ಲಿ ವಾರದಲ್ಲಿ ಮೂರು ದಿನ ಕೋಳಿ ಮೊಟ್ಟೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಪಾಲಿಕೆ ಸದಸ್ಯರು ಮನವಿ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...