Homeಮುಖಪುಟಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

ಬೆಲೆ ಏರಿಕೆ ಚರ್ಚೆಗೆ ಅನುಮತಿಸದ ಸರ್ಕಾರ: 5ನೇ ದಿನವೂ ಸಂಸತ್ ಅಧಿವೇಶನ ಮುಂದೂಡಿಕೆ

- Advertisement -
- Advertisement -

ದೈನಂದಿನ ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಜಾರಿ, ಬೆಲೆ ಏರಿಕೆ, ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ ಕೇಂದ್ರದ ಮೇಲೆ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದರಿಂದ ಲೋಕಸಭೆಯ ಕಲಾಪವನ್ನು ಇಂದು ಎರಡು ಭಾರಿ ಮುಂದೂಡಲಾಗಿದೆ. ಮೊದಲು ಮಧ್ಯಾಹ್ನದವರೆಗೆ ಮತ್ತು ನಂತರ 2 ಗಂಟೆಯವರೆಗೆ ಕಲಾಪವನ್ನು ಮುಂದೂಡಲಾಯಿತು. ರಾಜ್ಯಸಭೆ ಕಲಾಪ 12 ಗಂಟೆಗೆ ಪುನರಾರಂಭವಾಯಿತು.

ಪ್ರಮುಖ ವಿಷಯಗಳ ಚರ್ಚೆಗಳಿಗೆ ಸರ್ಕಾರ ಬೆನ್ನು ತೋರಿಸಿ ಓಡಿ ಹೋಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಇದು ಮೋದಿ ಸರ್ಕಾರದ “ಹಠಮಾರಿತನ”ವನ್ನು ತೋರಿಸುತ್ತದೆ ಎಂದಿವೆ. ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಲೋಕಸಭೆ ಮತ್ತು ರಾಜ್ಯಸಭೆಗಳೆರಡೂ ನಿರಂತರ ಮುಂದೂಡಿಕೆ ಮಾಡಲಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಸ್ತುತ ಅಧಿವೇಶನದ ಸತತ ಐದನೇ ದಿನವಾದ ಇಂದು ಉಭಯ ಸದನಗಳು ಯಾವುದೇ ಚರ್ಚೆ ಇಲ್ಲ ಇಲ್ಲದೆ ಮುಂದೂಡಲ್ಪಟ್ಟಿವೆ.

ಪ್ರತಿಪಕ್ಷಗಳು ನಿರಂತರವಾಗಿ ವಾಗ್ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಉನ್ನತ ಮಂತ್ರಿಗಳೊಂದಿಗೆ ಸಭೆ ನಡೆಸಿದರು.

ನಿರುದ್ಯೋಗ ಮತ್ತು ಇತರ ಸಮಸ್ಯೆಗಳು ಚರ್ಚೆಗೆ ಬಂದಾಗ ಕನಿಷ್ಠ ಏಳು ಭಾರಿ ಮುಂದೂಡಿಕೆ ಸೂಚನೆಗಳನ್ನು ಉಭಯ ಸದನಗಳಲ್ಲಿ ನೀಡಲಾಗಿದೆ.

ಪ್ರತಿಪಕ್ಷಗಳು ತಮ್ಮ ನಿಲುವು ಸಡಿಲಿಸಲು ನಿರಾಕರಿಸಿವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಬೆಲೆ ಏರಿಕೆ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದು ಸರ್ಕಾರ ಬುಧವಾರ ಹೇಳಿದೆ.

“ಕಾಂಗ್ರೆಸ್ ಪ್ರಜಾಪ್ರಭುತ್ವದ ಬಗ್ಗೆ ವಿನಾಶಕಾರಿ ಧೋರಣೆ ಹೊಂದಿದೆ. ಸದನ ಕಾರ್ಯನಿರ್ವಹಿಸಲು ಅನುಮತಿಸದೆ ತೊಂದರೆ ನೀಡುತ್ತಿದೆ. ಜೈರಾಮ್ ರಮೇಶ್ ಅವರ ಟ್ವೀಟ್‌ ಮೂಲಕ ಕಾಂಗ್ರೆಸ್ ಯಶಸ್ವಿಯಾಗಿರುವುದು ಬಹಿರಂಗವಾಗಿದೆ” ಎಂದು ರಾಜ್ಯಸಭೆಯ ಸಭಾನಾಯಕರಾಗಿರುವ ಪಿಯೂಷ್ ಗೋಯಲ್ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

“ಮೋದಿ ಸರ್ಕಾರದ ಹಠಮಾರಿತನದಿಂದ ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಬುಧವಾರ ಹೇಳಿದ್ದರು.

“ಇಂದು ಬೆಳಗ್ಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಬೆಲೆ ಏರಿಕೆ ಮತ್ತು ಆಹಾರ ಪದಾರ್ಥಗಳ ಮೇಲಿನ ಅರ್ಥಹೀನ ಜಿಎಸ್‌ಟಿ ದರಗಳ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿದವು. ಇದನ್ನು ನಿರಾಕರಿಸಲಾಯಿತು. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಮೋದಿ ಸರ್ಕಾರ ತನ್ನ ಹಠಮಾರಿತನ ಮುಂದುವರಿಸಿದೆ. ಸಂಸತ್ತಿನಲ್ಲಿ ಚರ್ಚೆಗಳು ನಡೆಯುತ್ತಿಲ್ಲ” ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಇದನ್ನೂ ಓದಿರಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಆಯ್ಕೆಯ ಹಿನ್ನೆಲೆಯಲ್ಲಿ ಈ ಭಾರಿಯ ಮುಂಗಾರು ಅಧಿವೇಶನ ಮಹತ್ವ ಪಡೆದಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಭಾರತದ ಮೊದಲ ಬುಡಕಟ್ಟು ಮಹಿಳೆ ರಾಷ್ಟ್ರಪತಿಯಾಗಲಿದ್ದಾರೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದ್ದು, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ. ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18ರಂದು ಪ್ರಾರಂಭವಾಯಿತು. ಆಗಸ್ಟ್ 12ರವರೆಗೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...