Homeಕರ್ನಾಟಕಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಅರ್ಜಿ ಸ್ವೀಕರಿಸದ ರಾಜ್ಯ ಸರ್ಕಾರ: ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

"ಸರ್ಕಾರ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುಭಾವನೆಯನ್ನು ಕೆರಳಿಸಿ ದಿಕ್ಕು ತಪ್ಪಿಸುತ್ತಿದೆ"

- Advertisement -
- Advertisement -

ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದರೂ ರಾಜ್ಯ ಸರ್ಕಾರ ಈ ವರ್ಷ ಪರಿಗಣಿಸದ ಕಾರಣ, ಮನನೊಂದು ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ 4 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ್ದ ಚಿಕ್ಕಮಗಳೂರಿನವರಾದ ಉಮೆಯಾನಿ (30) ಸಾವಿಗೆ ಶರಣಾದವರು.

ಕೆಲ ದಿನಗಳ ಹಿಂದೆ ಸರ್ಕಾರ ಉಪನ್ಯಾಸಕರ ಆಯ್ಕೆಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಕರೆದಿದ್ದು, ಉಮೆಯಾನಿ ಅವರೂ ಅರ್ಜಿ ಸಲ್ಲಿಸಿದ್ದರು. ಆದರೆ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದು ಚಿಕ್ಕಮಗಳೂರಿನ ತಮ್ಮ ತಾಯಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಅತಿಥಿ ಉಪನ್ಯಾಸಕರ ದೀರ್ಘಕಾಲದ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ವರ್ಕ್ಲೋಡ್ ಹೆಚ್ಚಿಸಿ ಉಪನ್ಯಾಸಕ ಸಾವಿಗೆ ಕಾರಣವಾಗುತ್ತಿದೆ. 2021-22 ಸಾಲಿನಲ್ಲಿ 17106 ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ 7 ಸಾವಿರ ಉಪನ್ಯಾಸಕರಿಗೆ ಕೆಲಸ ಸಿಕ್ಕಿದೆ, ಉಳಿದ 10 ಸಾವಿರ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ಕೈಬಿಡಲಾಗಿದೆ ಎಂದು ಅತಿಥಿ ಉಪನ್ಯಾಸಕರು ಆರೋಪಿಸಿದ್ದಾರೆ.

ಸರ್ಕಾರದ ಈ ತಾರತಮ್ಯ ನೀತಿಯ ಪರಿಣಾಮದಿಂದ ಮನನೊಂದು ಅನೇಕರು ಆತ್ಮಹತ್ಯೆ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹೋರಾಟವನ್ನು ಮುಂದುವರೆಸಿದ್ದಾರೆ. ಆದರೂ ಸರ್ಕಾರಕ್ಕೆ ನಮ್ಮ ಸಂಕಷ್ಟ ಮುಖ್ಯವಾಗಲಿಲ್ಲ ಎಂದು ದೂರಿದ್ದಾರೆ.

ಇದನ್ನೂ ಓದಿರಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ಉನ್ನತ ಶಿಕ್ಷಣ ಅಧೋಗತಿಗೆ ಹೋದರೂ ಪರವಾಗಿಲ್ಲ ನಮ್ಮಗೆ ಉದ್ಯೋಗ ಕೊಡುವುದಿಲ್ಲ ಎಂದು ನಿರ್ದಾರ ಮಾಡಿದ ಆಗಿದೆ. ಈ ಎಲ್ಲಾ ಬೆಳವಣಿಗೆಯ ಪರಿಣಾಮ ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕಿ ಸಾವಿಗೀಡಾಗಿದ್ದಾರೆ. ಕುಮಾರ್ ನಾಯಕ್ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕೆಲಸ ಕಳೆದುಕೊಂಡ ಅತಿಥಿ ಉಪನ್ಯಾಸಕಿ ಉಮೆಯಾನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತಿಥಿ ಉಪನ್ಯಾಸಕರು ತಿಳಿಸಿದ್ದಾರೆ.

“ಸರ್ಕಾರ ಗಮನ ಹರಿಸಬೇಕಾದ, ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ನೈಜ ಸಮಸ್ಯೆಗಳನ್ನು ಮರೆಮಾಚಲು ಸರ್ಕಾರ ಮಕ್ಕಳಲ್ಲಿ ಕೋಮುದ್ವೇಷವನ್ನು ಹುಟ್ಟಿಹಾಕುತ್ತಿದೆ. ಇತ್ತ ಮಕ್ಕಳಿಗೂ ಭವಿಷ್ಯವಿಲ್ಲ, ಅತಿಥಿ ಉಪನ್ಯಾಸಕರಿಗೂ ಭವಿಷ್ಯವಿಲ್ಲ” ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಐದಾರು ವರ್ಷ ಕೆಲಸ ಮಾಡಿದ ಅನೇಕ ಅತಿಥಿ ಉಪನ್ಯಾಸಕರು ಸರಿಯಾಗಿ ಸಂಬಳ ಸಿಗದ ಕಾರಣ ಸರ್ಕಾರಿ ಕಾಲೇಜುಗಳನ್ನು ತ್ಯಜಿಸಿ ಖಾಸಗಿ ಸಂಸ್ಥೆಗಳಿಗೆ ತೆರಳಿದ್ದರು. ವೇತನ ಹೆಚ್ಚಳ ಹೊಸ ಆದೇಶ ಹೊರಬಿದ್ದ ಬಳಿಕ ಈ ಹಿಂದೆ ಸೇವೆ ಸಲ್ಲಿಸಿದವರೂ ಅರ್ಜಿ ಹಾಕಿದರು. ಹೀಗಾಗಿ ಅವರ ಸೇವೆಯನ್ನು ಸರ್ಕಾರ ಪರಿಗಣಿಸಬೇಕಾಯಿತು. ನಿರಂತರವಾಗಿ ಸರ್ಕಾರಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಅತಿಥಿ ಉಪನ್ಯಾಸಕರೂ ಕೆಲಸ ಕಳೆದುಕೊಂಡಿದ್ದಾರೆ” ಎನ್ನುತ್ತಾರೆ ಡಾ.ಸಂದೀಪ್‌.

ಹೊಸ ಆದೇಶ ತಂದ ಬಿಕ್ಕಟ್ಟು

ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶವನ್ನು ಇತ್ತೀಚೆಗೆ ಹೊರಡಿಸಿತ್ತು. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇತನ ಹೆಚ್ಚಿಸುವ ನೆಪದಲ್ಲಿ ವರ್ಕ್‌ಲೋಡ್ ಹೆಚ್ಚಿಸಿ ಅರ್ಧದಷ್ಟು ಅತಿಥಿ ಉಪನ್ಯಾಸರನ್ನು ಕೆಲಸದಿಂದ ತೆಗೆದು ಹಾಕಲಾಗುತ್ತಿದೆ ಎಂಬುದು ಅತಿಥಿ ಉಪನ್ಯಾಸಕರ ಆರೋಪ.

ಹೊಸ ಆದೇಶದ ಅಂಶಗಳು

1. ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.

2. ಐದು ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.

ಇದನ್ನೂ ಓದಿರಿ: ಹಿಜಾಬ್ ವಿವಾದ: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

3. ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು.

4. ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು.

5. ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆದೇಶ ಹೊರಬಿದ್ದ ದಿನದಿಂದಲೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ ಆರೋಪಿಸಿದ್ದರು.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ. ನಿರುದ್ಯೋಗ ಪ್ರಮಾಣವೂ ಹೆಚ್ಚಾಗುತ್ತದೆ” ಎಂದು ಅತಿಥಿ ಉಪನ್ಯಾಸಕರು ಆದೇಶವನ್ನು ವಿರೋಧಿಸುತ್ತಾ ಬಂದಿದ್ದಾರೆ.


ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...