Homeರಾಜಕೀಯಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

- Advertisement -
- Advertisement -

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಬಂಡಾಯ ಸಚಿವ ಏಕನಾಥ್ ಶಿಂಧೆ ಇಬ್ಬರೂ ತೀವ್ರ ಹಗ್ಗ ಜಗ್ಗಾಟದಲ್ಲಿ ತೊಡಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ. ಮಹಾವಿಕಸ್ ಅಘಾಡಿ ಸರ್ಕಾರದ ಮೂರು ಮೈತ್ರಿ ಪಕ್ಷಗಳು ತಮ್ಮ ಬೆಂಬಲಿಗ ಶಾಸಕರನ್ನು ರಕ್ಷಿಸಲು ನಾಯಕರ ನಡುವೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ಮಹರಾಷ್ಟ್ರದ ರಾಜಕಾರಣದಲ್ಲಿ ಇಲ್ಲಿವರೆಗೆ ಏನಾಯಿತು ಎಂಬುವುದು ಇಲ್ಲಿದೆ:

  • ಮೈತ್ರಿ ಸರ್ಕಾರದ ಸಚಿವ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಜೂನ್ 20ರ ಸೋಮವಾರದಂದು ಹಲವಾರು ಶಿವಸೇನೆ ಶಾಸಕರೊಂದಿಗೆ ಗುಜರಾತ್‌ನ ಸೂರತ್‌ನಲ್ಲಿರುವ ರೆಸಾರ್ಟ್‌‌ಗೆ ತೆರಳಿದ್ದರು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  • ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ತಮ್ಮ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಮುಂದಾದರೂ, ಈ ಬೆಳವಣಿಗೆ ನಡೆದಿದೆ.
  • ಇದೇ ವೇಳೆ ಪಕ್ಷವು ಏಕನಾಥ್ ಶಿಂಧೆ ಮತ್ತು ಇತರ ಬಂಡಾಯ ಶಾಸಕರೊಂದಿಗೆ ಸಂಪರ್ಕದಲ್ಲಿದೆ, ಅವರು ಪಕ್ಷಕ್ಕೆ ಮರಳುತ್ತಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರದವರೆಗೆ ಹೇಳುತ್ತಿದ್ದರು.
  • ರಾವತ್‌ ಅವರ ಈ ಹೇಳಿಕೆಯನ್ನು ತಳ್ಳಿಹಾಕಿದ ಶಿಂಧೆ, ಬೆಂಬಲಿತ ಶಾಸಕರನ್ನು ಹೊರತುಪಡಿಸಿ ಬೇರೆ ಯಾರೊಂದಿಗೂ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದರು.
  • ಶಿವಸೇನೆಯು ಸೂರತ್ ರೆಸಾರ್ಟ್‌ಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದಂತೆ, ಎಲ್ಲಾ ಬಂಡಾಯ ಶಾಸಕರನ್ನು ಸೂರತ್‌ನಿಂದ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಯಲ್ಲಿರುವ ಹೋಟೆಲ್‌ಗೆ ಶಿಂಧೆ ಬುಧವಾರ ಸ್ಥಳಾಂತರಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

  • ಬೆಳಗ್ಗೆ 7 ಗಂಟೆ ಸುಮಾರಿಗೆ ಬಂಡಾಯ ಶಾಸಕರು ಗುವಾಹಟಿಗೆ ಆಗಮಿಸುವ ಮುನ್ನವೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದರು.
  • ಶಿವಸೇನೆಯ 55 ಶಾಸಕರ ಪೈಕಿ 42 ಶಾಸಕರ ಬೆಂಬಲ ತಮಗೆ ಇದೆ ಎಂದು ಶಿಂಧೆ ಪ್ರತಿಪಾದಿಸಿದ್ದಾರೆ.
  • ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲವನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅವರಿಗೆ ಕನಿಷ್ಠ 37 ಶಾಸಕರ ಬೆಂಬಲ ಬೇಕಾಗುತ್ತದೆ.
  • ಬುಧವಾರ ಸಂಜೆ ಶಿವಸೇನೆಯ ಇಬ್ಬರು ಸೇರಿದಂತೆ ಮತ್ತೆ ನಾಲ್ವರು ಶಾಸಕರು ಶಿಂಧೆ ಪಾಳಯಕ್ಕೆ ಸೇರಿದ್ದಾರೆ. ಇನ್ನೂ ಮೂವರು ಬಂಡಾಯ ಪಾಳಯ ಸೇರುವ ಸಾಧ್ಯತೆ ಇತ್ತು.
  • ಮಹಾವಿಕಾಸ್ ಅಘಾಡಿ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಾವು ಶಿವಸೇನೆಯೊಂದಿಗೆ ಇದ್ದೇವೆ ಎಂದು ಹೇಳಿದ್ದಾರೆ. ಆದರೆ ಬಂಡಾಯವು ಪಕ್ಷದ ಆಂತರಿಕ ವಿಷಯವಾಗಿದ್ದು, ಅದನ್ನು ಪಕ್ಷವೇ ಪರಿಹರಿಸಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

  • ಬಿಜೆಪಿ ತಾನು ಅಧಿಕಾರ ಹಿಡಿಯಲು ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ರೂಪಿಸಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ದೂಷಿಸಿವೆ.
  • ಬಿಕ್ಕಟ್ಟಿನ ಮಧ್ಯೆಯೆ, ಶಿವಸೇನೆ ಮಂಗಳವಾರದಂದು ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿದೆ.
  • ಆದರೆ ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ಪತ್ರ ಬರೆದು, ಏಕನಾಥ್ ಶಿಂಧೆ ಇನ್ನೂ ಕೂಡಾ ಶಾಸಕಾಂಗ ಪಕ್ಷದ ನಾಯಕ ಎಂದು ಪ್ರತಿಪಾದಿಸಿದ್ದಾರೆ.
  • ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹದ ನಡುವೆಯೆ, “ಬಂಡಾಯ ಶಿವಸೇನೆ ಶಾಸಕರು ಬಯಸಿದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಉದ್ಧವ್‌‌ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

  • “ನಾನು ನನ್ನ ರಾಜೀನಾಮೆ ಪತ್ರವನ್ನು ಸಿದ್ಧಪಡಿಸುತ್ತಿದ್ದೇನೆ, ಬಂಡಾಯವೆದ್ದಿರುವವರು ಇಲ್ಲಿಗೆ ಬರಬೇಕು, ಈ ಪತ್ರವನ್ನು ತೆಗೆದುಕೊಂಡು ರಾಜ್ಯಪಾಲರಿಗೆ ಸಲ್ಲಿಸಬೇಕು” ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
  • ಉದ್ಧವ್‌ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕೆಲವೇ ಗಂಟೆಗಳ ನಂತರ, ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದರು.
  • ಉದ್ಧವ್ ಠಾಕ್ರೆ ಈಗ ಉಪನಗರ ಬಾಂದ್ರಾದಲ್ಲಿರುವ ತಮ್ಮ ಕುಟುಂಬದ ನಿವಾಸ ಮಾತೋಶ್ರೀಗೆ ತೆರಳಿದ್ದಾರೆ.
  • ಗುರುವಾರ ಮುಂಜಾನೆ, ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಅಗತ್ಯವಾದ ಶಾಸಕರ ಸಂಖ್ಯೆಯನ್ನು ಏಕನಾಥ್ ಶಿಂಧೆ ಒಟ್ಟುಗೂಡಿಸಿದಂತಿದೆ. ಹೆಚ್ಚಿನ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ ರಾಡಿಸನ್ ಬ್ಲೂ‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಸರ್ಕಾರ ಉಳಿಸಲು ಬೇಕಾದ ಶಾಸಕರ ಸಂಖ್ಯೆ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಬಲವು 287. ಹೀಗಾಗಿ ಸದನದಲ್ಲಿ ವಿಶ್ವಾಸ ಮತದ ಸಂದರ್ಭದಲ್ಲಿ ಅಗತ್ಯವಿರುವ ಬಹುಮತವು 144 ಆಗಿದೆ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಆಡಳಿತ ಒಕ್ಕೂಟವು ಪ್ರಸ್ತುತ 169 ಸ್ಥಾನಗಳನ್ನು ಹೊಂದಿದೆ.

ಒಂದು ವೇಳೆ ಶಿಂಧೆ ನೇತೃತ್ವದ ಶಾಸಕರು ರಾಜೀನಾಮೆ ನೀಡಿದರೆ, ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ. ಶಿವಸೇನೆಯು 55 ಶಾಸಕರನ್ನು ಹೊಂದಿದ್ದು, ಪಕ್ಷಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲು ಉದ್ಧವ್ ಠಾಕ್ರೆ ಅವರ ಪರವಾಗಿ ಕನಿಷ್ಠ 37 ಶಾಸಕರು ಇರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...