ತಿಂಗಳ ಹಿಂದೆಯೆ 59 ಚೀನೀ ಆ್ಯಪ್‌ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ ಇದೀಗ ಮತ್ತೇ 47 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ. ಇವುಗಳು ಈ ಹಿಂದೆ ನಿಷೇಧಿಸಲಾದ ಅಪ್ಲಿಕೇಶನ್‌ಗಳ ತದ್ರೂಪುಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಪಟ್ಟ ಮೊಬೈಲ್ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
ಈ ಹಿಂದೆ ನಿಷೇಧಿಸಲಾದ ಅಪ್ಲಿಕೇಶನ್‌ಗಳ ತದ್ರೂಪ ಮಾಡುತ್ತಿರುವುದು ಕಂಡುಬಂದಿದೆ ಎಂದು ಅಧಿಕೃತ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ ಎಂದು ವರದಿಯಾಗಿದೆ.
ನಿಷೇಧಿತ 59 ಅಪ್ಲಿಕೇಶನ್‌ಗಳಿಗೆ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಥವಾ ಉಲ್ಲಂಘನೆಯಾದಲ್ಲಿ ಗಂಭೀರ ಕ್ರಮಗಳನ್ನು ಎದುರಿಸಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನಿರ್ದೇಶಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ಸಚಿವಾಲಯವು ಸಂಬಂಧಪಟ್ಟ ಎಲ್ಲಾ ಕಂಪನಿಗಳಿಗೆ ಪತ್ರ ಬರೆದು, ನೇರವಾಗಿ ಅಥವಾ ಪರೋಕ್ಷವಾಗಿ ಅಪ್ಲಿಕೇಶನ್‌ಗಳನ್ನು ಲಭ್ಯವಾಗುವಂತೆ ಮಾಡುವುದು ಐಟಿ ಕಾಯ್ದೆ ಮತ್ತು ಇತರ ಕಾನೂನುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ.
ಲಡಾಖ್‌ನಲ್ಲಿನ ಗಡಿ ವಿವಾದದ ಮಧ್ಯೆ ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ಟಿಕ್‌ಟಾಕ್, ವೀಚಾಟ್ ಮತ್ತು ಯುಸಿ ಬ್ರೌಸರ್ ಮತ್ತು ಶಿಯೋಮಿಯ ಮಿ ಕಮ್ಯುನಿಟಿ ಸೇರಿದಂತೆ 59 ಚೈನೀಸ್ ಆ್ಯಪ್‌ಗಳನ್ನು ಜೂನ್ 29 ರಂದು ಸರ್ಕಾರ ನಿಷೇಧಿಸಿತ್ತು.
“ಈ ಅಪ್ಲಿಕೇಶನ್‌ಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಪೂರ್ವಾಗ್ರಹ ಪೀಡಿತ ಚಟುವಟಿಕೆಗಳಲ್ಲಿ ತೊಡಗಿವೆ ಎಂಬ ವಿಶ್ವಾಸಾರ್ಹ ಮಾಹಿತಿ ಇರುವುದರಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತ್ತು.
ಈ ಕ್ರಮವು ಕೋಟ್ಯಂತರ ಭಾರತೀಯ ಮೊಬೈಲ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡುತ್ತದೆ ಎಂದು ಸಚಿವಾಲಯದ ಅಭಿಪ್ರಾಯಪಟ್ಟಿದೆ.
ಈ ಹಿಂದೆ ನಿಷೇಧಿಸಿದ ಪಟ್ಟಿಯಲ್ಲಿ ಚೀನೀ ಅಪ್ಲಿಕೇಶನ್‌ಗಳಾದ ಕ್ಲಬ್ ಫ್ಯಾಕ್ಟರಿ, SHAREit, Likee, Mi Video Call (Xiaomi), Weibo, Baidu, BIGO LIVE ಇತ್ಯಾದಿಗಳು ಸೇರಿದ್ದವು.
ಓದಿ: ಕೇವಲ ಆಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ


